ಉತ್ತಮ ಸಮಾಜಕ್ಕಾಗಿ

ಕೆಡಿಪಿ ಸಭೆಯಲ್ಲಿ ಕೊಳವೆ ಬಾವಿಗಳನ್ನು ಮುಚ್ಚಿಸಿ-ಸಿಇಒ ರಾಮಚಂದ್ರನ್

0

ಬೆಳಗಾವಿ:tarunkranti ಜಿಲ್ಲಾ ಪಂಚಾಯತ ಕೆಡಿಪಿ ಸಭೆ ವಿಫಲ ಕೊಳವೆ ಬಾವಿಗಳನ್ನು ಮುಚ್ಚಿಸಿ-ಸಿಇಒ   ರಾಮಚಂದ್ರನ್ ಇಲ್ಲಿನ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಬುಧವಾರ (ಜ.10) ಜಿಲ್ಲಾ ಪಂಚಾಯತ ಕೆಡಿಪಿ ಸಭೆ ಜರುಗಿತು.
ಪ್ರಕಟಣೆ ಅಂತರ್ಜಲ ಅತಿಬಳಕೆ; ಕೊಳವೆ ಬಾವಿಗೆ ಅನುಮತಿ ಕಡ್ಡಾಯ- Tarun krantiಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಮಚಂದ್ರನ್. ಆರ್ ಅವರು ಮಾತನಾಡಿ, ಸಂಬಂಧಪಟ್ಟ ಅಧಿಕಾರಿಗಳ ಪೂರ್ವಾನುಮತಿ ಪಡೆಯದೇ ಕೊಳವೆ ಬಾವಿಗಳನ್ನು ಕೊರೆಸುವಂತಿಲ್ಲ. ಆದ್ಯತೆಯ ಮೇರೆಗೆ ಮಾತ್ರ ಕೊಳವೆ ಬಾವಿಗಳನ್ನು ಕೊರೆಸಬೇಕು ಎಂದು ಸೂಚಿಸಿದರು.
ಕಳೆದ ವರ್ಷ ಅಥಣಿ ಸಮೀಪದ ಝುಂಜರವಾಡದಲ್ಲಿ ನಡೆದ ಕೊಳವೆ ಬಾವಿ ದುರಂತ ಜಿಲ್ಲೆಗೆ ಕಪ್ಪುಚುಕ್ಕೆಯಾಗಿದ್ದು, ಇನ್ನು ಮುಂದೆ ಆ ರೀತಿಯ ಯಾವುದೇ ದುರ್ಘಟನೆಗಳು ನಡೆಯಬಾರದು. ಈ ನಿಟ್ಟಿನಲ್ಲಿ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ವಿಫಲ ಕೊಳವೆ ಬಾವಿಗಳನ್ನು ಮುಚ್ಚುವಲ್ಲಿ ನಿರ್ಲಕ್ಷ ತೋರಿದರೆ ಅಂತಹ ಮಾಲಿಕರಿಗೆ 1 ಲಕ್ಷ ದಂಡ ಹಾಗೂ 6 ತಿಂಗಳು ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಆದ್ದರಿಂದ ಎಲ್ಲರೂ ಎಚ್ಚರಿಕೆ ವಹಿಸುವುದು ಅಗತ್ಯ ಎಂದು ತಿಳಿಸಿದರು.
ಶಾಲೆ, ವಸತಿ ನಿಲಯ, ಆಸ್ಪತ್ರೆಗಳು ಹಾಗೂ ಇನ್ನಿತರ ಪ್ರದೇಶಗಳಲ್ಲಿ ಕೊಳವೆ ಬಾವಿಗಳಿಂದ ಮಕ್ಕಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಜಿಲ್ಲೆಯ ಎಲ್ಲ ಪ್ರದೇಶಗಳಲ್ಲಿ ಜನರಿಗೆ ಕುಡಿಯುವ ನೀರು ಸಮರ್ಪಕವಾಗಿ ಸಿಗುವಂತೆ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.
ಜಿಲ್ಲೆಯ ರಾಯಬಾಗನಲ್ಲಿ ಜನೇವರಿ 12 ರಂದು ‘ರಾಷ್ಟ್ರೀಯ ಯುವಕರ ದಿನಾಚರಣೆ’ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಲಿದ್ದಾರೆ. ಅಂದು ಆ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಸೇರುತ್ತಾರೆ. ಆದ್ದರಿಂದ ಆರೋಗ್ಯ ಇಲಾಖೆಯವರು ಅಲ್ಲಿ ರಕ್ತದಾನ, ನೇತ್ರದಾನ ಹಾಗೂ ಇನ್ನಿತರ ಕಾರ್ಯಕ್ರಮಗಳ ಕುರಿತು ಯುವಕರಲ್ಲಿ ಅರಿವು ಮೂಡಿಸಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸಿಇಒ ಅವರು ಸೂಚನೆ ನೀಡಿದರು.
ಹೆರಿಗೆ ಭತ್ಯೆಯನ್ನು ಸಮರ್ಪಕವಾಗಿ ವಿತರಣೆ ಮಾಡಿಲ್ಲ ಎಂದು ಸಿಇಒ ರಾಮಚಂದ್ರನ್ ಅವರು ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು. ಅಧಿಕಾರಿಗಳು ಆಶಾ ಕಾರ್ಯಕರ್ತೆಯರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು. ಜನೇವರಿ ತಿಂಗಳೊಳಗಾಗಿ ಬ್ಯಾಂಕ್ ಖಾತೆ ಹೊಂದಿಲ್ಲದ ಜಿಲ್ಲೆಯ ಎಲ್ಲ ಅರ್ಹ ಬಾಣಂತಿಯರ (ತಾಯಂದಿರ) ಬ್ಯಾಂಕ್ ಖಾತೆಗಳನ್ನು ತೆರೆಸಿ, ಹೆರಿಗೆ ಭತ್ಯೆಯನ್ನು ಜಮಾ ಮಾಡಬೇಕು ಎಂದು ಹೇಳಿದರು.
ವಸತಿ ಯೋಜನೆಯಲ್ಲಿ ಜಿಲ್ಲೆಯು 9ನೇ ಸ್ಥಾನವನ್ನು ಹೊಂದಿದೆ. ಜಿಲ್ಲೆ ಪ್ರಥಮ ಸ್ಥಾನವನ್ನು ಪಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು. ಈ ಬಗ್ಗೆ ಬಡವರಿಗೆ ಮಾಹಿತಿ ನೀಡಿ, ಅರ್ಹರನ್ನು ಗುರುತಿಸಿ ಮನೆ ಕಟ್ಟಸಿಕೊಳ್ಳುವ ವ್ಯವಸ್ಥೆ ಮಾಡಬೇಕು ಹಾಗೂ ಮನೆಗಳು ತ್ವರಿತಗತಿಯಲ್ಲಿ ನಿರ್ಮಾಣವಾಗುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಮನೆಗಳನ್ನು ನಿರ್ಮಿಸಲು ನರೇಗಾ ಯೋಜನೆಯಡಿ 90 ಮಾನವ ದಿನಗಳನ್ನು ಸೃಷ್ಠಿಸಿ, ಕೂಲಿಯನ್ನು ನೀಡಬಹುದಾಗಿದೆ. ನರೇಗಾ ಯೋಜನೆಯಡಿ ಶಾಲೆಗಳಲ್ಲಿ ಶೌಚಾಲಯ ಹಾಗೂ ಕಂಪೌಂಡಗಳನ್ನು ನಿರ್ಮಿಸಬಹುದಾಗಿದೆ. ಇದಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಪ್ಪಿಗೆ ನೀಡಿವೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಿಸಿ, ಕಾರ್ಯ ಕೈಗೊಳ್ಳಬೇಕು ಎಂದು ಹೇಳಿದರು.
ಮಾತೃಪೂರ್ಣ ಯೋಜನೆಗಳಲ್ಲಿ ಕೆಲವು ಅಡೆತಡೆಗಳು ಆಗುತ್ತಿರುವ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗಿತ್ತು, ಸರ್ಕಾರ ಇದನ್ನು ಪರಿಶೀಲಿಸಿ ಕೆಲವು ವಿನಾಯತಿಗಳನ್ನು ನೀಡಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಕೆಡಿಪಿ ಸಭೆಯಲ್ಲಿ ಕೊಳವೆ ಬಾವಿಗಳನ್ನು ಮುಚ್ಚಿಸಿ-ಸಿಇಒ ರಾಮಚಂದ್ರನ್- Tarun krantiಮುಖ್ಯಮಂತ್ರಿಗಳ ಕೌಶಲ್ಯಾಭಿವೃದ್ಧಿ ತರಬೇತಿ ಯೋಜನೆಯಡಿ ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸಲು ಯುವಕರಿಗಾಗಿ ವಿವಿಧ ಕಾರ್ಯಕ್ರಮಗಳನ್ನು ಶೀಘ್ರವಾಗಿ ಹಮ್ಮಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳ ‘ಡಿ ಗ್ರೂಫ್’ನ ಸಿಬ್ಬಂದಿಗೆ ಪ್ರತಿ ತಿಂಗಳು ವೇತನ ದೊರೆಯುವಂತೆ ಅಧಿಕಾರಿಗಳು ಕ್ರಮಕೈಗೊಳ್ಳಬೇಕು. ಕನಿಷ್ಠ ವೇತನದ ಅಡಿಯಲ್ಲಿ ನಿಗಧಿಪಡಿಸಿರುವ ಪ್ರಕಾರ ವೇತನ ನೀಡಬೇಕು ಎಂದು ತಿಳಿಸಿದರು.
ಜಿಲ್ಲೆಯ ಪ್ರತಿಯೊಂದು ನ್ಯಾಯಬೆಲೆ ಅಂಗಡಿಗಳ ಏಜೆಂಟರು ಕಡ್ಡಾಯವಾಗಿ ಪಿಒಎಸ್ ಯಂತ್ರಗಳನ್ನು ಖರೀದಿಸಿ, ಅಳವಡಿಸಬೇಕು. ಕಳೆದ ಡಿಸೆಂಬರ್.1 ರಿಂದ ಮುಖ್ಯಮಂತ್ರಿಗಳ ಅನಿಲ ಭಾಗ್ಯ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಈ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಜನೇವರಿ 28 ರಂದು ಪಲ್ಸ್ ಪೋಲಿಯೋ ಅಭಿಯಾನ ಹಾಗೂ ಪೆಬ್ರುವರಿ 10 ರಂದು ಜಂತುಹುಳು ನಿವಾರಣಾ ದಿನಾಚರಣೆ ಅಭಿಯಾನ ನಡೆಯಲಿವೆ. ಈ ಬಗ್ಗೆ ಮುಂಚಿತವಾಗಿಯೇ ಪಾಲಕರು ಹಾಗೂ ಮಕ್ಕಳಲ್ಲಿ ಅರಿವು ಮೂಡಿಸಬೇಕು. ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯತ ಅಧ್ಯಕ್ಷರಾದ ಶ್ರೀಮತಿ ಆಶಾ ಐಹೊಳೆ ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಹಾಗೂ ನೀರಿನ ಸಂರಕ್ಷಣೆ ಕೈಗೊಳ್ಳಲು ಇಂಗು ಗುಂಡಿಗಳನ್ನು ನಿರ್ಮಿಸುವ ಕುರಿತು ತಾವು ಚಿಂತಿಸಿದ್ದು, ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಶಿಕ್ಷಣ ಇಲಾಖೆಯ ಅಧಿಕಾರಿಗಳು ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ಪ್ರತಿ ಶನಿವಾರದಂದು ಬ್ಯಾಗ್ ರಹಿತ ದಿನವನ್ನಾಗಿ ಆಚರಿಸಲು ಕ್ರಮಕೈಗೊಳ್ಳಬೇಕು. ಇದರಿಂದ ಮಕ್ಕಳು ವಿವಿಧ ಸಾಂಸ್ಕøತಿಕ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಂಡು ಒತ್ತಡವನ್ನು ನಿವಾರಣೆ ಮಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ನಿರುಪಯುಕ್ತ ವಸ್ತುಗಳನ್ನು ಮರುಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಅಗತ್ಯ ವ್ಯವಸ್ಥೆ ಮಾಡಬೇಕು ಎಂದರು.
ಜಿಲ್ಲೆಯಲ್ಲಿ ಅಕ್ಷರ ದಾಸೋಹ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಂಡಿದೆ. ಆದರೆ ಅಕ್ಷರ ದಾಸೋಹ ಯೋಜನೆಯಿಂದ ಸ್ವಲ್ಪ ಪ್ರಮಾಣದಲ್ಲಿ ಆಹಾರ ವ್ಯರ್ಥವಾಗುತ್ತಿದ್ದು, ಉಳಿದ ಆಹಾರವನ್ನು ಎಸೆಯದೇ ಅದನ್ನು ನಿರ್ಗತಿಕರಿಗೆ ಮತ್ತು ಆಹಾರ ಇಲ್ಲದವರಿಗೆ ವಿತರಿಸುವ ವ್ಯವಸ್ಥೆ ಮಾಡಬೇಕಿದೆ ಎಂದು ತಿಳಿಸಿದರು.
ಸಭೆಗೂ ಮುಂಚೆ ಜಿಲ್ಲಾ ಪಂಚಾಯತ ಅಧ್ಯಕ್ಷೆ ಶ್ರೀಮತಿ ಆಶಾ ಐಹೊಳೆಯವರು ಸ್ವತಃ ತಾವೇ ನಾಡಗೀತೆಯನ್ನು ಹಾಡಿ, ಕನ್ನಡ ಪ್ರೇಮವನ್ನು ಮರೆದರು. ಜಿಲ್ಲಾ ಪಂಚಾಯತ ಉಪಾಧ್ಯಕ್ಷರಾದ ಅರುಣ ಕಟಾಂಬಳೆ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆಹಾರ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತನ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Leave A Reply

 Click this button or press Ctrl+G to toggle between Kannada and English

Your email address will not be published.