ಉತ್ತಮ ಸಮಾಜಕ್ಕಾಗಿ

ಯುವಕರಿಗೆ ಉದ್ಯೋಗ ಸೃಷ್ಟಿಸಿ: ಗವರ್ನರ್ ವಜುಭಾಯಿ ವಾಲಾ ಕರೆ

Create jobs for young people: Governor Vajubhai Vala calls

0

ಬೆಳಗಾವಿ: (news belagavi) ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 20ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಭಾಗವಹಿಸಿ, ಡಾ. ಎಪಿಜೆ ಅಬ್ದುಲ್ ಕಲಾಂ ಆಡಿಟೋರಿಯಂನಲ್ಲಿ ಕಾರ್ಯಕ್ರಮ ಉದ್ಘಾಟಿಸಿದರು.

ಯುವಕರಿಗೆ ಉದ್ಯೋಗ ಸೃಷ್ಟಿಸಿ: ಗವರ್ನರ್ ವಜುಭಾಯಿ ವಾಲಾ ಕರೆ- Tarun kranti
ಇಂದು ನಿರುದ್ಯೋಗ ಸಮಸ್ಯೆಗೆ ಸಿಲುಕಿರುವ ಯುವಕರಿಗೆ ಉದ್ಯೋಗ ಸೃಷ್ಟಿಸುವ ಮೂಲಕ ಮಾನವ ಸಂಪನ್ಮೂಲ ಬಳಕೆ ಮಾಡುವತ್ತ ಸರಕಾರಗಳು ಮತ್ತು ವಿದ್ಯಾ ಸಂಸ್ಥೆಗಳು ಪ್ರತಮಾಧ್ಯತೆ ನೀಡಬೇಕೆಂದು ವಾಲಾ ಕರೆ ನೀಡಿದರು. ಮಾನವ ಸಂಪನ್ಮೂಲ ಮತ್ತು ಉದ್ಯೋಗಾವಕಾಶ ಎರಡಕ್ಕೂ ಕೊರತೆಯಿಲ್ಲ. ಆದರೆ ಅಗತ್ಯ ಉದ್ಯೋಗ ಸೃಷ್ಟಿಸಿ ಹಂಚಲು ಯೋಗ್ಯ ನಡೆ ನಮ್ಮಲ್ಲಿಲ್ಲ ಎಂದು ರಾಜ್ಯಪಾಲರು ಅಭಿಪ್ರಾಯಪಟ್ಟರು. ಕೇಂದ್ರ ಆದಾಯ ತೆರಿಗೆ ಇಲಾಖೆ ಸುಪರ್ಧಿಗೆ ಸಿಲುಕಿರುವ ವಿಟಿಯು ಹಣ ₹400 ಕೋಟಿ ಮರಳಿ ಸಿಗುವ ಬಗ್ಗೆ ವಾಲಾ ವಿಶ್ವಾಸ ವ್ಯಕ್ತಪಡಿಸಿದರು.

ಯುವಕರಿಗೆ ಉದ್ಯೋಗ ಸೃಷ್ಟಿಸಿ: ಗವರ್ನರ್ ವಜುಭಾಯಿ ವಾಲಾ ಕರೆ- Tarun kranti 1
ಉನ್ನತ ಶಿಕ್ಷಣ ಸಚಿವ ಹಾಗೂ ಸಹ ಕುಲಾಧಿಪತಿ ಜಿ. ಟಿ. ದೇವೆಗೌಡ ಮಾತನಾಡಿ ವಿಟಿಯು ವ್ಯಾಪ್ತಿಯ ಮಹಾವಿದ್ಯಾಲಯಗಳಿಗೆ ಪ್ರಾಚಾರ್ಯರು, ಪ್ರಾಧ್ಯಾಪಕರು ಹಾಗೂ ಅಗತ್ಯ ಸಿಬ್ಬಂಧಿ ಆಯ್ಕೆ ಮಾಡಲು ಸರಕಾರ ಉತ್ಸುಕವಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಲಾಗುವುದು. ಜತೆಗೆ ಏಳನೇ ವೇತನ ಆಯೋಗ ಜಾರಿ ಬಗ್ಗೆ ಚಿಂತನೆ ನಡೆಸಲಾಗುವುದು ಎಂದರು.

ಮಾಜಿ ಕೇಂದ್ರ ರಕ್ಷಣಾ ಕಾರ್ಯದರ್ಶಿ ಪದ್ಮವಿಭೂಷಣ ಡಾ. ವಿ. ಕೆ. ಅತ್ರಿ ಮಾತನಾಡಿ 2050 ವಿಷನ್ ಯೋಜನೆ ಹಮ್ಮಿಕೊಳ್ಳಲು ವಿಟಿಯುಗೆ ಸಲಹೆ ನೀಡಿದರು. ಕುಲಪತಿ ಡಾ. ಕರಿಸಿದ್ದಪ್ಪ, ಕುಲಸಚಿವರಾದ ಡಾ. ಎಚ್. ಎನ್. ಜಗನ್ನಾಥರೆಡ್ಡಿ, ಡಾ. ಸತೀಶ ಅಣ್ಣಿಗೇರಿ, ಡಾ. ಪ್ರಭಾಕರ ಕೋರೆ ಹಾಗೂ ವಿವಿಯ ಅಧಿಕಾರಿಗಳು, ವಿದ್ಯಾರ್ಥಿಗಳು ಭಾಗವಹಿಸಿದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.