ಉತ್ತಮ ಸಮಾಜಕ್ಕಾಗಿ

ಶೀಘ್ರ ಸ್ಥಳೀಯ ಮಟ್ಟದಲ್ಲಿ ಸಮನ್ವಯ ಸಮಿತಿ ರಚನೆ: ಸಚಿವ ರಮೇಶ ಜಾರಕಿಹೊಳಿ

Component Committee on Quick Local Level: Minister Ramesh Jarakiholi

0

ಬೆಳಗಾವಿ:  (news belagaviಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗುವ ವಿವಿಧ ಯೋಜನೆಗಳ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಅನುಕೂಲವಾಗುವಂತೆ ನಗರ ಸ್ಥಳೀಯ ಸಂಸ್ಥೆಗಳು, ಕುಡಿಯುವ ನೀರು ಸರಬರಾಜು ಮತು ್ತ ಒಳಚರಂಡಿ ಮಂಡಳಿ ಹಾಗೂ ಕೆ.ಯು.ಐ.ಡಿ.ಎಫ್.ಸಿ ಯನ್ನೊಳಗೊಂಡ ಸಮನ್ವಯ ಸಮಿತಿಯನ್ನು ಸ್ಥಳೀಯ ಮಟ್ಟದಲ್ಲಿ ರಚಿಸುವ ಕುರಿತು ಶೀಘ್ರದಲ್ಲೇ ಉನ್ನತ ಮಟ್ಟದ ಸಭೆ ಕರೆದು ಪರಿಶೀಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೊಳಿ ಅವರು ತಿಳಿಸಿದರು.

ಶೀಘ್ರ ಸ್ಥಳೀಯ ಮಟ್ಟದಲ್ಲಿ ಸಮನ್ವಯ ಸಮಿತಿ ರಚನೆ: ಸಚಿವ ರಮೇಶ ಜಾರಕಿಹೊಳಿ- Tarun kranti 1
ಇಲ್ಲಿನ ಸುವರ್ಣ ವಿಧಾನಸೌಧದ ಸೆಂಟ್ರಲ್ ಸಭಾಂಗಣದಲ್ಲಿ ಶನಿವಾರ  ಹಮ್ಮಿಕೊಂಡಿದ್ದ ಪೌರಾಡಳಿತ ಇಲಾಖೆಯ ಬೆಳಗಾವಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಆರ್.ಬಿ. ತಿಮ್ಮಾಪೂರ ಅವರು ಬಾಗಲಕೋಟೆ ಜಿಲ್ಲೆಯ ಮುಧೋಳ ನಗರಸಭೆ ಸಭೆ, ಕುಡಿಯುವ ನೀರು ಸರಬರಾಜು ಮತು ್ತ ಒಳಚರಂಡಿ ಮಂಡಳಿ ಹಾಗೂ ಕೆ.ಯು.ಐ.ಡಿ.ಎಫ್.ಸಿ ನಡುವೆ ಸಮನ್ವಯ ಇಲ್ಲ ಎಂದು ವಿಷಯ ಪ್ರಸ್ತಾಪಿಸಿದರು.
ಈ ಮಂಡಳಿಗಳ ನಡುವಿನ ಸಮನ್ವಯದ ಕೊರತೆಯಿಂದ ಮುಧೋಳ ನಗರದಲಿ ್ಲ ವಿವಿಧ ಯೋಜನೆಗಳು ನನೆಗುದಿಗೆ
ಬಿದ್ದಿವೆ. ಆದ್ದರಿಂದ ಈ ಮಂಡಳಿಗಳನ್ನೊಳಗೊಂಡ ಸಮನ್ವಯ ಸಮಿತಿಯನ್ನು ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ರಚಿಸಬೇಕೆಂದು ಸಚಿವ ರಮೇಶ ಜಾರಕಿಹೊಳಿ ಅವರನ್ನು ಒತ್ತಾಯಿಸಿದರು.
ಸಚಿವ ರಮೇಶ ಜಾರಕಿಹೊಳಿ ಅವರು ಇದಕ್ಕೆ ಸ್ಪಂದಿಸಿ, ಈ ಸಮಸ್ಯೆ ರಾಜ್ಯಾದ್ಯಂತ ಎಲ್ಲ ನಗರಗಳಲ್ಲಿ ಇದ್ದು,
ಸಮಸ್ಯೆಯನ್ನು ಪರಿಹರಿಸಲು ಶೀಘ್ರವೇ ಮೂರು ಮಂಡಳಿಗಳನ್ನೊಳಗೊಂಡ ಸಮಿತಿಯನ್ನು ಸ್ಥಳೀಯ ಮಟ್ಟದಲ್ಲಿ ರಚಿಸಲು ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

ಶೀಘ್ರ ಸ್ಥಳೀಯ ಮಟ್ಟದಲ್ಲಿ ಸಮನ್ವಯ ಸಮಿತಿ ರಚನೆ: ಸಚಿವ ರಮೇಶ ಜಾರಕಿಹೊಳಿ- Tarun kranti 2

ದಂಡು ಮಂಡಳಿಗೆ ಅನುದಾನ ನೀಡಿ:
ದಂಡು ಮಂಡಳಿ ಸಿಇಒ ದಿವ್ಯಾ ಶಿವರಾಂ ಅವರು ಸಭೆಯಲ್ಲಿ ಮಾತನಾಡಿ, ಬೆಳಗಾವಿ ದಂಡು ಮಂಡಳಿ ವ್ಯಾಪ್ತಿಯಲ್ಲಿ
22 ಸಾವಿರ ನಾಗರಿಕರಿದ್ದಾರೆ. ದಂಡು ಮಂಡಳಿಗೆ 2011 ಕ್ಕಿಂತ ಮುಂಚೆ ರಾಜ್ಯಸರ್ಕಾರದಿಂದ ಅನುದಾನ ನೀಡಲಾಗುತ್ತಿತ್ತು.
ಆದರೆ ನಂತರ ಅನುದಾನ ನೀಡುವುದನ್ನು ನಿಲ್ಲಿಸಲಾಗಿದೆ. ಆದ್ದರಿಂದ ಈ ಬಗ್ಗೆ ಪರಿಶೀಲಿಸಿ ರಾಜ್ಯ ಸರ್ಕಾರದಿಂದ ದಂಡು
ಮಂಡಳಿಗೆ ಅನುದಾನ ನೀಡಬೇಕೆಂದು ಹೇಳಿದರು.
ಕೆಎಂಸಿ ಆ್ಯಕ್ಟ್‍ನಲ್ಲಿ ರಾಜ್ಯ ಸರ್ಕಾರದಿಂದ ದಂಡು ಮಂಡಳಿಗೆ ಅನುದಾನ ನೀಡುವ ಕುರಿತು ಸ್ಪಷ್ಟನೆ ಇಲ್ಲದಿರುವುದರಿಂದ
ಅನುದಾನ ನಿಲ್ಲಿಸಲಾಗಿದೆ ಎಂದು ಹಣಕಾಸು ಇಲಾಖೆಯ ಜಂಟಿ ಕಾರ್ಯದರ್ಶಿಗಳು ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು 15 ದಿನಗಳೊಳಗಾಗಿ ಈ ಬಗ್ಗೆ ಸಂಬಂಧಪಟ್ಟವರ ಸಭೆ ಕರೆÀದು ಚರ್ಚಿಸಲಾಗುವುದು
ಎಂದು ಹೇಳಿದರು.

24×7 ಕುಡಿಯುವ ನೀರಿನ ಯೋಜನೆ:
ಮಹಾನಗರ ಪಾಲಿಕೆ ಆಯುಕ್ತರಾದ ಶಶಿಧರ ಕುರೇರ ಅವರು ಮಾತನಾಡಿ, ಮಹಾನಗರ ಪಾಲಿಕೆ ವ್ಯಾಪ್ತಿಯ 48 ವಾರ್ಡ್‍ಗಳಲ್ಲಿ 24×7 ಕುಡಿಯುವ ನೀರಿನ ಯೋಜನೆ 2015ರಿಂದಲೇ ಪ್ರಾರಂಭವಾಗಿದೆ. ಈ ಯೋಜನೆಗೆ 345 ಕೋಟಿ ರೂ. ವೆಚ್ಚವಾಗಲಿದ್ದು, ಶೇ.72 ರಷು ್ಟ ಅನುದಾನವನ್ನು ಕೇಂದ್ರ ಸರ್ಕಾರ ಹಾಗೂ ಶೇ.28 ರಷು ್ಟ ಅನುದಾನವನ್ನು ಮಹಾನಗರ ಪಾಲಿಕೆ ಭರಿಸಲಿದೆ. ಈ ಯೋಜನೆಗೆ ರೂ.128 ಕೋಟಿ ಹಣವನ್ನು ಮಹಾನಗರ ಪಾಲಿಕೆ ಭರಿಸಬೇಕಾಗಿದ್ದು, ಈಗಾಗಲೇ ರೂ. 39 ಕೋಟಿ ವೆಚ್ಚದಲ್ಲಿ ನಗರದಲ್ಲಿ ಓವರ್‍ಹೆಡ್ ಟ್ಯಾಂಕ್‍ಗಳನ್ನು ನಿರ್ಮಿಸಲಾಗಿದೆ ಎಂದರು.

ಬೈಲಹೊಂಗಲ ಶಾಸಕರಾದ ಮಹಾಂತೇಶ ಕೌಜಲಗಿ ಅವರು ಮಾತನಾಡಿ, ಬೈಲಹೊಂಗಲ ಪಟ್ಟಣಕ್ಕೆ ಮಲಪ್ರಭಾ ನದಿಯಿಂದ
ಕುಡಿಯುವ ನೀರನ್ನು ಸರಬರಾಜು ಮಾಡಲಾಗುತ್ತದೆ. ಆದರೆ ವರ್ಷದಲಿ ್ಲ 4 ತಿಂಗಳು ಪಟ್ಟಣದಲ್ಲಿ ಕುಡಿಯುವ ನೀರಿನ ಕೊರತೆ
ಉಂಟಾಗುತ್ತದೆ. ಕುಡಿಯುವ ನೀರಿನ ಯೋಜನೆಗಳನ್ನು ಅನುಷ್ಠಾನಗೊಳಿಸುವುದು ಮುಖ್ಯವಲ್ಲ. ವರ್ಷದ 12 ತಿಂಗಳು
ಕುಡಿಯುವ ನೀರು ಸರಬರಾಜು ಆಗುತ್ತಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಿ, ಕ್ರಮಕೈಗೊಳ್ಳಬೇಕೆಂದು ಹೇಳಿದರು.

ಕಾಮಗಾರಿಗಳಿಗೆ ಕಾರ್ಯಾದೇಶ ನೀಡಿ:
ಪೌರಾಡಳಿತ ಇಲಾಖೆಯ ನಿರ್ದೇಶಕರಾದ ಕೆ.ಪಿ. ಮೋಹನರಾಜ್ ಅವರು ಮಾತನಾಡಿ, ಇನ್ನೊಂದು ತಿಂಗಳಲ್ಲಿ ನಗರ
ಸ್ಥಳೀಯ ಸಂಸ್ಥೆಗಳಿಗೆ ಚುನಾವಣಾ ಪ್ರಕ್ರಿಯೆ ಆರಂಭವಾಗಲಿದೆ. ಆದ್ದರಿಂದ ಬಾಕಿ ಇರುವ ಕಾಮಗಾರಿಗಳಿಗೆ ಆದಷು ್ಟ ಬೇಗ
ಕಾರ್ಯಾದೇಶ ನೀಡಬೇಕೆಂದು ಸೂಚಿಸಿದರು.
ಪೌರಾಡಳಿತ ಇಲಾಖೆಯ ಬೆಳಗಾವಿ ವಿಭಾಗ ಮಟ್ಟದ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಬಾಗಕೋಟೆ, ವಿಜಯಪುರ,
ಉತ್ತರ ಕನ್ನಡ, ಗದಗ ಮತು ್ತ ಹಾವೇರಿ ಜಿಲ್ಲೆಗಳ ವಿವಿಧ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿಗಳು ತಮ್ಮ
ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸಮಸ್ಯೆಗಳ ಕುರಿತು ಸಭೆಯಲ್ಲಿ ಪ್ರಸ್ತಾಪಿಸಿದರು. ಪ್ರಶ್ನೆಗಳಿಗೆ ಇಲಾಖೆಯ ಹಿರಿಯ
ಅಧಿಕಾರಿಗಳು ಉತ್ತರ ನೀಡಿದರು. ಪೌರಾಡಳಿತ ನಿರ್ದೇಶಕರಾದ ಕೆ.ಪಿ. ಮೋಹನರಾಜ್ ಅವರು ಹಾಗೂ ಸಚಿವರು ಸಮಸ್ಯೆ
ಪರಿಹರಿಸುವಂತೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿವಿಧ ವಿಷಯಗಳ ಕುರಿತು ಚರ್ಚೆ:
ಸಭೆಯಲ್ಲಿ ನಗರೋತ್ಥಾನ ಯೋಜನೆ, ಕುಡಿಯುವ ನೀರು ಸರಬರಾಜು ಮತ್ತು ಒಳಚರಂಡಿ, ಎಸ್.ಎಫ್.ಸಿ ಅನುದಾನ,
ಪೌರ ಕಾರ್ಮಿಕರ ಗೃಹಭಾಗ್ಯ ಯೋಜನೆ, ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ, ಇಂದಿರಾ ಕ್ಯಾಂಟೀನ್, ಅಮೃತ್ ಯೋಜನೆ, 13 ಮತು ್ತ 14ನೇ ಹಣಕಾಸು ಆಯೋಗದ ಅನುದಾನ, ಬೀದಿ ದೀಪಗಳ ನಿರ್ವಹಣೆ, ನಗರ ಸ್ಥಳೀಯ ಸಂಸ್ಥೆಗಳ ಆದಾಯ, ಸರ್ಕಾರದ ಜಾಗಗಳ ಅತಿಕ್ರಮಣ ತೆರವುಗೊಳಿಸುವುದು, ಸ್ವಚ್ಛಭಾರತ ಅಭಿಯಾನ ಮತು ್ತ ಘನತ್ಯಾಜ್ಯ ವಸ್ತುಗಳ ನಿರ್ವಹಣೆ, ಕಲ್ಯಾಣ ಕಾರ್ಯಕ್ರಮಗಳು, ಎಸ್‍ಸಿಪಿ. ಟಿಎಸ್‍ಪಿ ಯೋಜನೆಗಳಿಗೆ ಸಂಬಂಧಿಸಿದ ವಿಷಯಗಳು, ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು, ರಾಜೀವ ಆವಾಸ್ ಯೋಜನೆ, ನಲ್ಮ ಯೋಜನೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು.
ಅಥಣಿ ಶಾಸಕ ಮಹೇಶ ಕುಮಠಳ್ಳಿ, ವಿಧಾನ ಪರಿಷತ್ ಸದಸ್ಯ ವಿವೇಕರಾವ್ ಪಾಟೀಲ, ಮಹಾನಗರ ಪಾಲಿಕೆಯ ಮಹಾಪೌರರಾದ ಬಸಪ್ಪ ಚಿಕ್ಕಲದಿನ್ನಿ, ಉಪಮೇಯರ್ ಮಧುಶ್ರೀ ಪೂಜಾರಿ, ಬೆಳಗಾವಿ ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ, ಧಾರವಾಡ ಜಿಲ್ಲಾಧಿಕಾರಿ ಎಸ್.ಬಿ. ಬೊಮ್ಮನಹಳ್ಳಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲಾಧಿಕಾರಿಗಳು ವೇದಿಕೆಯಲ್ಲಿ
ಉಪಸ್ಥಿತರಿದ್ದರು.
ಪೌರಾಡಳಿತ ಇಲಾಖೆಯ ಬೆಳಗಾವಿ ವಿಭಾಗ ಮಟ್ಟದ ಏಳು ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು,
ಉಪಾಧ್ಯಕ್ಷರು, ವಿವಿಧ ಮಹಾನಗರ ಪಾಲಿಕೆಗಳ ಆಯುಕ್ತರು, ನಗರಾಭಿವೃದ್ಧಿ ಇಲಾಖೆಯ ಯೋಜನಾಧಿಕಾರಿಗಳು,
ಇಂಜಿನಿಯರ್‍ಗಳು, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಅಧಿಕಾರಿಗಳು, ಸೇರಿದಂತೆ ಇನ್ನಿತರರು ಸಭೆಯಲಿ ್ಲ
ಪಾಲ್ಗೊಂಡಿದ್ದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.