ಉತ್ತಮ ಸಮಾಜಕ್ಕಾಗಿ

news belgaum:)ಕಾಮಗಾರಿಗಳಲ್ಲಿನ ಭ್ರಷ್ಟಾಚಾರ ಕುರಿತು ತನಿಖೆ ಮಾಡುವಂತೆ ಒತ್ತಾಯಿಸಿ:ಪ್ರತಿಭಟನೆ

Demand to investigate corruption in works: protest

0

ಬೆಳಗಾವಿ 🙁news belgaum) ಉತ್ತರ ಕ್ಷೇತ್ರದಲ್ಲಿ ನಡೆದಿರುವ ಕಾಮಗಾರಿಗಳಲ್ಲಿನ ಭ್ರಷ್ಟಾಚಾರ ಕುರಿತು ತನಿಖೆ ಮಾಡುವಂತೆ ಒತ್ತಾಯಿಸಿ ಸೋಮವಾರ ಬಿಜೆಪಿ ಮಹಾನಗರ ಘಟಕದ ಪ್ರಧಾನ ಕಾರ್ಯದರ್ಶಿ ರಾಜಕುಮಾರ ಟೋಪಣ್ಣವರ ನೇತೃತ್ವದಲ್ಲಿ ಉತ್ತರ ಕ್ಷೇತ್ರದ ಸಾರ್ವಜನಿಕರು ಪ್ರತಿಭಟನೆ ನಡೆಸಿದರು.

ನಗರದ ಕನ್ನಡ ಸಾಹಿತ್ಯ ಭವನದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಕಾಮಗಾರಿಗಳಲ್ಲಿ ನಡೆದಿರುವ ಭ್ರಷ್ಟಾಚಾರ ಕುರಿತು ತನಿಖೆ ನಡೆಸಿ ಶ್ವೇತಪತ್ರ ಹೊರಡಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಬೆಳಗಾವಿ ಮಹಾನಗರ ಪಾಲಿಕೆಗೆ ಮುಖ್ಯಮಂತ್ರಿ ನೂರು ಕೋಟಿ ವಿಶೇಷ ಅನುದಾನದಲ್ಲಿ ಮಹಾನಗರ ಪಾಲಿಕೆಯ ವ್ಯಾಪ್ತಿಯ ನಾಲ್ಕು ಮತ ಕ್ಷೇತ್ರಗಳನ್ನು ಹೊಂದಿದೆ. ಆದರೆ ಮುಖ್ಯಮಂತ್ರಿ ವಿಶೇಷ ಅನುದಾನ ಮಾತ್ರ ಉತ್ತರ ಕ್ಷೇತ್ರಕ್ಕೆ ಸೀಮಿತವಾಗಿ ಅನಧಿಕೃತವಾಗಿ ಅನುದಾನ ಬಳಕೆಯಾಗಿದೆ ಎಂದು ಜಿಲ್ಲಾಧಿಕಾರಿಗೆ ಸಲ್ಲಿಸಿರುವ ಮನವಿಯಲ್ಲಿ ತಿಳಿಸಿದ್ದಾರೆ.

ಉತ್ತರ ಕ್ಷೇತ್ರದ ಶಾಸಕರು ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಾ ಸಮಗ್ರ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸದೆ ಭ್ರಷ್ಟಾಚಾರ ಎಸೆಗಿ ತಮ್ಮಗೆ ಬೇಕಾದ ಕಡೆಗೆ ಅಭಿವೃದ್ಧಿ ಹೆಸರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮಗೆ ಎಲ್ಲಿ ಮತಗಳು ಬಿದ್ದಿಲ್ಲ ಅಲ್ಲಿ ರಾಜಕೀಯ ದುರುದ್ದೇಶದಿಂದ ಅಭಿವೃದ್ಧಿ ಕೆಲಸವನ್ನು ಮಾಡಿಲ್ಲ. ರಾಮತೀರ್ಥ ನಗರ, ದೇವರಾಜ್ ಅರಸು ಕಾಲನಿ, ಬಸವನ ಕುಡಚಿ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಿಸಿಲ್ಲ. ಆದರೆ ಶಾಸಕರು ನಗರದಲ್ಲಿರುವ ಅನಧಿಕೃತ ಬಡಾವಣೆಗಳಾದ ಅಮನ ನಗರ, ಖುಸ್ಬು ನಗರ, ನ್ಯೂ ಗಾಂಧಿ ನಗರ, ವೈಭವ ನಗರ, ಶಾಹೂ ನಗರ ಇಂತಹ ಪ್ರದೇಶಗಳಲ್ಲಿ ಜಾಸ್ತಿ ಕೆಲಸಕ್ಕೆ ಅನುದಾನ ಬಿಡುಗಡೆ ಮಾಡಿಸಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಉತ್ತರ ಕ್ಷೇತ್ರದ ಬಹಳಷ್ಟು ಕಡೆ ಚುನಾವಣೆಯ ಹಿನ್ನಲೆಯಲ್ಲಿ ಕಳಪೆ ಮಟ್ಟದ ರಸ್ತೆ ಇನ್ನಿತರ ಕೆಲಸಗಳನ್ನು ನಡೆಸಲು ಅನುದಾನ ಬಳಕೆ ಮಾಡಲಾಗುತ್ತಿದೆ. ಉತ್ತರ ಕ್ಷೇತ್ರದ ಎಲ್ಲ ಕಾಮಗಾರಿಗಳನ್ನು ಇಬ್ಬರು ಗುತ್ತಿಗೆದಾರರಿಗೆ ನೀಡಿಲಾಗಿದೆ. ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯಲ್ಲಿ ಸಹ ಭ್ರಷ್ಟಾಚಾರ ಕಂಡು ಬರುತ್ತಿದೆ. ಒಳ್ಳೆಯ ವಿದ್ಯುತ್ ಕಂಬಗಳನ್ನು ತೆಗೆದುಹಾಕಿ ಅನಾವಶಕವಾಗಿ ಪ್ರತಿ ಕಂಬಗಳಿಗೆ 2.50 ಲಕ್ಷ ಹಣ ನೀಡಿ ಅಳವಡಿಸಲಾಗಿದೆ. ಉತ್ತರ ಕ್ಷೇತ್ರದ ಬಹಳಷ್ಟು ಕಡೆಯಲ್ಲಿ ರಸ್ತೆಯ ಮೇಲೆ ಬೀದಿ ದ್ವೀಪಗಳಿಲ್ಲ ಅಲ್ಲಿ ಲಕ್ಷ ನೀಡಿಲ್ಲ. ಶಾಸಕರ ಮನೆಯ ಮುಂದೆ ರಸ್ತೆ ಮೇಲೆ ಮತ್ತೊಮ್ಮೆ ರಸ್ತೆ ಕಾಮಗಾರಿ ನಡೆಸಲಾಗಿದೆ. ಬೀದಿ ದ್ವೀಪ ಅಳವಡಿಕೆ ನಡೆಸಲಾಗಿದೆ. ವೋಟ್ ಬ್ಯಾಂಕ್ ಗಟ್ಟಿಗೊಳಿಸುವ ಕೆಲಸವಾಗುತ್ತಿದೆ. ಇದು ಸಾರ್ವಜನಿಕರ ತೆರಿಗೆ ಹಣ ಅಥವಾ ಶಾಸಕರ ಹಣ ಎಂದು ತಿಳಿಯದಾಗಿದೆ. ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ವಿನಾಯಕ ಪಾಟೀಲ, ಶಿವಾನಂದ ಕಾರಿ ಸೇರಿದಂತೆ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.Demand to investigate corruption in works: protest

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

 

Leave A Reply

 Click this button or press Ctrl+G to toggle between Kannada and English

Your email address will not be published.