ಉತ್ತಮ ಸಮಾಜಕ್ಕಾಗಿ

ಪ್ಲಾಸ್ಟಿಕ್ ಬಳಕೆ ತ್ಯಜಿಸಿ-ಪರಿಸರ ರಕ್ಷಿಸಿ

Discard plastic use - Environmental protection

0

ಬೆಳಗಾವಿ 🙁news belgaum) ಪ್ಲಾಸ್ಟಿಕ್ ಬಳಕೆ ಪರಿಸರಕ್ಕೆ ಅತ್ಯಂತ ಮಾರಕವಾಗಿದೆ. ಆದ್ದರಿಂದ ನಾವೆಲ್ಲರೂ ಪ್ಲಾಸ್ಟಿಕ್ ಬಳಕೆಯನ್ನು ತ್ಯಜಿಸಬೇಕು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಚಿಕ್ಕೋಡಿಯ ಪ್ರಾದೇಶಿಕ ಅಧಿಕಾರಿಗಳಾದ ಜಗದೀಶ ಐ.ಎಚ್ ಅವರು ಹೇಳಿದರು.
News Belgaum-ಪ್ಲಾಸ್ಟಿಕ್ ಬಳಕೆ ತ್ಯಜಿಸಿ-ಪರಿಸರ ರಕ್ಷಿಸಿ 2ಚಿಕ್ಕೋಡಿ ನಗರದ ಸಿ.ಎಲ್.ಇ. ಸಂಸ್ಥೆಯ ಬಸವೇಶ್ವರ ವೃತ್ತದಲ್ಲಿ ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ತಾಲೂಕು ಕಾನೂನು ಸೇವಾ ಸಮಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ ಹಾಗೂ ಇನ್ನಿತರ ಸಂಘ, ಸಂಸ್ಥೆಗಳ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರತಿಯೊಬ್ಬರೂ ಪ್ಲಾಸ್ಟಿಕ್‍ನಿಂದಾಗುವ ಹಾನಿಗಳ ಬಗ್ಗೆ ಅರಿತು ಪ್ಲಾಸ್ಟಿಕ್‍ನ್ನು ಮಿತವಾಗಿ ಬಳಸಬೇಕು. ಪರಿಸರದ ರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕೆಂದು ಹೇಳಿದರು.

News Belgaum-ಪ್ಲಾಸ್ಟಿಕ್ ಬಳಕೆ ತ್ಯಜಿಸಿ-ಪರಿಸರ ರಕ್ಷಿಸಿ 5
ಚಿಕ್ಕೋಡಿಯ 7ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಮಹಾಂತಪ್ಪ ಎ.ಡಿ. ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪ್ಲಾಸ್ಟಿಕ ಪಿಡುಗಿನಿಂದ ಪಂಚಭೂತಗಳನ್ನು ರಕ್ಷಿಸಬೇಕಾಗಿದೆ. ಪ್ಲಾಸ್ಟಿಕ ತೊಲಗಿಸಿ-ಪರಿಸರ ಉಳಿಸಿ ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಚಿಕ್ಕೋಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಪತಿ ಭಟ್ ಅವರು ಮಾತನಾಡಿ, ಮರಗಳ ನಾಶದಿಂದ ಪಕ್ಷಿಗಳು ನಶಿಸಿ ಹೋಗುತ್ತಿವೆ. ನಾವೆಲ್ಲಾ ಒಗ್ಗಟ್ಟಾಗಿ ಪರಿಸರ ಉಳಿಸಿ ಬೆಳೆಸಲು ಮತ್ತು ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಲು ಪ್ರಯತ್ನಿಸಬೇಕಾಗಿದೆ ಎಂದರು.
ಹಿರಿಯ ದಿವಾಣಿ ನ್ಯಾಯಾಧೀಶರಾದ ವಿಜಯ ದೇವರಾಜ ಅರಸ, ಪ್ರಧಾನ ದಿವಾಣಿ ನ್ಯಾಯಾಧೀಶರಾದ ವಿಜಯಕುಮಾರ ಎಸ್. ಹಿರೇಮಠ, ಪುರಸಭೆ ಮುಖ್ಯಾಧಿಕಾರಿಗಳಾದ ಜಗದೀಶ ಬಿ. ಹುಲಗೆಜ್ಜಿ, ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿಗಳಾದ ಶಿವಾನಂದ ನಾಯಿಕವಾಡಿ, ವಲಯ ಅರಣ್ಯ ಅಧಿಕಾರಿಗಳಾದ ಎಮ್. ಬಿ. ಗಣಾಚಾರಿ, ರವೀಂದ್ರ ಪಟ್ಟಣಶೆಟ್ಟಿ ಹಾಗೂ ಸಿ.ಎಲ್.ಇ. ಸಂಸ್ಥೆಯ ಆಡಳಿತಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಪ್ರಾಂಶುಪಾಲರಾದ ಎಸ್. ಬಿ. ಉಕ್ಕಲಿ ಸ್ವಾಗತಿಸಿದರು. ಶ್ರೀಮತಿ ಸಂಗೀತಾ ಕಮತೆ ವಂದಿಸಿದರು. ಶ್ರೀಮತಿ ಲಕ್ಷ್ಮಿ ಹಿರೇಮಠ ನಿರೂಪಿಸಿದರು.

ಜಾಗೃತಿ ಜಾಥಾ:
ಕಾರ್ಯಕ್ರಮಕ್ಕೂ ಮುಂಚೆ ನಗರದ ಬಸವೇಶ್ವರ ವೃತ್ತದಿಂದ ಪರಿಸರ ಜಾಗೃತಿ ಜಾಥಾ ಜರುಗಿತು. ಹಿರಿಯ ದಿವಾಣಿ ನ್ಯಾಯಾಧೀಶರಾದ ವಿಜಯ ದೇವರಾಜ ಅರಸ ಅವರು ಜಾಥಾಗೆ ಚಾಲನೆ ನೀಡಿದರು.
ಬಸವೇಶ್ವರ ವೃತ್ತದಿಂದ ಆರಂಭವಾದ ಜಾಥಾ ಕೋರೆನಗರ, ಕೆ.ಸಿ. ರಸ್ತೆ, ಹುದಾರ ಗಲ್ಲಿ ಮಾರ್ಗವಾಗಿ ಸಿ.ಎಲ್.ಸಿ ಸಂಸ್ಥೆ ತಲುಪಿತು. ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಪರಿಸರ ಘೋಷಣೆಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು. Discard plastic use – Environmental protection   

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.  

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.