ಉತ್ತಮ ಸಮಾಜಕ್ಕಾಗಿ

ದೇವರಾಜ ಅರಸು ಅಭಿವೃದ್ಧಿ ನಿಗಮ: ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

Devaraja Aras Development Corporation: Application invitation for various facilities

0

ಬೆಳಗಾವಿ: (news belagaviಕೇಂದ್ರ ಉಪ್ಪಾರ ಮತ್ತು ಅಂಬಿಗ ಅದರ ಉಪಜಾತಿಯವರು ಸೇರಿದಂತೆ ಎಲ್ಲಾ ಹಿಂದುಳಿದ ವರ್ಗಗಳ
ಜನರು (ವಿಶ್ವಕರ್ಮ ಅದರ ಉಪಜಾತಿಗಳು ಮತ್ತು ಮತೀಯ ಅಲ್ಪಸಂಖ್ಯಾತರನ್ನು ಹೊರತುಪಡಿಸಿ) ಆರ್ಥಿಕ ಅಭಿವೃದ್ಧಿಗಾಗಿ 2018-19ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳಲ್ಲಿ ಸೌಲಭ್ಯ ಪಡೆಯಬಯಸುವವರಿಂದ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿತ ಅರ್ಜಿ ನಮೂನೆಗಳನ್ನು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ ಅಥವಾ ಆಯಾ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿಗಳಿಂದ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್ 18 ರೊಳಗಾಗಿ ಸಲ್ಲಿಸಬಹುದಾಗಿದೆ.

ಒಂದು ಬಾರಿ ನಿಗಮದ ಯಾವುದಾದರು ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತವರು ಹಾಗೂ ಅವರ ಕುಟುಂಬದವರು
ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಯೋಜನೆಗಳ ಸೌಲಭ್ಯ ಪಡೆಯಲು ಹೊಂದಿರಬೇಕಾದ ಅರ್ಹತೆಗಳು:
ಅರ್ಜಿದಾರರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು. (ವಿಶ್ವಕರ್ಮ ಅದರ ಉಪಜಾತಿ ಮತ್ತು ಮತೀಯ ಅಲ್ಪಸಂಖ್ಯಾತರನ್ನು ಹೊರತುಪಡಿಸಿ), ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.40,000 ಹಾಗೂ ಪಟ್ಟಣ ಪ್ರದೇಶದವರಿಗೆ ರೂ.55,000 ಒಳಗಿರಬೇಕು, ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು, ಅರ್ಜಿದಾರರು ಕೆ.ವೈ.ಸಿ. ಬಗ್ಗೆ ಆಧಾರ್ ಕಾರ್ಡ್/ಚುನಾವಣಾ ಗುರುತಿನ ಚೀಟಿ/ಪಾನ್ ಕಾರ್ಡ್ ದಾಖಲೆಗಳನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಸಲ್ಲಿಸಬೇಕು, ಅರ್ಜಿದಾರರು ಐ.ಎಫ್.ಎಸ್.ಸಿ. ಕೋಡ್ ಹೊಂದಿರುವ ರಾಷ್ಟ್ರೀಕೃತ/ಗ್ರಾಮೀಣ ಬ್ಯಾಂಕ್‍ಗಳಲ್ಲಿ ಖಾತೆ
ಹೊಂದಿರಬೇಕು.

ರಾಜ್ಯ ಸರ್ಕಾರದ ಯೋಜನೆಗಳು:
• ಚೈತನ್ಯ ಸಹಾಯಧನ ಯೋಜನೆ: ರಾಷ್ಟ್ರೀಕೃತ ಬ್ಯಾಂಕ್‍ಗಳ ಸಹಯೋಗದೊಂದಿಗೆ ಹಿಂದುಳಿದ ವರ್ಗಗಳ ಜನರಿಗೆ ವಿವಿಧ ಆರ್ಥಿಕ
ಚಟುವಟಿಕೆ ಕೈಗೊಳ್ಳಲು ನಿಗಮದ ಹಾಗೂ ಬ್ಯಾಂಕ್ ಪಾಲಿನ ಮೊತ್ತ ಸೇರಿ ಗರಿಷ್ಠ ರೂ.5 ಲಕ್ಷಗಳವರೆಗೆ ಸೌಲಭ್ಯ.
• ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ: ಹಿಂದುಳಿದ ವರ್ಗಗಳ ಜನರು ಸ್ವಯಂ ಉದ್ಯೋಗಕ್ಕೆ ಆರ್ಥಿಕ
ಚಟುವಟಿಕೆ ಕೈಗೊಳ್ಳಲು ಚಟುವಟಿಕೆ ಅನುಸಾರ ಗರಿಷ್ಠ ರೂ.2,00,000 ವರೆಗೆ ಆರ್ಥಿಕ ನೆರವು. ಇದರಲ್ಲಿ, ಗರಿಷ್ಠ ಶೇ.15ರಷ್ಟು ಸಹಾಯಧನ, ಉಳಿಕೆ ಮೊತ್ತ ವಾರ್ಷಿಕ ಶೇ4ರ ಬಡ್ಡಿದರದಲ್ಲಿ ಸಾಲ.
• ಕಿರುಸಾಲ ಯೋಜನೆಯಲ್ಲಿ ಸೌಲಭ್ಯ: ಹಣ್ಣು, ತರಕಾರಿ ಮಾರುವವರು, ಹಾಲು ಮಾರುವವರು, ಹೂ ಮಾರುವವರು, ತಳ್ಳುವ ಗಾಡಿ ವ್ಯಾಪಾರಿಗಳು ಮುಂತಾದ ಸಣ್ಣ ಪ್ರಮಾಣದ ವ್ಯಾಪಾರ ಚಟುವಟಿಕೆಗಳಿಗೆ ವಾರ್ಷಿಕ ಶೇಕಡ 4ರ ಬಡ್ಡಿ ದರದಲ್ಲಿ ಗರಿಷ್ಠ ರೂ.10,000 ಸಾಲ ಹಾಗೂ ರೂ.5,000 ಸಹಾಯಧನ. ಅರ್ಜಿದಾರರು ಬಿ.ಪಿ.ಎಲ್ ಕುಟುಂಬಕ್ಕೆ ಸೇರಿರಬೇಕು ಹಾಗೂ ಸರ್ಕಾರಿ/ಅರೆ ಸರ್ಕಾರಿ ಉದ್ಯೋಗದಲ್ಲಿ ಇರಬಾರದು.
• ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ವೃತ್ತಿ ಕಸುಬುದಾರರಿಗೆ ಸಾಲ ಮತ್ತು ಸಹಾಯಧನ: ಹಿಂದುಳಿದ ವರ್ಗಗಳ ಸಾಂಪ್ರದಾಯಿಕ ವೃತ್ತಿದಾರರು ಅಥವಾ ವೃತ್ತಿ ಕಸುಬುದಾರರು ತಮ್ಮ ವೃತ್ತಿಯ ಅಭಿವೃದ್ಧಿಗಾಗಿ, ಆಧುನಿಕ ಉಪಕರಣಗಳನ್ನು ಖರೀದಿಸಲು, ತಾಂತ್ರಿಕತೆಯನ್ನು ಮೇಲ್ದರ್ಜೆಗೇರಿಸಲು, ವೃತ್ತಿ ಅನುಸಾರ ಗರಿಷ್ಠ ರೂ.2,00,000 ವರೆಗೆ ಆರ್ಥಿಕ ನೆರವು. ಇದರಲ್ಲಿ ಗರಿಷ್ಠ ಶೇ.15ರಷ್ಟು ಸಹಾಯಧನ, ಉಳಿಕೆ ಮೊತ್ತ ಶೇ.2ರ ಬಡ್ಡಿದರದಲ್ಲಿ ಸಾಲ.
• ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಬಡ್ಡಿರಹಿತ ಸಾಲ ಯೋಜನೆ: ಹಿಂದುಳಿದ
ವರ್ಗಗಳ ವಿದ್ಯಾರ್ಥಿಗಳು ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣಗಳಾದ ಪೋಸ್ಟ್‍ಡಾಕ್ರ್ಟಲ್, ಪಿಹೆಚ್.ಡಿ., ಮಾಸ್ಟರ್ ಡಿಗ್ರಿ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡಲು ವಾರ್ಷಿಕ ರೂ.3.50ಲಕ್ಷಗಳಂತೆ, 03 ವರ್ಷಗಳ ಕೋರ್ಸ್‍ನ ಅವಧಿಗೆ, ಗರಿಷ್ಠ ರೂ.10.00ಲಕ್ಷಗಳ ಬಡ್ಡಿರಹಿತ ಸಾಲ ಮಂಜೂರು.
• ಗಂಗಾಕಲ್ಯಾಣ ಯೋಜನೆ:
(ಅ) ವೈಯಕ್ತಿಕ ಕೊಳವೆಬಾವಿ ಯೋಜನೆ (ಆ) ಸಾಮೂಹಿಕ ನೀರಾವರಿ ಯೋಜನೆ
ಮೇಲ್ಕಂಡ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗದ ಫಲಾಪೇಕ್ಷಿಗಳು ಜಿಲ್ಲೆಯ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ಆಯಾ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ
ವಿಸ್ತರಣಾಧಿಕಾರಿಗಳ ಕಛೇರಿಯಲ್ಲಿ ಉಚಿತ ಅರ್ಜಿಗಳನ್ನು ಪಡೆಯುವುದು. ಅಲ್ಲದೆ ನಿಗಮದ ವೆಬ್‍ಸೈಟ್: www.karnataka.gov.in/dbcdc ನಲ್ಲಿ ಅರ್ಜಿಗಳನ್ನು ಪಡೆಯಬಹುದಾಗಿರುತ್ತದೆ. ಭರ್ತಿ ಮಾಡಿದ
ಅರ್ಜಿಗಳನ್ನು ಅಗತ್ಯ/ದಾಖಲಾತಿಗಳೊಂದಿಗೆ ದಿನಾಂಕ:18/08/2018 ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್: www.karnataka.gov.in/dbcdc ಸಂಪರ್ಕಿಸಬೇಕೆಂದು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.