ಉತ್ತಮ ಸಮಾಜಕ್ಕಾಗಿ

ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆ ಕಾಲು ಬಾಯಿ ರೋಗ ಲಸಿಕೆ ಕಾರ್ಯಕ್ರಮ ಯಶಸ್ವಿಗೊಳಿಸಿ: ಜಿಲ್ಲಾಧಿಕಾರಿ

District level management committee meet successful foot vaccine vaccine program: Deputy Commissioner

0

ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆ

News Belgaum-ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆ ಕಾಲು ಬಾಯಿ ರೋಗ ಲಸಿಕೆ ಕಾರ್ಯಕ್ರಮ ಯಶಸ್ವಿಗೊಳಿಸಿ: ಜಿಲ್ಲಾಧಿಕಾರಿಬೆಳಗಾವಿ:(news belgaum) 14ನೇ ಸುತ್ತಿನ ಕಾಲು ಬಾಯಿ ರೋಗದ ಲಸಿಕಾ ಕಾರ್ಯಕ್ರಮವನ್ನು ವಿವಿಧ ಇಲಾಖೆಗಳ ಸಹಕಾರದೊಂದಿಗೆ ಯಶಸ್ವಿಯಾಗಿ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ ಅವರು ಸೂಚನೆ ನೀಡಿದರು.
ಇಲ್ಲಿನ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶುಕ್ರವಾರ (ಮೇ 25) ಹಮ್ಮಿಕೊಂಡಿದ್ದ 14ನೇ ಸುತ್ತಿನ ಕಾಲು ಬಾಯಿ ರೋಗದ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜೂನ್ 1 ರಿಂದ ಒಂದು ತಿಂಗಳ ಕಾಲ ಜಿಲ್ಲಾದ್ಯಂತ 14ನೇ ಸುತ್ತಿನ ಕಾಲು ಬಾಯಿ ರೋಗದ ಲಸಿಕಾ ಕಾರ್ಯಕ್ರಮ ಜರುಗಲಿದ್ದು, ಪಶುಪಾಲನೆ ಮತ್ತು ವೈದ್ಯಕೀಯ ಸೇವಾ ಇಲಾಖೆಯವರೊಂದಿಗೆ ಇನ್ನಿತರ ಇಲಾಖೆಯವರು ಸಹಕಾರ ನೀಡಿದರೆ ಮಾತ್ರ ಈ ಕಾರ್ಯಕ್ರಮ ಯಶಸ್ವಿಯಾಗಲಿದೆ ಎಂದು ತಿಳಿಸಿದರು.
ಕಾಲು ಬಾಯಿ ರೋಗದ ಕುರಿತು ರೈತರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ಲಸಿಕೆಯಿಂದ ಯಾವುದೇ ತೊಂದರೆಯಾಗುವುದಿಲ್ಲ ಎಂಬ ಕುರಿತು ರೈತರಿಗೆ ತಿಳಿಸಬೇಕು. ಜಿಲ್ಲೆಯಲ್ಲಿ ಗುರುತಿಸಿರುವ ಎಲ್ಲ ಜಾನುವಾರುಗಳಿಗೂ ಲಸಿಕೆಯನ್ನು ನೀಡಬೇಕೆಂದು ಹೇಳಿದರು.
ಆರೋಗ್ಯ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಶಿಕ್ಷಕಿಯರು ತಮ್ಮ ಗ್ರಾಮಗಳ ವ್ಯಾಪ್ತಿಯಲ್ಲಿನ ರೈತರಿಗೆ ಕಾಲು ಬಾಯಿ ರೋಗದ ಬಗ್ಗೆ ತಿಳಿಸಿ, ಜಾನುವಾರುಗಳಿಗೆ ಲಸಿಕೆ ಹಾಕಿಸುವಂತೆ ಅರಿವು ಮೂಡಿಸಬೇಕೆಂದು ಹೇಳಿದರು.
ಗೋಕಾಕ, ಅಥಣಿ, ಚಿಕ್ಕೋಡಿ ಹಾಗೂ ರಾಯಬಾಗ ತಾಲೂಕುಗಳಲ್ಲಿ ಈ ಕುರಿತು ಹೆಚ್ಚಿನ ಜಾಗೃತಿ ಮೂಡಿಸಿ, ಲಸಿಕೆ ಹಾಕಿಸುವ ಅಗತ್ಯವಿದೆ ಎಂದು ತಿಳಿಸಿದರು.
ಬೀದಿಯಲ್ಲಿ ತಿರುಗಾಡುವ ಅಕ್ರಮ ದನ, ಕರುಗಳು ಹಾಗೂ ಹಂದಿಗಳ ನಿಯಂತ್ರಣಕ್ಕೆ ಕ್ರಮಕೈಗೊಳ್ಳಬೇಕು. ಅವುಗಳ ಹಾವಳಿಯನ್ನು ತಪ್ಪಿಸಬೇಕೆಂದು ಮಹಾನಗರ ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸೂಚಿಸಿದರು. ಹಂದಿಗಳ ಪಾರ್ಮ್‍ಗಳಿಗೂ ತೆರಳಿ, ಮಾಲೀಕರಿಗೆ ಕಾಲು ಬಾಯಿ ರೋಗದ ಬಗ್ಗೆ ತಿಳಿಸಿ ಲಸಿಕೆ ನೀಡಬೇಕೆಂದು ತಿಳಿಸಿದರು.
ಪಶುಪಾಲನೆ ಮತ್ತು ವೈದ್ಯಕೀಯ ಸೇವಾ ಇಲಾಖೆಯ ಡಿ.ಎಲ್. ಹವಾಲ್ದಾರ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ವರ್ಷದಲ್ಲಿ 2 ಬಾರಿ ಜಾನುವಾರುಗಳಿಗೆ ಕಾಲು ಬಾಯಿ ರೋಗದ ಲಸಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಾ ಬರಲಾಗಿದ್ದು, ಇದು 14ನೇ ಸುತ್ತಿನ ಲಸಿಕಾ ಕಾರ್ಯಕ್ರಮವಾಗಿದೆ ಎಂದು ಹೇಳಿದರು.
ಕಾಲು ಬಾಯಿ ರೋಗವೂ ಒಂದು ಜಾನುವಾರಿನಿಂದ ಮತ್ತೊಂದು ಜಾನುವಾರಿಗೆ ಹರಡುತ್ತದೆ. ಇದರಿಂದ ಜಾನುವಾರುಗಳು ಮೃತಪಡುವುದು ಕಡಿಮೆ. ಆದರೆ ಹಾಲಿನ ಉತ್ಪಾದನೆ ಹಾಗೂ ಇನ್ನಿತರ ಸಮಸ್ಯೆಗಳು ಜಾನುವಾರುಗಳಲ್ಲಿ ಉಂಟಾಗುತ್ತವೆ. ಮನುಷ್ಯರಿಗೆ ಈ ರೋಗ ಹರಡುವುದಿಲ್ಲ ಎಂದು ತಿಳಿಸಿದರು.
ಜೂನ್ ತಿಂಗಳಿನಲ್ಲಿ ಒಂದು ವಾರಕಾಲ ಜಿಲ್ಲಾದ್ಯಂತ ಲಸಿಕಾ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಇಲಾಖೆಯ ಸಿಬ್ಬಂದಿ ಮನೆಮನೆಗೆ ತೆರಳಿ ಜಾನುವಾರುಗಳಿಗೆ ಲಸಿಕೆಯನ್ನು ನೀಡಲಿದ್ದಾರೆ. ಜಿಲ್ಲೆಯ 10 ತಾಲೂಕುಗಳಿಂದ ಪಶು ಇಲಾಖೆ ಹಾಗೂ ಇತರ ಇಲಾಖೆಗಳ 675 ಸಿಬ್ಬಂದಿ ಒಟ್ಟು 110 ತಂಡಗಳಲ್ಲಿ ಲಸಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಹೇಳಿದರು.
ಕಾಲು ಬಾಯಿ ರೋಗದ ಲಸಿಕಾ ಕಾರ್ಯಕ್ರಮದ ಜಿಲ್ಲಾ ಉಸ್ತುವಾರಿ ಅಧಿಕಾರಿ ಎಚ್.ಕೆ. ಯರಗಟ್ಟಿ, ಜಿಲ್ಲಾ ಪಶು ಇಲಾಖೆಯ ಮುಖ್ಯ ವೈದ್ಯಾಧಿಕಾರಿ ಡಾ|| ಅಶೋಕ ಹೋಳ, ಎಂ.ಎಲ್. ಗಣಿ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಅಮರೇಶ ನಾಯಕ ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕುಗಳ ಪಶು ಇಲಾಖೆಯ ಸಹಾಯಕ ನಿರ್ದೇಶಕರು, ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ಇನ್ನಿತರ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.District level management committee meet successful foot vaccine vaccine program: Deputy Commissioner

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

 

Leave A Reply

 Click this button or press Ctrl+G to toggle between Kannada and English

Your email address will not be published.