ಉತ್ತಮ ಸಮಾಜಕ್ಕಾಗಿ

ವಿವಿದ ಪ್ರಕಟಣೆಗಳು

0

ಗೋಕಾಕ ಪ್ರಾದೇಶಿಕ ಅಧಿಕಾರಿಗಳ ಕಚೇರಿ; ಸಾರಿಗೆ ಅದಾಲತ್
ಬೆಳಗಾವಿ:Belgaum News ಗೋಕಾಕದ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಗೆ ಸಂಬಂಧಪಟ್ಟಂತೆ ಕುಂದುಕೊರತೆ ಹಾಗೂ ಸಮಸ್ಯೆಗಳಬಗ್ಗೆ ಸಾರಿಗೆ “ಅದಲಾತ್” ನ್ನು ಏರ್ಪಡಿಸಲಾಗಿದೆ.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಿ, ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕೆಂದು ಗೋಕಾಕದ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಅಪ್ಪಯ್ಯ ನಲತ್ವಾಡಮಠ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರೆಕಾಲಿಕ ಉಪನ್ಯಾಸಕರನ್ನು ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನ
ಬೆಳಗಾವಿ:Belgaum News ಡಿಪ್ಲೋಮಾ (ಕೃಷಿ) ಮಹಾವಿದ್ಯಾಲಯ, ನಿಪ್ಪಾಣಿಯಲ್ಲಿ 2017-18ನೇ ಸಾಲಿನ ಮೊದಲನೇ ವರ್ಷದ 2ನೇ ಸಮಿಸ್ಟರನ್, ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಹಂತದ ಸಂಖ್ಯಾಶಾಸ್ತ್ರ ಮತ್ತು ಗಣಕವಿಜ್ಞಾನ ಬೋಧಿಸಲು ಎಂ.ಎಸ್.ಹಾಗೂ ಎಂ.ಕಾಂ ವಿದ್ಯಾರ್ಹತೆಯನ್ನು ಹೊಂದಿರುವ ಅರೆಕಾಲಿಕ ಉಪನ್ಯಾಸಕರನ್ನು 179 ದಿನಗಳ ಅವಧಿಗೆ ಮೀರದಂತೆ ತಾತ್ಕಾಲಿಕ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಉಪನ್ಯಾಸಕರು ಜನವರಿ 25ರೊಳಗಾಗಿ ನಿಪ್ಪಾಣಿ ಡಿಪ್ಲೋಮಾ (ಕೃಷಿ) ಮಹಾವಿದ್ಯಾಲಯ ಪ್ರಾಂಶುಪಾಲರ ಕಾರ್ಯಾಲಯಕ್ಕೆ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಜ. 15 ರಂದು ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ
ಬೆಳಗಾವಿ:Belgaum News ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರುಗಳ ಸಂಯುಕ್ತಾಶ್ರಯದಲ್ಲಿ “ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಉತ್ಸವ” ವನ್ನು ಜನವರಿ 15 ರಂದು ಬೆಳಿಗ್ಗೆ 11-30 ಗಂಟೆಗೆ ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.
ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ರಮೇಶ ಜಾರಕಿಹೊಳಿ ಅವರು ಉದ್ಘಾಟಿಸುವರು. ಕೇಂದ್ರದ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮ ಶೀಲತೆ ರಾಜ್ಯ ಸಚಿವರಾದ ಅನಂತಕುಮಾರ ಹೆಗಡೆ, ಸರ್ಕಾರದ ಮುಖ್ಯಸಚೇತಕರಾದ ಅಶೋಕ ಪಟ್ಟಣ, ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿಗಳಾದ ಗಣೇಶ ಹುಕ್ಕೇರಿ ಅವರು ವಿಶೇಷ ಆಮಂತ್ರಿತರಾಗಿ ಭಾಗವಹಿಸುವರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಫಿರೋಜ್ ಸೇಠ ಅವರು ವಹಿಸುವರು.ಈ ಕಾರ್ಯಕ್ರಮದಲ್ಲಿ ಲೋಕಸಭಾ ಸದಸ್ಯರು, ರಾಜ್ಯಸಭಾ ಸದಸ್ಯರು, ವಿಧಾನ ಸಭೆ ಸದಸ್ಯರು, ವಿಧಾನ ಪರಿಷತ್ ಸದಸ್ಯರು ಹಾಗೂ ಇತರೆ ಗಣ್ಯರು ಉಪಸ್ಥಿತರಿರುವರು.

ಬೆಳಗಾವಿ:Belgaum News Detailed Announcements

Leave A Reply

 Click this button or press Ctrl+G to toggle between Kannada and English

Your email address will not be published.