ಉತ್ತಮ ಸಮಾಜಕ್ಕಾಗಿ

news belgaum)ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ವಸತಿ ನಿಲಯಗಳಲ್ಲಿನ ಅವ್ಯವಸ್ಥೆ ಸರಿಪಡಿಸಿ – ಜಿಲ್ಲಾಧಿಕಾರಿ ಜಿಯಾವುಲ್ಲಾ

District Level Conscious and Surveillance Committee Meeting Corruption in Hostels - Deputy Commissioner JIWULLA

0

ಬೆಳಗಾವಿ: (news belgaum)ಜಿಲ್ಲೆಯ ವಸತಿ ನಿಲಯಗಳಲ್ಲಿರುವ ಅವ್ಯವಸ್ಥೆಯನ್ನು ತ್ವರಿತವಾಗಿ ಸರಿಪಡಿಸಬೇಕು ಎಂದು ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಲ್ಲಿನ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಬುಧವಾರ (ಮಾ.21) ಹಮ್ಮಿಕೊಂಡಿದ್ದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ದೌರ್ಜನ್ಯ ನಿಯಂತ್ರಣ ಕುರಿತ ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಕೆಲವು ವಸತಿ ನಿಲಯಗಳಲ್ಲಿ ಮೂಲಭೂತ ಸೌಕರ್ಯಗಳಿಲ್ಲ ಹಾಗೂ ಅಲ್ಲಿ ಅವ್ಯವಸ್ಥೆ ಇದೆ ಎಂದು ದೂರುಗಳು ಕೇಳಿ ಬರುತ್ತಿದ್ದು, ಈ ನಿಟ್ಟಿನಲ್ಲಿ ವಸತಿ ನಿಲಯಗಳಲ್ಲಿ ಎಲ್ಲ ಅಗತ್ಯ ಸೌಕರ್ಯಗಳನ್ನು ಒದಗಿಸಿ, ಮಕ್ಕಳಿಗೆ ಅನುಕೂಲವಾಗುವಂತೆ ನೋಡಿಕೊಳ್ಳಬೇಕೆಂದು ತಿಳಿಸಿದರು.
ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ವಸತಿ ನಿಲಯಗಳಲ್ಲಿನ ಅವ್ಯವಸ್ಥೆ ಸರಿಪಡಿಸಿ - ಜಿಲ್ಲಾಧಿಕಾರಿ ಜಿಯಾವುಲ್ಲಾ- Tarun krantiಜಿಲ್ಲಾಸ್ಪತ್ರೆ ಹಾಗೂ ತಾಲೂಕು ಅಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ಬರುವ ಎಸ್ಸಿ, ಎಸ್ಟಿ ಬಡ ರೋಗಿಗಳನ್ನು ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಸತಾಯಿಸದೇ ಅವರಿಗೆ ಸೂಕ್ತ ಚಿಕಿತ್ಸೆ ನೀಡಬೇಕೆಂದು ಹೇಳಿದರು.
ಹುಕ್ಕೇರಿ ತಾಲೂಕು ಸೇರಿದಂತೆ ಜಿಲ್ಲೆಯ ಅನೇಕ ಕಡೆ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಎನ್.ಜಿ.ಒ ಗಳಿಂದ ಬಿಸಿಯೂಟವನ್ನು ಸರಬರಾಜು ಮಾಡಲಾಗುತ್ತಿದೆ. ಬಿಸಿಯೂಟದಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ಸಂಬಂಧಪಟ್ಟ ಎನ್.ಜಿ.ಒ ಗಳಿಗೆ ಸೂಚಿಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ವಿವಿಧ ಸರ್ಕಾರಿ ಇಲಾಖೆಗಳ ವತಿಯಿಂದ ಸರ್ಕಾರಿ ಕಾರ್ಯಕ್ರಮ ಹಾಗೂ ಯೋಜನೆಗಳಲ್ಲಿ ಹಳೇ ಎನ್.ಜಿ.ಒ ಗಳಿಗೆ ಸಹಕಾರ ನೀಡಲಾಗುತ್ತಿದೆ. ಅದೇ ರೀತಿ ಹೊಸ ಹೊಸ ಎನ್.ಜಿ.ಒ ಗಳಿಗೂ ಇಲಾಖೆಗಳಿಂದ ಅಗತ್ಯ ಸಹಕಾರ ನೀಡಬೇಕು ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರಕುಮಾರ ರೆಡ್ಡಿ ಅವರು ಮಾತನಾಡಿ, ಎಸ್.ಸಿ ಮತ್ತು ಎಸ್.ಟಿ ಜನಾಂಗದವರ ಮೇಲೆ ಹಲ್ಲೆಯಾದಾಗ ಅವರು ದೂರು ನೀಡಲು ಪೊಲೀಸ್ ಠಾಣೆಗೆ ಬಂದರೇ ಕೂಡಲೇ ದೂರು ದಾಖಲಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಎಸ್ಸಿ. ಎಸ್ಟಿ ಜನರ ಮೇಲಿನ ವಿವಿಧ ಪ್ರಕರಣಗಳಲ್ಲಿ ಫಲಾನುಭವಿಗಳಿಗೆ ಮೂರು ತಿಂಗಳಲ್ಲಿ ರೂ. 14.57 ಲಕ್ಷ ವಿತರಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಎನ್. ಮುನಿರಾಜು ಅವರು ತಿಳಿಸಿದರು.
ಬ್ಯಾಂಕ್‍ಗಳಿಂದ ಎಸ್ಸಿ, ಎಸ್ಟಿ ಜನರಿಗೆ ಸಾಲ ಸೌಲಭ್ಯ ನೀಡುವುದು, ಗುತ್ತಿಗೆದಾರರಿಗೆ ಸಹಕಾರ, ಅತಿಥಿ ಶಿಕ್ಷಕರ ನೇಮಕಾತಿಯಲ್ಲಿ ಮೀಸಲಾತಿ, ವಿದ್ಯಾರ್ಥಿಗಳ ಸಹಾಯಧನ ಸೇರಿದಂತೆ ವಿವಿಧ ವಿಷಯಗಳನ್ನು ಎಸ್.ಸಿ, ಎಸ್.ಟಿ ಸಮುದಾಯದ ಮುಖಂಡರು ಸಭೆಯಲ್ಲಿ ಪಸ್ತಾಪಿಸಿದರು.
ಪೊಲೀಸ್ ಆಯುಕ್ತರಾದ ಡಾ|| ಡಿ.ಸಿ. ರಾಜಪ್ಪ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್. ಆರ್, ಅಪರ ಜಿಲ್ಲಾಧಿಕಾರಿ ಡಾ|| ಎಚ್.ಟಿ. ಬೂದಿಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಮಹಾನಗರ ಪಾಲಿಕೆ, ಪೊಲೀಸ್, ಶಿಕ್ಷಣ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಎಸ್ಸಿ, ಎಸ್ಟಿ ಸಮುದಾಯದ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು. District Level Conscious and Surveillance Committee Meeting Corruption in Hostels – Deputy Commissioner JIWULLA

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

 

Leave A Reply

 Click this button or press Ctrl+G to toggle between Kannada and English

Your email address will not be published.