ಉತ್ತಮ ಸಮಾಜಕ್ಕಾಗಿ

ನಗರದಲ್ಲಿ ಮೇ 16 ರಿಂದ 18 ರವರೆಗೆ ನಿಷೇಧಾಜ್ಞೆ

The city is banned from May 16 to May 18

0

ನಗರದಲ್ಲಿ ಮೇ 16 ರಿಂದ 18 ರವರೆಗೆ ನಿಷೇಧಾಜ್ಞೆ
ಬೆಳಗಾವಿ: (news belagavi)ನಗರದಲ್ಲಿ ಮೇ 15 ರಂದು ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ನಂತರ ಕಲ್ಲು ತೂರಾಟ ನಡೆದು, ಶಾಂತಿ ಭಂಗ ಉಂಟಾಗಿರುವುದರಿಂದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಬೆಳಗಾವಿ ನಗರ ವ್ಯಾಪ್ತಿಯಲ್ಲಿ ಮೇ 16 ರಂದು ಬೆಳಿಗ್ಗೆ 6 ಗಂಟೆಯಿಂದ ಮೇ 18 ರಂದು ರಾತ್ರಿ 8 ಗಂಟೆಯವರೆಗೆ ಸಿ.ಆರ್.ಪಿ.ಸಿ 1973 ಕಲಂ 144 ರನ್ವಯ ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಎಂ. ಚಂದ್ರಶೇಖರ ಅವರು ನಿಷೇಧಾಜ್ಞೆಯನ್ನು ಹೊರಡಿಸಿದ್ದಾರೆ.

ನಿಷೇಧಾಜ್ಞೆಯ ಷರತ್ತುಗಳು ಈ ಕೆಳಗಿನಂತಿವೆ.
• ಬೆಳಗಾವಿ ನಗರ ವ್ಯಾಪ್ತಿಯಲ್ಲಿ ಮೆರವಣಿಗೆ ಅಥವಾ ಸಭೆ, ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಒಂದು ವೇಳೆ ಅವಶ್ಯಕ ಇದ್ದಲ್ಲಿ ಕಡ್ಡಾಯವಾಗಿ ಪೊಲೀಸ್ ಇಲಾಖೆಯ ಅನುಮತಿಯನ್ನು ಪಡೆಯಬೇಕು.
• ಮೆರವಣಿಗೆ ಸಂದರ್ಭದಲ್ಲಿ ವಾಹನಗಳನ್ನು ಬಳಸತಕ್ಕದ್ದಲ್ಲ.
• ಬೆಳಗಾವಿ ನಗರ ವ್ಯಾಪ್ತಿಯಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇದಿಸಲಾಗಿದೆ.
• ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ದೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನುಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರಗಳನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.
• ಕಲ್ಲುಗಳನ್ನು, ಕ್ಷಾರಪದಾರ್ಥ ಇಲ್ಲವೆ ಸ್ಪೋಟಕ ವಸ್ತುಗಳು ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ.
• ಕಲ್ಲುಗಳನ್ನು ಮತ್ತು ಎಸೆಯುವಂತಹ ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.
• ಮನುಷ್ಯ ಶವಗಳ ಅಥವಾ ಆಕೃತಿ ಅಥವಾ ಪ್ರತಿಮೆಗಳನ್ನು ಪ್ರದರ್ಶನ ಮಾಡುವುದನ್ನು ಪ್ರತಿಬಂಧಿಸಲಾಗಿದೆ.
• ಯಾವುದೇ ರೀತಿ ವಿಜಯೋತ್ಸವ, ಸಾರ್ವಜನಿಕ ಮೆರವಣಿಗೆ, ಸಾರ್ವಜನಿಕ, ರಾಜಕೀಯ ಸಭೆ, ಸಮಾರಂಭಗಳನ್ನು ನಡೆಸುವುದನ್ನು ನಿಷೇಧಿಸಿದೆ.
• ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದಶಿಸುವುದಾಗಲಿ ಹಾಗೂ ಸಾರ್ವಜನಿಕರ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.
• ಯಾವುದೇ ವ್ಯಕ್ತಿ ಸಾರ್ವಜನಿಕವಾಗಿ ಮೇಲೆ ವಿವರಿಸಿದ ಮಾರಕಾಸ್ತ್ರಗಳು, ಸ್ಪೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡುಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಯಾವುದೇ ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂತಹ ಮಾರಕಾಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಅಲ್ಲದೇ ಸಂಬಂದಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು.
• ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಯಾವತ್ತು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ದಕ್ಕೆ ತರದಂತೆ ನಿಯಮಗಳನ್ನು ಪಾಲಿಸಬೇಕು.
ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 188ರ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತರಾದ ಎಂ. ಚಂದ್ರಶೇಖರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತೋಟಗಾರಿಕೆ ತರಬೇತಿ: ಅರ್ಜಿ ಆಹ್ವಾನ
ಬೆಳಗಾವಿ: ತೋಟಗಾರಿಕೆ ಇಲಾಖೆಯ ತೋಟಗಾರಿಕೆ ಪ್ರಾಯೋಗಿಕ ತರಬೇತಿ ಯೋಜನೆಯಡಿಯಲ್ಲಿ 2018-19ನೇ ಸಾಲಿನಲ್ಲಿ ಬೆಳಗಾವಿ ಜಿಲ್ಲೆಯ ಅಭ್ಯರ್ಥಿಗಳಿಗೆ ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಜೂನ್ 1 ರಿಂದ ಮಾರ್ಚ್ 30 ರವರೆಗೆ 10 ತಿಂಗಳ ಕಾಲ ತೋಟಗಾರಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಉತ್ತೀರ್ಣರಾಗಿರಬೇಕು. ತರಬೇತಿ ಬಯಸುವ ಅಭ್ಯರ್ಥಿಯ ತಂದೆ, ತಾಯಿ, ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು ಈ ಬಗ್ಗೆ ಪಹಣಿಯನ್ನು ನೀಡುವುದು ಕಡ್ಡಾಯವಾಗಿರುತ್ತದೆ.
ಸಾಮಾನ್ಯ ವರ್ಗದ ಅಭ್ಯರ್ಥಿಗೆ ಕನಿಷ್ಠ ವಯೋಮಿತಿ 18 ವರ್ಷಗಳು ಹಾಗೂ ಗರಿಷ್ಠ 30 ವರ್ಷ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ವರ್ಷಗಳು ಹಾಗೂ ಗರಿಷ್ಠ 33 ವರ್ಷ.
ಅರ್ಜಿಗಳನ್ನು ಮೇ 16 ರಿಂದ ನೀಡಲಾಗುವುದು, ಮೇ 24 ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ. ಮೇ 26 ರಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಬೆಳಗಾವಿ ಅವರ ಕಚೇರಿಯಲ್ಲಿ ಬೆಳಿಗ್ಗೆ 11 ಗಂಟೆಗೆ ಸಂದರ್ಶನ ಜರುಗುವುದು. ಅಭ್ಯರ್ಥಿಗಳು ಮೂಲ ದಾಖಲಾತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಈ ಸಂಬಂಧವಾಗಿ ಈ ಕಚೇರಿಯಿಂದ ಮತ್ತೆ ಯಾವುದೇ ಪತ್ರ ವ್ಯವಹಾರ ಮಾಡಲಾಗುವುದಿಲ್ಲ.
ಅರ್ಜಿಗಳನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಬೆಳಗಾವಿ ಅವರ ಕಚೇರಿಯಲ್ಲಿ ಅಥವಾ ಇಲಾಖೆಯ website www.horticulture.kar.nic.in ನಲ್ಲಿ ಪಡೆಯಬಹುದು.
ಭರ್ತಿ ಮಾಡಿದ ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಎಲ್.ಸಿ, ಜಾತಿ ಪ್ರಮಾಣ ಪತ್ರ, ಸ್ವಂತ ಜಮೀನಿನ ಉತಾರ, ಹಿಡುವಳಿ ದೃಢೀಕರಣ ಪತ್ರಗಳನ್ನು ಲಗತ್ತಿಸಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಬೆಳಗಾವಿ ಅವರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಸಹಾಯಕ ತೋಟಗಾರಿಕೆ ನಿರ್ದೇಶಕರು, ಬೆಳಗಾವಿ (ಜಿ.ಪಂ) ಅವರ ಕಚೇರಿ ಅಥವಾ ದೂ: 0831-2451422, 08333-263008 ಗೆ ಸಂಪರ್ಕಿಸಬೇಕೆಂದು ಜಿಲ್ಲಾ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.  

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: