ಉತ್ತಮ ಸಮಾಜಕ್ಕಾಗಿ

ಕುಡಿಯುವ ನೀರಿನ ತೊಂದರೆ ಹಾಗೂ ಶೌಚಾಲಯಗಳನ್ನು ನಿರ್ಮಿಸದಿದ್ದರೇ ಶಿಸ್ತು ಕ್ರಮ: ಮೇಘಣ್ಣವರ ಎಚ್ಚರಿಕೆ

Disciplinary action: Meghanna's warning

0

ಚಿಕ್ಕೋಡಿ : (tarun kranti) ಹಾಗೂ ಗೋಕಾಕ ತಾಲೂಕಿನ ಐದು ಗ್ರಾಮ ಪಂಚಾಯತಗಳಲ್ಲಿ ಸರಿಯಾದ ಪ್ರಗತಿ ನಡೆಯದೇ ಇರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಮೇಘಣ್ಣವರ ಅವರು, ಫೆ.19 ರೊಳಗಾಗಿ ಆ ಗ್ರಾಮಗಳಲ್ಲಿ ಬಾಕಿ ಉಳಿದಿರುವ ಶೌಚಾಲಯಗಳನ್ನು ನಿರ್ಮಿಸದಿದ್ದರೇ ಸಂಬಂಧಪಟ್ಟ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು, ನೂಡಲ್ ಅಧಿಕಾರಿಗಳು ಹಾಗೂ ಪಿಡಿಒಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

  • ಕುಡಿಯುವ ನೀರಿನ ಕುರಿತು ವರದಿ ನೀಡಿ:

ಕುಡಿಯುವ ನೀರಿನ ತೊಂದರೆ ಹಾಗೂ ಶೌಚಾಲಯಗಳನ್ನು ನಿರ್ಮಿಸದಿದ್ದರೇ ಶಿಸ್ತು ಕ್ರಮ: ಮೇಘಣ್ಣವರ ಎಚ್ಚರಿಕೆ- Tarun kranti
ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ಯಾವ ರೀತಿಯಾಗಿ ವ್ಯವಸ್ಥೆ ಮಾಡಿಕೊಳ್ಳಬೇಕು

ಎಂಬ ಬಗ್ಗೆ ಸರ್ಕಾರಕ್ಕೆ ವರದಿ ನೀಡಬೇಕಾಗಿದ್ದು, ಈ ನಿಟ್ಟಿನಲ್ಲಿ ಸಂಬಂಧಪಟ್ಟ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ ಅಧಿಕಾರಿಗಳು ಶೀಘ್ರವಾಗಿ ವರದಿ ನೀಡಬೇಕು ಎಂದು ತಿಳಿಸಿದರು.
ನೀರನ್ನು ಹಿತಮಿತವಾಗಿ ಬಳಸುವಂತೆ ಜನರಲ್ಲಿ ಜಾಗೃತಿ ಮೂಡಿಸಬೇಕು ಹಾಗೂ ನದಿ, ಕೆರೆಗಳ ನೀರನ್ನು ಸಂರಕ್ಷಿಸುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗ್ರಾಮಸ್ಥರಲ್ಲಿ ತಿಳಿವಳಿಕೆ ಮೂಡಿಸಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಎಸ್.ಬಿ. ಮುಳ್ಳಳ್ಳಿ ಅವರು ಸ್ವಾಗತಿಸಿ, ನಿರೂಪಿಸಿದರು. ಜಿಲ್ಲೆಯ ಎಲ್ಲ ತಾಲೂಕು ಪಂಚಾಯತಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ನೂಡಲ್ ಅಧಿಕಾರಿಗಳು, ಪಿಡಿಒಗಳು ಸೇರಿದಂತೆ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಇನ್ನಿತರ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. Disciplinary action: Meghanna’s warning

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

 

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: