ಉತ್ತಮ ಸಮಾಜಕ್ಕಾಗಿ

ಮಕ್ಕಳ ಸಹಾಯವಾಣಿ ಸಲಹಾ ಸಮಿತಿ ಸಭೆ ಪೋಕ್ಸೋ ಕಾಯ್ದೆಯ ಕುರಿತು ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿ

Children's Helpline Advisory Committee Meeting About Poxo Act: District Deputy Commissioner

0

ಬೆಳಗಾವಿ: (news belagavi)ಪೋಕ್ಸೋ ಕಾಯ್ದೆಯ ಕುರಿತು ಜಿಲ್ಲೆಯ ಎಲ್ಲ ಶಾಲಾ, ಕಾಲೇಜು ಹಾಗೂ ವಸತಿ ನಿಲಯಗಳಲ್ಲಿನ ಮಕ್ಕಳಿಗೆ ಕಾರ್ಯಾಗಾರ ಏರ್ಪಡಿಸುವ ಮೂಲಕ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ ಅವರು ಸೂಚನೆ ನೀಡಿದರು.
ಇಲ್ಲಿನ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಬುಧವಾರ (ಮೇ 23) ಹಮ್ಮಿಕೊಂಡಿದ್ದ ಮಕ್ಕಳ ಸಹಾಯವಾಣಿ ಸಲಹಾ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪೋಕ್ಸೋ ಕಾಯ್ದೆಯಲ್ಲಿ ಇತ್ತೀಚೆಗೆ ಕೆಲವು ಬದಲಾವಣೆಗಳಾಗಿರುವುದರಿಂದ ಈ ಬಗ್ಗೆ ಕಾರ್ಯಾಗಾರಗಳು ಹಾಗೂ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಅಂಗನವಾಡಿಗಳು, ಸರ್ಕಾರಿ ಶಾಲಾ, ಕಾಲೇಜುಗಳು ಸೇರಿದಂತೆ ಖಾಸಗಿ ಶಾಲಾ, ಕಾಲೇಜುಗಳ ಗೋಡೆಯ ಮೇಲೆ ಪೋಕ್ಸೋ ಕಾಯ್ದೆಯ ಕುರಿತು ಮಾಹಿತಿಯನ್ನು ಬರೆಸಬೇಕು ಎಂದು ತಿಳಿಸಿದರು.
News Belgaum-ಮಕ್ಕಳ ಸಹಾಯವಾಣಿ ಸಲಹಾ ಸಮಿತಿ ಸಭೆ ಪೋಕ್ಸೋ ಕಾಯ್ದೆಯ ಕುರಿತು ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿಜಿಲ್ಲಾಧಿಕಾರಿಗಳ ಕಚೇರಿ, ಎಲ್ಲ ಪೊಲೀಸ್ ಠಾಣೆ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಪೋಕ್ಸೋ ಕಾಯ್ದೆ ಹಾಗೂ ಮಕ್ಕಳ ಸಹಾಯವಾಣಿಯ ಕುರಿತು ಗೋಡೆಬರಹ ಬರೆಯಿಸಲು ಜಿಲ್ಲಾಧಿಕಾರಿಗಳು ಸೂಚಿಸಿದರು.
ಜಿಲ್ಲಾ ಪೊಲೀಸ್ ವೆಬ್‍ಸೈಟ್‍ನಲ್ಲಿ ಮಕ್ಕಳ ಸಹಾಯವಾಣಿ 1098 ಕುರಿತು ಮಾಹಿತಿ ಅಳವಡಿಸಬೇಕು. ಬಾಲ್ಯವಿವಾಹ ಹಾಗೂ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸರು ಮಕ್ಕಳ ಸಹಾಯವಾಣಿ ಸಿಬ್ಬಂದಿಗೆ ಅಗತ್ಯ ಸಹಕಾರ ನೀಡಬೇಕು. ಬಾಲ್ಯವಿವಾಹ ಪ್ರಕರಣ ಕಂಡುಬಂದಲ್ಲಿ ಸಂಬಂಧಿಸಿದ ಪೊಲೀಸ್ ಠಾಣೆಯವರು ಎಫ್.ಐ.ಆರ್ ದಾಖಲಿಸಲು ವಿಳಂಬ ಮಾಡಬಾರದು ಎಂದು ಹೇಳಿದರು. ನಿಯಮ ಬಾಹಿರವಾಗಿ ಶಾಲಾ ಮಕ್ಕಳನ್ನು ಆಟೋದಲ್ಲಿ ತುಂಬುವ ಆಟೋ ಚಾಲಕರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಸೂಚಿಸಿದರು.
ನಗರ ಸ್ಥಳೀಯ ಸಂಸ್ಥೆಗಳ ವತಿಯಿಂದ ಪೌರಕಾರ್ಮಿಕರಿಗೆ ಪೋಕ್ಸೋ ಕಾಯ್ದೆ ಹಾಗೂ ಮಕ್ಕಳ ಸಹಾಯವಾಣಿ ಕುರಿತು ಕಾರ್ಯಾಗಾರ ಹಮ್ಮಿಕೊಳ್ಳಬೇಕು. ಕೆ.ಎಂ.ಎಫ್ ಹಾಲಿನ ಪಾಕೆಟ್‍ಗಳ ಮೇಲೆ ಮಕ್ಕಳ ಸಹಾಯವಾಣಿ 1098 ಸಂಖ್ಯೆಯನ್ನು ನಮೂದಿಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮಚಂದ್ರನ್. ಆರ್ ಅವರು ಮಾತನಾಡಿ, ಪೋಕ್ಸೋ ಕಾಯ್ದೆ ಹಾಗೂ ಮಕ್ಕಳ ಸಹಾಯವಾಣಿ ಕುರಿತು ಈಗಾಗಲೇ ಜಿಲ್ಲೆಯ ಅನೇಕ ಗ್ರಾಮ ಪಂಚಾಯತಗಳಲ್ಲಿ ಗೋಡೆಬರಹ ಬರೆಯಿಸಲಾಗಿದೆ. ಉಳಿದ ಗ್ರಾಮ ಪಂಚಾಯತಗಳಲ್ಲಿಯೂ ಬರೆಯಿಸಲು ಸೂಚಿಸಲಾಗುವುದು ಎಂದು ತಿಳಿಸಿದರು.
ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಗಳಲ್ಲಿ ಪ್ರತಿವರ್ಷ ನವೆಂಬರ್ ತಿಂಗಳಂದು ಮಕ್ಕಳ ಗ್ರಾಮಸಭೆಯನ್ನು ಏರ್ಪಡಿಸಲಾಗುತ್ತಿದೆ. ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ತಮ್ಮ ವ್ಯಾಪ್ತಿಯ ಗ್ರಾಮಗಳಲ್ಲಿ ನಡೆಯುವ ಬಾಲ್ಯವಿವಾಹಗಳನ್ನು ತಡೆಯುವಂತೆ ನಿರ್ದೇಶನ ನೀಡಲಾಗುವುದು ಎಂದು ಹೇಳಿದರು.

ಸಹಾಯವಾಣಿ ಕೇಂದ್ರದಲ್ಲಿ 750 ಪ್ರಕರಣ ದಾಖಲು:
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಅನಂತ ಲೋಬೊ ಅವರು ಮಾತನಾಡಿ, ಯುನೈಟೆಡ್ ಸೋಷಿಯಲ್ ವೆಲ್ಪೇರ್ ಅಸೋಷಿಯೇಶನ್ ಸಂಸ್ಥೆ ವತಿಯಿಂದ ಮಕ್ಕಳ ಸಹಾಯವಾಣಿ ಕೇಂದ್ರವನ್ನು ನಿರ್ವಹಿಸಲಾಗುತ್ತಿದೆ. 2017ರ ಫೆಬ್ರುವರಿಯಿಂದ 2018ರ ಏಪ್ರಿಲ್ ವರೆಗೆ ಮಕ್ಕಳ ಸಹಾಯವಾಣಿ ಕೇಂದ್ರದಲ್ಲಿ 750 ಪ್ರಕರಣಗಳು ದಾಖಲಾಗಿದ್ದು, 202 ಮಕ್ಕಳನ್ನು ಮಕ್ಕಳ ಕಲ್ಯಾಣ ಸಲಹಾ ಸಮಿತಿಗೆ ಒಪ್ಪಿಸಲಾಗಿದೆ ಎಂದು ತಿಳಿಸಿದರು.
ಕೆ.ಎಲ್.ಇ ಆಸ್ಪತ್ರೆಯ ಮಕ್ಕಳ ವಿಭಾಗದ ಮುಖ್ಯಸ್ಥೆ ಡಾ. ಸುಜಾತಾ ಜಾಲಿ ಅವರು ಮಾತನಾಡಿ, ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಕ್ಕಳಿಗೆ ಕೆ.ಎಲ್.ಇ ಆಸ್ಪತ್ರೆಯಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಮಕ್ಕಳ ಮೇಲಿನ ದೌರ್ಜನ್ಯದ ಕುರಿತು ತಿಳಿವಳಿಕೆ ಕಾರ್ಯಕ್ರಮಗಳನ್ನು ಏರ್ಪಡಿಸಿದರೆ ಕೆ.ಎಲ್.ಇ ಆಸ್ಪತ್ರೆಯ ವತಿಯಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದು ಹೇಳಿದರು.
ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶೇಖರ್.ಎಚ್.ಟಿ, ಮಕ್ಕಳ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಬಿ.ಒ. ತಿಪ್ಪೇಸ್ವಾಮಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮುನಿರಾಜು, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.