ಉತ್ತಮ ಸಮಾಜಕ್ಕಾಗಿ

ನೀತಿ ಸಂಹಿತೆ ಉಲ್ಲಂಘನೆ: ಪ್ರಕರಣ ದಾಖಲು

Code of Conduct Violation: Case Record

0

ಬೆಳಗಾವಿ:(news belagavi) ಹುಕ್ಕೇರಿ ವಿಧಾನಸಭಾ ಮತಕ್ಷೇತ್ರದ ಬುಗುಟೆ ಆಲೂರ ಚೆಕ್‍ಪೋಸ್ಟ್‍ನಲ್ಲಿ ಏ.10 ರಂದು ಪ್ಲಾಯಿಂಗ್ ಸ್ಕ್ವಾಡ್ ತಂಡದವರು ದಾಳಿ ನಡೆಸಿ ರೂ.1 ಲಕ್ಷ ಹಣ ಹಾಗೂ ರೂ.8 ಲಕ್ಷ ಮೌಲ್ಯದ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಎಫ್‍ಐಆರ್ ನಂ.132/2017-18 ರಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ನೀತಿನ. ಮಂಗೇಶ. ಸಾವಂತ, ಸಮೀರ. ದಿನಕರ. ಕಲ್ಯಾಣಕರ, ಎಂಬುವವರ ಮೇಲೆ ಪ್ರಕರಣ ದಾಖಲಾಗಿದೆ.
ಏ.10 ರಂದು ಬೆಳಗಾವಿ ಗ್ರಾಮೀಣ ವಿಧಾನಸಭಾ ಮತಕ್ಷೇತ್ರದ ಉಚಗಾಂವ ಗ್ರಾಮದಲ್ಲಿ ಬೆಳಗಾವಿ ಉತ್ತರ ವಲಯದ ಅಬಕಾರಿ ತಂಡದವರು ದಾಳಿ ನಡೆಸಿ ರೂ.4820 ಮೌಲ್ಯದ 16.5 ಲೀ. ಮದ್ಯ ಹಾಗೂ ರೂ.30 ಸಾವಿರ ಮೌಲ್ಯದ ಹೊಂಡಾ ಯುನಿಕಾರ್ಣ ಬೈಕ್‍ನ್ನು ವಶಪಡಿಸಿಕೊಂಡಿದ್ದಾರೆ. ಎಫ್‍ಐಆರ್ ನಂ.61/2017-18 ರಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಸೋಮನಾಥ ಬಾಳೆಕುಂದ್ರಿ ಎಂಬುವವರ ಮೇಲೆ ಪ್ರಕರಣ ದಾಖಲಾಗಿದೆ.
ಏ.10 ರಂದು ನಿಪ್ಪಾಣಿ ವಿಧಾನಸಭಾ ಮತಕ್ಷೇತ್ರದ ಬೋಜ ಗ್ರಾಮದಲ್ಲಿ ಚಿಕ್ಕೋಡಿ ವಲಯ ಅಬಕಾರಿ ನಿರೀಕ್ಷಕರ ತಂಡದವರು ದಾಳಿ ನಡೆಸಿ ರೂ.2013 ಮೌಲ್ಯದ 6.9 ಲೀ. ಮದ್ಯ ಹಾಗೂ ರೂ. 25,000 ಮೌಲ್ಯದ ಹಿರೋ ಹೊಂಡಾ ಸ್ಪ್ಲೆಂಡರ್ ಬೈಕ್‍ನ್ನು ವಶಪಡಿಸಿಕೊಳ್ಳಲಾಗಿದೆ. ಎಫ್‍ಐಆರ್ ನಂ.66/2017-18 ರಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ.
ಏ.10 ರಂದು ಬೆಳಗಾವಿ ಗ್ರಾಮೀಣ ವಿಧಾನಸಭಾ ಮತಕ್ಷೇತ್ರದ ನಂದಿಹಳ್ಳಿ ಗ್ರಾಮದಲ್ಲಿ ಪ್ಲಾಯಿಂಗ್ ಸ್ಕ್ವಾಡ್ ತಂಡದವರು ದಾಳಿ ನಡೆಸಿ, ನೀತಿ ಸಂಹಿತೆ ಉಲ್ಲಂಘನೆ ಸಂಬಂಧವಾಗಿ ರೂ.400 ಮೌಲ್ಯದ 4 ಟೀ-ಶರ್ಟ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಎಫ್‍ಐಆರ್ ನಂ.87/2018 ರಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ. ಅನಂತ ಬೊಂಗಾಳೆ, ನಾಗೇಂದ್ರ ಕೇರಿಮನಿ, ಹನಮಂತ ಕಮನಾಚೆ, ದತ್ತಾತ್ರೇಯ ಪಾಟೀಲ ಎಂಬುವವರ ಮೇಲೆ ಪ್ರಕರಣ ದಾಖಲಾಗಿದೆ.

ಚುನಾವಣಾ ನೀತಿ ಸಂಹಿತೆ ಘೋಷಣೆಯಾದಾಗಿನಿಂದ ಇಂದಿನವರೆಗೆ (ಏ.11) ಒಟ್ಟು ರೂ.2,10,656 ಮೌಲ್ಯದ 984.135 ಲೀ. ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟು ರೂ.37,17,670 ಹಣವನ್ನು ವಶಪಡಿಸಿಕೊಳ್ಳಲಾಗಿದೆ. ರೂ.2,72,97,760 ಮೌಲ್ಯದ ಸಲಕರಣೆ ಹಾಗೂ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಒಟ್ಟು 35 ವಾಹನಗಳನ್ನು ಜಪ್ತಿ ಮಾಡಲಾಗಿದೆ.
ಬೆಳಗಾವಿ ನಗರ ಪ್ರದೇಶದಲ್ಲಿ 14 ಆರೋಪಿಗಳು ಹಾಗೂ ಬೆಳಗಾವಿ ಗ್ರಾಮೀಣ ಪ್ರದೇಶದಲ್ಲಿ 36 ಆರೋಪಿಗಳನ್ನು ಈವರೆಗೆ ಬಂಧಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. Code of Conduct Violation: Case Record

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.