ಉತ್ತಮ ಸಮಾಜಕ್ಕಾಗಿ

ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಉದ್ಘಾಟನಾ

Diarrheal diarrhea is the inauguration of diarrhea

0

                                              ಸಮಾರಂಭ  
ಬೆಳಗಾವಿ:(news belgaum) ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮದ ಮೂಲಕ ಐದು ವರ್ಷದೊಳಗಿನ ಮಕ್ಕಳಲ್ಲಿ ಅತಿಸಾರ ಭೇದಿಯನ್ನು ತಡೆಗಟ್ಟುವ ಬಗ್ಗೆ ಅರಿವು ಮೂಡಿಸುವುದು ಹಾಗೂ ನಿಯಂತ್ರಣ ಮಾಡುವುದಕ್ಕಾಗಿ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಅಂಗನವಾಡಿಗಳಲ್ಲಿ ಓ.ಆರ್.ಎಸ್ ಮತ್ತು ಜಿಂಕ್ ಕಾರ್ನರ್‍ಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಅಪ್ಪಾಸಾಹೇಬ ನರಟ್ಟಿ ಅವರು ಹೇಳಿದರು.
ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ವಾರ್ತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಸೋಮವಾರ (ಮೇ 28) ಹಮ್ಮಿಕೊಂಡಿದ್ದ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ-2018ರ ಉದ್ಘಾಟನಾ ಸಮಾರಂಭವನ್ನು ನೆರವೇರಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಂಗವಾಗಿ ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ, ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮನೆಮನೆಗೆ ತೆರಳಿ, ಪಾಲಕರಿಗೆ ಓ.ಆರ್.ಎಸ್ ತಯಾರಿಸುವ ವಿಧಾನ, ಅತಿಸಾರ ಭೇದಿಯಿದ್ದಾಗ ಮಕ್ಕಳಿಗೆ ತಪ್ಪದೇ ದೈನಂದಿನ ಆಹಾರದ ಜೊತೆ ತಾಯಿ ಎದೆ ಹಾಲು ಉಣಿಸುವುದು, ಪರಿಸರ ನೈರ್ಮಲ್ಯ, ಕೈ ತೊಳೆಯುವ ವಿಧಾನ ಹಾಗೂ ಶೌಚಾಲಯದ ಬಳಕೆ ಕುರಿತು ತಿಳಿಸಿ ಕೊಡುವರು ಎಂದು ಹೇಳಿದರು.
ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಉದ್ಘಾಟನಾ- Tarun krantiಜಿಲ್ಲಾಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ವಿನಯ ದಾಸ್ತಿಕೊಪ್ಪ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಮಗುವಿನ ಮಲದ ರೂಪದಲ್ಲಿ ಬದಲಾವಣೆಯಾದಾಗ ಹಾಗೂ ಸಾಮಾನ್ಯಕ್ಕಿಂತ ಹೆಚ್ಚು ತಿಳಿಯಾಗಿ ಅಥವಾ ನೀರಿನಂತೆ ಆಗುವ ಭೇದಿ ಅತಿಸಾರ ಭೇದಿಯಾಗಿದೆ. ಇದನ್ನು ಹೋಗಲಾಡಿಸಲು ಸುಲಭ ಪರಿಹಾರವೆಂದರೆ ಓ.ಆರ್.ಎಸ್ ಮತ್ತು ಜಿಂಕ್‍ಗಳನ್ನು ಸೇವಿಸುವುದು ಎಂದು ತಿಳಿಸಿದರು.
ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ಆರ.ಬಿಎಸ್.ಕೆ ತಂಡದವರು ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಕೈ ತೊಳೆಯುವ ಸರಿಯಾದ ವಿಧಾನದ ಬಗ್ಗೆ ಪಾಕ್ಷಿಕ ಕಾರ್ಯಕ್ರಮದಲ್ಲಿ ತಿಳಿವಳಿಕೆ ನೀಡಿಲಿದ್ದಾರೆಂದು ಹೇಳಿದರು.
ಜಿಲ್ಲಾ ಆರ್.ಸಿ.ಎಚ್ ಅಧಿಕಾರಿಗಳಾದ ಡಾ. ಐ.ಪಿ.ಗಡಾದ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲಾದ್ಯಂತ ಮೇ 28 ರಿಂದ ಜೂನ್ 9 ರವರೆಗೆ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮ ಜರುಗಲಿದ್ದು, ಆಶಾ ಕಾರ್ಯಕರ್ತೆಯರು ಮನೆಗಳಿಗೆ ಭೇಟಿ ನೀಡಿದಾಗ ಪಾಲಕರು ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಿಗಳಾದ ಡಾ. ಶಶಿಧರ ನಾಡಗೌಡ, ಡಾ. ಅರುಣ ದೇಸಾಯಿ, ತಾಲೂಕು ಆರೋಗ್ಯಾಧಿಕಾರಿಗಳಾದ ಡಾ. ಸಂಜೀವ ನಾಂದ್ರೆ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ಪ್ರಕಾಶ ಹಕಾಟಿ ಸೇರಿದಂತೆ ಆರೋಗ್ಯ

ಇಲಾಖೆಯ ಸಿಬ್ಬಂದಿ ಹಾಗೂ ಇನ್ನಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಹಿರಿಯ ಆರೋಗ್ಯ ಸಹಾಯಕರಾದ ಸಿ.ಜಿ. ಅಗ್ನಿಹೋತ್ರಿ ಅವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.Diarrheal diarrhea is the inauguration of diarrhea 

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.  

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.