ಉತ್ತಮ ಸಮಾಜಕ್ಕಾಗಿ

ಅದ್ಧೂರಿ ಜಯಂತಿ ಆಚರಣೆಗೆ ನಿರ್ಧಾರ

Decision for a hugely successful celebration

0

ದೇವರಾಜ ಅರಸು ಜಯಂತಿ: ಪೂರ್ವಭಾವಿ ಸಭೆಅದ್ಧೂರಿ ಜಯಂತಿ ಆಚರಣೆಗೆ ನಿರ್ಧಾರ
ಅದ್ಧೂರಿ ಜಯಂತಿ ಆಚರಣೆಗೆ ನಿರ್ಧಾರ- Tarun krantiಬೆಳಗಾವಿ: (news belgaum)ಮಾಜಿ ಮುಖ್ಯಮಂತ್ರಿ ದಿ|| ಡಿ.ದೇವರಾಜ ಅರಸು ಅವರ 102ನೇ ಜಯಂತಿಯನ್ನು ಆಗಸ್ಟ್ 20 ರಂದು ಅದ್ಧೂರಿಯಾಗಿ ಆಚರಿಸಬೇಕೆಂದು ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ ಅವರು ಸೂಚಿಸಿದರು.
ಇಲ್ಲಿನ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಮಂಗಳವಾರ (ಆ.7) ದಿ|| ಡಿ.ದೇವರಾಜ ಅರಸು ಅವರ ಜಯಂತಿಯ ನಿಮಿತ್ಯ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆ.20 ರಂದು ಬೆಳಿಗ್ಗೆ 11 ಗಂಟೆಗೆ ಕುಮಾರ ಗಂಧರ್ವ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ವೇದಿಕೆಯನ್ನು ಸುಂದರವಾಗಿ ಅಲಂಕರಿಸಬೇಕು. ಕುಡಿಯುವ ನೀರು ಹಾಗೂ ಅಲ್ಪೋಪಹಾರದ ವ್ಯವಸ್ಥೆ ಮಾಡಬೇಕು.
ಶಿಷ್ಟಾಚಾರದ ಪ್ರಕಾರ ಎಲ್ಲ ಜನಪ್ರತಿನಿಧಿಗಳಿಗೆ ಆಮಂತ್ರಣ ನೀಡಬೇಕು. ಕಾರ್ಯಕ್ರಮದಲ್ಲಿ ದೇವರಾಜ ಅರಸು ಅವರ ಜೀವನ ಸಾಧನೆ ಕುರಿತು ಉಪನ್ಯಾಸ ನೀಡಲು ಒಬ್ಬರು ಉಪನ್ಯಾಸಕರನ್ನು ಆಹ್ವಾನಿಸುವಂತೆ ಸೂಚಿಸಿದರು.
ಜಯಂತಿಯ ಸಂದರ್ಭದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಆದ್ದರಿಂದ ಕಾರ್ಯಕ್ರಮದಲ್ಲಿ ಸರಕಾರದ ಯೋಜನೆಗಳ ಕುರಿತು ಮಾತನಾಡುವಂತಿಲ್ಲ. ಚುನಾವಣೆ ಜರುಗುವ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಫಲಾನುಭವಿಗಳಿಗೆ ಸರಕಾರದ ಸೌಲಭ್ಯಗಳ ಚೆಕ್ ವಿತರಿಸುವಂತಿಲ್ಲ ಹಾಗೂ ಆ ವ್ಯಾಪ್ತಿಯ ವಿದ್ಯಾರ್ಥಿಗಳಿಗೂ ಕೂಡ ಪುರಸ್ಕಾರ ನೀಡುವಂತಿಲ್ಲ ಎಂದು ತಿಳಿಸಿದರು.
ಚುನಾವಣೆ ಜರುಗುವ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಫಲಾನುಭವಿಗಳನ್ನು ಹೊರತುಪಡಿಸಿ ಜಿಲ್ಲೆಯ ಇನ್ನಿತರೆ ಭಾಗಗಳ ಫಲಾನುಭವಿಗಳಿಗೆ ಸರಕಾರದ ಸೌಲಭ್ಯಗಳ ಚೆಕ್ ಹಾಗೂ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡುವಂತೆ ನಿರ್ದೇಶನ ನೀಡಿದರು.
ಮಹಾನಗರ ಪಾಲಿಕೆಯ ಆಯುಕ್ತರಾದ ಶಶಿಧರ ಕುರೇರ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಕನ್ನೋಳಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀಶೈಲ ಕರಿಶಂಕರಿ, ಮುಖಂಡರಾದ ಯಲ್ಲಪ್ಪ ಹುದಲಿ, ಪ್ರಕಾಶ ಮಾದರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಇನ್ನಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.  

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.