ಉತ್ತಮ ಸಮಾಜಕ್ಕಾಗಿ

news belgaum:/tarun kranti:ಕೆ.ಎಸ್‌.ಪುಟ್ಟಣ್ಣಯ್ಯ ಭಾನುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

Died of a heart attack.

0

ಮಂಡ್ಯ:(news belgaum)(tarun kranti)ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ರೈತ ಮುಖಂಡ ಕೆ.ಎಸ್‌.ಪುಟ್ಟಣ್ಣಯ್ಯ ಭಾನುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮಂಡ್ಯದಲ್ಲಿ ಆಯೋಜಿಸಲಾಗಿದ್ದ ಪ್ರೊ ಕಬಡ್ಡಿ ಪಂದ್ಯ ವೀಕ್ಷಿಸುತ್ತಿದ್ದ ವೇಳೆ ಹೃದಯಾಘಾತದಿಂದ ಕುಸಿದುಬಿದ್ದ ಅವರನ್ನು ನಗರದ ಮಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಫಲಕಾರಿಯಾಗದ ಹಿನ್ನೆಲೆ ಮೃತಪಟ್ಟರು.
1949 ರ ಡಿ.23 ರಂದು ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿಯಲ್ಲಿ ಜನಿಸಿದ್ದ ಕೆಎಸ್ ಪುಟ್ಟಣ್ಣಯ್ಯ 1983 ರಲ್ಲಿ ರೈತ ಸಂಘ ಸೇರಿ 1999 ರಲ್ಲಿ ರೈತ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಸಕ್ರಿಯ ರಾಜಕಾರಣದಲ್ಲೂ ಗುರುತಿಸಿಕೊಂಡಿದ್ದ ಪುಟ್ಟಣ್ಣಯ್ಯ 1994 ರಲ್ಲಿ ವಿಧಾನಸಭೆಗೆ ಮೊದಲ ಬಾರಿಗೆ ಆಯ್ಕೆಯಾಗಿದ್ದರು. 1999, 2004, 2008 ರ ವಿಧಾನಸಭಾ ಚುನಾವಣೆಗಳಲ್ಲಿ ಸೋಲು ಕಂಡಿದ್ದ ಅವರು 2013 ರಲ್ಲಿ 2 ನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ವರಾಜ್‌ ಇಂಡಿಯಾ ಪಕ್ಷದಿಂದ ಸ್ಪರ್ಧಿಸಲು ಅಣಿಯಾಗಿದ್ದರು.
ಕೆಎಸ್ ಪುಟ್ಟಣ್ಣನವರ ಮಕ್ಕಳು ವಿದೇಶದಲ್ಲಿ ಇದ್ದು, ಅವರು ಬುಧವಾರ ಆಗಮಿಸಲಿದ್ದಾರೆ, ಅವರು ಬಂದ ನಂತರ ಅಂತ್ಯಸಂಸ್ಕಾರ ನಡೆಯಲಿದೆ.Died of a heart attack.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.