ಉತ್ತಮ ಸಮಾಜಕ್ಕಾಗಿ

ಪ್ರಮಾಣಪತ್ರ ವಿತರಣೆ

Certificate Issuing to Employees

0

ಬೆಳಗಾವಿ:(news belgaum) ಮಹಾತ್ಮಾ ಗಾಂದಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2017ರ ಜೂನ್ 12 ರಿಂದ ಸೆಪ್ಟೆಂಬರ್ 9ರವರೆಗೆ ಧಾರವಾಡದ Regional Centre, ANSSIRD & PR  ಸಂಸ್ಥೆಯಲ್ಲಿ 8 ಜನ ಬೇರ್‍ಪೂಟ್ ಟೆಕ್ನಿಷಿಯನ್‍ಗಳಿಗೆ (Barefoot Technician) 90 ದಿನಗಳ ಕಾಲ ಹಮ್ಮಿಕೊಂಡಿದ್ದ ತರಬೇತಿಯಲ್ಲಿ ಪಾಲ್ಗೊಂಡಿದ್ದ ಶಿಬಿರಾರ್ಥಿಗಳಿಗೆ ಇಲ್ಲಿನ ಜಿಲ್ಲಾ News Belgaum-ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆಪಂಚಾಯತ ಸಭಾಂಗಣದಲ್ಲಿ ಗುರುವಾರ (ಫೆ.22) ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಜಿಲ್ಲಾ ಪಂಚಾಯತ ಅಧ್ಯಕ್ಷರಾದ ಶ್ರೀಮತಿ ಆಶಾ ಐಹೊಳೆ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮಚಂದ್ರನ್. ಆರ್. ಅವರು ಶಿಬಿರಾರ್ಥಿಗಳಿಗೆ ಪ್ರಮಾಣಪತ್ರವನ್ನು ವಿತರಿಸಿದರು.
ಯೋಜನೆಯ ಅನುಷ್ಠಾನದಲ್ಲಿ ಯಾವುದೇ ಲೋಪದೋಷಗಳು ಬಾರದಂತೆ ಶೃದ್ಧೆ ಹಾಗೂ ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸಬೇಕೆಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್ ಅವರು ಸಲಹೆ ನೀಡಿದರು.
ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಎಸ್.ಬಿ. ಮುಳ್ಳಳ್ಳಿ, ಯೋಜನಾ ನಿರ್ದೇಶಕರಾದ ಎ.ವಿ. ಹೊಸಮನಿ, ಸಹಾಯಕ ಜಿಲ್ಲಾ ಕಾರ್ಯಕ್ರಮ ಸಂಯೋಜಕರಾದ ಬಸವರಾಜ. ಎನ್ ಮತ್ತು ಜಿಲ್ಲಾ ಐಇಸಿ ಸಂಯೋಜಕರಾದ ಪ್ರಮೋದ ಗೋಡೆಕರ ಸೇರಿದಂತೆ ಇನ್ನಿತರರು ಹಾಜರಿದ್ದರು.Certificate Issuing to Employees

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

 

Leave A Reply

 Click this button or press Ctrl+G to toggle between Kannada and English

Your email address will not be published.