ಉತ್ತಮ ಸಮಾಜಕ್ಕಾಗಿ

ಆರೋಗ್ಯ ಸೇವೆ ಜನರಿಗೆ ತಲುಪಿಸಲು ಜಿಲ್ಲಾಧಿಕಾರಿ ಸೂಚನೆ;

District Deputy Commissioner to Deliver Health Services to People;

0

ಇಂದ್ರಧನುಷ್ ಲಸಿಕಾ ಅಭಿಯಾನ 13 ರಿಂದ
News Belgaum-ಆರೋಗ್ಯ ಸೇವೆ ಜನರಿಗೆ ತಲುಪಿಸಲು ಜಿಲ್ಲಾಧಿಕಾರಿ ಸೂಚನೆ;ಬೆಳಗಾವಿ:(news belgaum) ಮುಂದುವರೆದ ಗ್ರಾಮ ಸ್ವರಾಜ ಅಭಿಯಾನದಡಿ ಇದೇ ಆಗಸ್ಟ್ 13ರಿಂದ ಜಿಲ್ಲೆಯಾದ್ಯಂತ ಇಂದ್ರಧನುಷ್ ಲಸಿಕಾ ಅಭಿಯಾನ ನಡೆಯಲಿದ್ದು, ಯಾವುದೇ ಮಗು ಲಸಿಕೆಯಿಂದ ವಂಚಿತಗೊಳ್ಳದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಜಿಯಾವುಲ್ಲಾ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ (ಆ.8) ನಡೆದ ಮುಂದುವರೆದ ಗ್ರಾಮ ಸ್ವರಾಜ್ ಅಭಿಯಾನದಡಿ ಇಂದ್ರಧನುಷ್ ಅಭಿಯಾನದ ಜಿಲ್ಲಾ ಕಾರ್ಯಪಡೆಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆಗಸ್ಟ್ 13, 14, 17 ಮತ್ತು 18 ರಂದು; ಸೆಪ್ಟೆಂಬರ್ 10, 11, 14 ಮತ್ತು 15ನೇ ತಾರೀಖು ಹಾಗೂ ಅಕ್ಟೋಬರ್ 9, 10, 12 ಮತ್ತು 15ನೇ ತಾರೀಖಿನಂದು ಜಿಲ್ಲೆಯಾದ್ಯಂತ ಇಂದ್ರಧನುಷ್ ಲಸಿಕಾ ಅಭಿಯಾನ ನಡೆಯಲಿದೆ.
ಇಂದ್ರಧನುಷ್ ಅಭಿಯಾನವು ಜಿಲ್ಲೆಯ ಎಲ್ಲ ಹಳ್ಳಿ ಹಾಗೂ ನಗರ ಪ್ರದೇಶಗಳಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ 0-2 ವರ್ಷ ಹಾಗೂ 5-6 ವರ್ಷದೊಳಗಿನ ಮಕ್ಕಳು ಮತ್ತು ಗರ್ಭಿಣಿಯರನ್ನು ಗುರುತಿಸಿ ಶೇ.100 ರಷ್ಟು ಲಸಿಕೆ ನೀಡುವ ಗುರಿ ಹೊಂದಲಾಗಿದೆ.
ಅಭಿಯಾನದ ವೇಳೆ ಲಂಬಾಣಿ ತಾಂಡಾಗಳು, ಕೊಳಚೆ ಪ್ರದೇಶಗಳು ಸೇರಿದಂತೆ ಬಡಜನರು ಹಾಗೂ ಅಶಿಕ್ಷಿತರು ವಾಸಿಸುವ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ವಹಿಸಬೇಕು. ಯಾವುದೇ ಮಗು ಅಥವಾ ಗರ್ಭಣಿಯರು ಲಸಿಕೆಯಿಂದ ವಂಚಿತರಾಗದಂತೆ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಾರ್ಮಿಕ/ಗಣಿ ಇಲಾಖೆ/ನಗರಾಭಿವೃದ್ಧಿ ಕೋಶ ಮತ್ತು ಮಹಾನಗರ ಪಾಲಿಕೆಯ ಅಧಿಕಾರಿಗಳ ಸಮನ್ವಯದೊಂದಿಗೆ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ತಿಳಿಸಿದರು.

746 ಲಸಿಕಾ ಕೇಂದ್ರಗಳು:
ಮುಂದುವರೆದ ಗ್ರಾಮ ಸ್ವರಾಜ ಅಭಿಯಾನದಡಿ ಇದೇ ಆಗಸ್ಟ್ 13ರಿಂದ ಜಿಲ್ಲೆಯಾದ್ಯಂತ ಇಂದ್ರಧನುಷ್ ಲಸಿಕಾ ಅಭಿಯಾನದಡಿಯಲ್ಲಿ ಜಿಲ್ಲೆಯಯಲ್ಲಿ 0-2 ವರ್ಷದೊಳಗಿನ 11,816 ಮಕ್ಕಳು; 5-6 ವರ್ಷದೊಳಗಿನ 4084 ಮಕ್ಕಳು ಹಾಗೂ 2181 ಗರ್ಭಿಣಿಯರಿಗೆ ಇಂದ್ರಧನುಷ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ.
ಇದಕ್ಕಾಗಿ ಜಿಲ್ಲೆಯಾದ್ಯಂತ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳು ಸೇರಿದಂತೆ ಒಟ್ಟಾರೆ 746 ಲಸಿಕಾ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಜಿಲ್ಲಾ ಆರ್‍ಸಿಎಚ್ ಅಧಿಕಾರಿ ಡಾ.ಐ.ಪಿ.ಗಡಾದ ಸಭೆಯಲ್ಲಿ ತಿಳಿಸಿದರು.

ಜಂತುಹುಳು ನಿವಾರಣಾ ದಿನ:
ಆಗಸ್ಟ್ 10 ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ 1-19 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಮಾತ್ರೆ ನೀಡಲಾಗುವುದು ಎಂದು ಡಾ.ಗಡಾದ ಅವರು ವಿವರಿಸಿದರು.
ಜಿಲ್ಲೆಯ ಪ್ರತಿ ಶಾಲೆಗಳಲ್ಲೂ ನಿಯಮಿತವಾಗಿ ಆರೋಗ್ಯ ತಪಾಸಣೆ ನಡೆಸಬೇಕು; ಆಶಾ/ಅಂಗನವಾಡಿ ಕಾರ್ಯಕರ್ತೆಯರಿಗೆ ಆರೋಗ್ಯ ಇಲಾಖೆಯ ಯೋಜನೆಗಳು ಹಾಗೂ ಲಸಿಕಾ ಕಾರ್ಯಕ್ರಮಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಮೂಲಕ ಎಲ್ಲ ಜನರಿಗೂ ಆರೋಗ್ಯ ಸೌಲಭ್ಯ ತಲುಪಿಸಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಜಿಯಾವುಲ್ಲಾ ನಿರ್ದೇಶನ ನೀಡಿದರು.
ಅದೇ ರೀತಿ ಆಗಸ್ಟ್ 9ರಂದು ಜಿಲ್ಲೆಯಾದ್ಯಂತ ನಡೆಯುವ ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನವನ್ನು ಕೂಡ ಯಶಸ್ವಿಯಾಗಿ ನಡೆಸುವಂತೆ ತಿಳಿಸಿದರು.

ಆರೋಗ್ಯ ಇಲಾಖೆಯ ಅಧಿಕಾರಿಗಳು ಕ್ಷೇತ್ರಭೇಟಿ ಹಮ್ಮಿಕೊಂಡು ಸಾರ್ವಜನಿಕರಿಗೆ ಸರ್ಕಾರಿ ಸೇವೆಗಳನ್ನು ಸಮರ್ಪಕವಾಗಿ ತಲುಪಿಸುವಂತೆ ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಪ್ಪಾಸಾಹೇಬ್ ನರಟ್ಟಿ, ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎ.ಬಿ.ಪುಂಡಲೀಕ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಡಾ.ಪ್ರವೀಣ ಬಾಗೇವಾಡಿ, ಜಿಲ್ಲಾ ಸರ್ಜನ್ ಡಾ.ಖಾಜಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.  

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.