ಉತ್ತಮ ಸಮಾಜಕ್ಕಾಗಿ

ಡಾ.ಬಾಬಾಸಾಹೇಬ್ ಅಂಬೇಡ್ಕರ್ 127ನೇ ಜನ್ಮದಿನಾಚರಣೆ: ಎಲ್ಲೆಡೆ ಸಂಭ್ರಮ ಅಂಬೇಡ್ಕರ್ ಸಾಧನೆ ಅಗಾಧ: ಅಲೋಕ್ ಕುಮಾರ

Dr. Babasaheb Ambedkar 127th Birthday Celebration: Everywhere Ambedkar's achievement is overwhelming: Alok Kumar

0

ಬೆಳಗಾವಿ:(news belagavi)ಅಸ್ಪøಶ್ಯತೆ ಹಾಗೂ ಅಸಮಾನತೆ ನೋವುಂಡು ವಿಶ್ವರತ್ನವಾಗಿ ಹೊರಹೊಮ್ಮಿದ ಡಾ|| ಬಾಬಾಸಾಹೇಬ್ ಅಂಬೇಡ್ಕರ್ ಅವರು ಪ್ರತಿಪಾದಿಸಿದ ಧಾರ್ಮಿಕ ಸ್ವಾತಂತ್ರ್ಯ ಮತ್ತು ಬದುಕಿನ ಹಕ್ಕು ಸರ್ವಕಾಲಕ್ಕೂ ಪ್ರಸ್ತುತವಾಗಿದೆ ಎಂದು ಬೆಳಗಾವಿ ಉತ್ತರ ವಲಯ ಐಜಿಪಿ ಅಲೋಕ್ ಕುಮಾರ ಅವರು ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ನಗರದ ಡಾ|| ಬಿ.ಆರ್. ಅಂಬೇಡ್ಕರ್ ಉದ್ಯಾನವನದಲ್ಲಿ ಶನಿವಾರ (ಏ.14) ರಂದು ಏರ್ಪಡಿಸಲಾಗಿದ್ದ ಡಾ|| ಬಾಬಾಸಾಹೇಬ್ ಅಂಬೇಡ್ಕರ್ ಅವರ 127ನೇ ಜನ್ಮದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ತೀವ್ರ ಸಾಮಾಜಿಕ ವಿರೋಧದ ನಡುವೆಯೂ ಅಸಮಾನತೆ ವಿರುದ್ಧ ಹೋರಾಟ ನಡೆಸಿ ಜಗಮೆಚ್ಚುವ ಸಂವಿಧಾನ ರಚಿಸಿದ ಅಂಬೇಡ್ಕರ್ ಅವರ ಸಾಧನೆ ಅಗಾಧ ಎಂದು ಬಣ್ಣಿಸಿದರು.
News Belgaum-ಡಾ.ಬಾಬಾಸಾಹೇಬ್ ಅಂಬೇಡ್ಕರ್ 127ನೇ ಜನ್ಮದಿನಾಚರಣೆ: ಎಲ್ಲೆಡೆ ಸಂಭ್ರಮ ಅಂಬೇಡ್ಕರ್ ಸಾಧನೆ ಅಗಾಧ: ಅಲೋಕ್ ಕುಮಾರ News Belgaum-ಡಾ.ಬಾಬಾಸಾಹೇಬ್ ಅಂಬೇಡ್ಕರ್ 127ನೇ ಜನ್ಮದಿನಾಚರಣೆ: ಎಲ್ಲೆಡೆ ಸಂಭ್ರಮ ಅಂಬೇಡ್ಕರ್ ಸಾಧನೆ ಅಗಾಧ: ಅಲೋಕ್ ಕುಮಾರ 1ಶಿಕ್ಷಣದಿಂದ ಮಾತ್ರ ಅಸಮಾನತೆ ಮತ್ತು ಅಸ್ಪøಶ್ಯತೆ ನಿರ್ಮೂಲನೆ ಸಾಧ್ಯ ಎಂದು ಅಭಿಪ್ರಾಯಪಟ್ಟ ಅವರು, ಶಿಕ್ಷಣದ ಮೂಲಕವೇ ಇಂತಹ ಅನಿಷ್ಟಗಳ ನಿರ್ಮೂಲನೆಗೆ ಮುಂದಾಗಬೇಕು ಎಂದು ಕರೆ ನೀಡಿದರು.
ಅಸ್ಪøಶ್ಯತೆ ಇನ್ನೂ ಜೀವಂತ ಇರುವುದು ಅಘಾತಕಾರಿ ಎಂದು ಕಳವಳ ವ್ಯಕ್ತಪಡಿಸಿದ ಅವರು, ಇಂತಹ ಆಚರಣೆ ಮಾಡುವವರ ವಿರುದ್ಧ ರೌಡಿಶೀಟರ್ ತೆರೆಯಲಾಗುವುದು ಎಂದು ಅಲೋಕ್ ಕುಮಾರ ಅವರು ಎಚ್ಚರಿಕೆ ನೀಡಿದರು.
ಮುಖ್ಯ ಅತಿಥಿಯಾಗಿ ಮಾತನಾಡಿದ ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ|| ಡಿ.ಸಿ. ರಾಜಪ್ಪ, ಹಕ್ಕುಗಳಿಗಾಗಿ ಹೋರಾಟ ಅಗತ್ಯ ಎಂಬುದನ್ನು ಸಂವಿಧಾನದ ಮೂಲಕ ತೋರಿಸಿಕೊಟ್ಟವರು ಡಾ|| ಅಂಬೇಡ್ಕರ್. ಅವರ ಆಶಯದಂತೆ ಸಮಾನತೆಯ ದೃಷ್ಟಿಕೋನ ಬೆಳೆಸಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.
ಇನ್ನೋರ್ವ ಅತಿಥಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್ ಅವರು ಮಾತನಾಡಿ, ಪ್ರಜಾಪ್ರಭುತ್ವ ಯಶಸ್ಸಿಗೆ ಎಲ್ಲರೂ ಮೇ.12 ರಂದು ಕಡ್ಡಾಯ ಮತದಾನ ಮಾಡಬೇಕು ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ ಅವರು, ಅಂಬೇಡ್ಕರ್ ಪರಿಶಿಷ್ಟರಿಗೆ ಮೀಸಲು ಅಲ್ಲ. ಸಮಾಜದ ಎಲ್ಲ ಜನರಿಗೂ ನ್ಯಾಯ ಒದಗಿಸಿದ ನಿಜವಾದ ಜನನಾಯಕ ಎಂದು ಬಣ್ಣಿಸಿದರು.
ಅಂಬೇಡ್ಕರ್ ಅವರ ರೀತಿ ನಮ್ಮ ಮಕ್ಕಳಲ್ಲಿ ಸ್ವಾಭಿಮಾನ ಬೆಳೆಸಬೇಕು. ಸರ್ಕಾರ ನೀಡಿರುವ ಸೌಲಭ್ಯ ಬೆಳೆಸಿಕೊಂಡು ಉತ್ತಮ ಶಿಕ್ಷಣ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಗೋಕಾಕ ತಾಲೂಕಿನ ಯಾದವಾಡ ಗ್ರಾಮದ ಜೆ.ಎನ್.ಎಸ್ ಪಪೂ ಕಾಲೇಜಿನ ಉಪನ್ಯಾಸಕರಾದ ಶ್ರೀಮತಿ ಪ್ರಭಾವತಿ.ಪಿ. ಕಣವಿ ಅವರು ಉಪನ್ಯಾಸ ನೀಡಿ, ಅಪಾರ ಜ್ಞಾನವನ್ನು ಹೊಂದಿದ್ದ ಅಂಬೇಡ್ಕರ್ ಅವರು ನಡೆದಾಡುವ ವಿಶ್ವವಿದ್ಯಾಲಯವಾಗಿದ್ದರು ಎಂದು ಬಣ್ಣಿಸಿದರು.
ಮಾನವರನ್ನು ಮಾನವೀಯತೆಯ ನೆಲೆಗಟ್ಟಿನಲ್ಲಿ ನೋಡಬೇಕೆಂಬುದು ಅಂಬೇಡ್ಕರ್ ಅವರ ಹೋರಾಟದ ಪ್ರಮುಖ ಆಶಯವಾಗಿತ್ತು ಎಂದು ಹೇಳಿದರು.
ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಎನ್. ಮುನಿರಾಜು ಅವರು ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪರಿಶಿಷ್ಟ ಜಾತಿಯ ಐವರು ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ, ವೇದಿಕೆಯಲ್ಲಿ ಸನ್ಮಾನಿಸಲಾಯಿತು.
ಮಹಾನಗರ ಪಾಲಿಕೆಯ ಆಯುಕ್ತರಾದ ಕೃಷ್ಟಗೌಡ ತಾಯಣ್ಣವರ, ಪರಿಶಿಷ್ಟ ಪಂಗಡಗಳ ಜಿಲ್ಲಾ ಕಲ್ಯಾಣಾಧಿಕಾರಿಗಳಾದ ಶ್ರೀಮತಿ ಉಮಾ ಸಾಲಿಗೌಡರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಭಾವಚಿತ್ರಕ್ಕೆ ಪೂಜೆ:
News Belgaum-ಡಾ.ಬಾಬಾಸಾಹೇಬ್ ಅಂಬೇಡ್ಕರ್ 127ನೇ ಜನ್ಮದಿನಾಚರಣೆ: ಎಲ್ಲೆಡೆ ಸಂಭ್ರಮ ಅಂಬೇಡ್ಕರ್ ಸಾಧನೆ ಅಗಾಧ: ಅಲೋಕ್ ಕುಮಾರ 2 News Belgaum-ಡಾ.ಬಾಬಾಸಾಹೇಬ್ ಅಂಬೇಡ್ಕರ್ 127ನೇ ಜನ್ಮದಿನಾಚರಣೆ: ಎಲ್ಲೆಡೆ ಸಂಭ್ರಮ ಅಂಬೇಡ್ಕರ್ ಸಾಧನೆ ಅಗಾಧ: ಅಲೋಕ್ ಕುಮಾರ 3 News Belgaum-ಡಾ.ಬಾಬಾಸಾಹೇಬ್ ಅಂಬೇಡ್ಕರ್ 127ನೇ ಜನ್ಮದಿನಾಚರಣೆ: ಎಲ್ಲೆಡೆ ಸಂಭ್ರಮ ಅಂಬೇಡ್ಕರ್ ಸಾಧನೆ ಅಗಾಧ: ಅಲೋಕ್ ಕುಮಾರ 4ಡಾ|| ಬಾಬಾಸಾಹೇಬ ಅಂಬೇಡ್ಕರ್ ಉದ್ಯಾನವನದಲ್ಲಿ ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳಾದ ಎಸ್. ಜಿಯಾವುಲ್ಲಾ ಅವರು ಡಾ|| ಬಾಬಾಸಾಹೇಬ ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ಬೆಳಗಾವಿ ಉತ್ತರ ವಲಯ ಐಜಿಪಿ ಅಲೋಕ ಕುಮಾರ, ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಡಾ|| ಡಿ.ಸಿ. ರಾಜಪ್ಪ, ಡಿಸಿಪಿ ಸೀಮಾ ಲಾಟ್ಕರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಿ.ಎಫ್. ಸುಧೀರಕುಮಾರ ರೆಡ್ಡಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮಚಂದ್ರನ್. ಆರ್., ಅಪರ ಜಿಲ್ಲಾಧಿಕಾರಿಗಳಾದ ಎಚ್. ಬಿ.
ಬೂದೆಪ್ಪ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಎನ್. ಮುನಿರಾಜು ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

ಅಂಬೇಡ್ಕರ್ ತೊಟ್ಟಿಲೋತ್ಸವ:
ಭಾವಚಿತ್ರ ಪೂಜೆಯ ನಂತರ ಡಾ|| ಬಿ.ಆರ್. ಅಂಬೇಡ್ಕರ್ ಉದ್ಯಾನವನದಲ್ಲಿ ಡಾ|| ಬಿ.ಆರ್. ಅಂಬೇಡ್ಕರ್ ತೊಟ್ಟಿಲೋತ್ಸವ ಕಾರ್ಯಕ್ರಮ ಜರುಗಿತು.
ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ ಹಾಗೂ ಐಜಿಪಿ ಅಲೋಕ ಕುಮಾರ ಅವರು ತೊಟ್ಟಿಲು ತೂಗಿ ತೊಟ್ಟಿಲೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಹಿಳೆಯರು ತೊಟ್ಟಿಲೋತ್ಸವದಲ್ಲಿ ಪಾಲ್ಗೊಂಡಿದ್ದರು.

ಅದ್ದೂರಿ ಮೆರವಣಿಗೆ :
ನಗರದ ಧರ್ಮವೀರ ಸಂಭಾಜಿ ವೃತ್ತದಲ್ಲಿ ಜಿಲ್ಲಾಧಿಕಾರಿಗಳಾದ ಎಸ್. ಜಿಯಾವುಲ್ಲಾ ಅವರು ಡಾ. ಬಾಬಾಸಾಹೇಬ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು.
ಮೆರವಣಿಗೆಯು ಧರ್ಮವೀರ ಸಂಭಾಜಿ ವೃತ್ತದಿಂದ ಆರಂಭವಾಗಿ ಕಿರ್ಲೊಸ್ಕರ್ ರಸ್ತೆ, ರಾಮದೇವ ಗಲ್ಲಿ, ಖಡೇಬಜಾರ್, ಕಾಕತಿ ವೇಸ್ ಚನ್ನಮ್ಮ ವೃತ್ತ ಮಾರ್ಗವಾಗಿ ಡಾ|| ಬಾಬಾಸಾಹೇಬ ಅಂಬೇಡ್ಕರ್ ಅವರ ಉದ್ಯಾನವನ ತಲುಪಿತು.
ಡಾ|| ಬಿ.ಆರ್. ಅಂಬೇಡ್ಕರ್ ಅವರ ಜೀವನ ಸಾಧನೆ ಸಾರುವ ರೂಪಕ ವಾಹನಗಳು ಮೆರವಣಿಗೆಯಲ್ಲಿ ಭಾಗವಹಿಸಿ ನೋಡುಗರ ಗಮನ ಸೆಳೆದವು.
ಬೆಳಗಾವಿ ಉತ್ತರ ವಲಯ ಐಜಿಪಿ ಅಲೋಕ ಕುಮಾರ, ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಡಾ|| ಡಿ.ಸಿ. ರಾಜಪ್ಪ, ಡಿಸಿಪಿ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮಚಂದ್ರನ್. ಆರ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು, ಇನ್ನಿತರರು ಪಾಲ್ಗೊಂಡಿದ್ದರು.Dr. Babasaheb Ambedkar 127th Birthday Celebration: Everywhere Ambedkar’s achievement is overwhelming: Alok Kumar

News Belgaum-ಡಾ.ಬಾಬಾಸಾಹೇಬ್ ಅಂಬೇಡ್ಕರ್ 127ನೇ ಜನ್ಮದಿನಾಚರಣೆ: ಎಲ್ಲೆಡೆ ಸಂಭ್ರಮ ಅಂಬೇಡ್ಕರ್ ಸಾಧನೆ ಅಗಾಧ: ಅಲೋಕ್ ಕುಮಾರ 5

ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ ಅವರು 127ನೇ ಜನ್ಮ ದಿನಾಚರಣೆಯನ್ನು ಶನಿವಾರದಂದು (ಏ.13) ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಿಡಿಯಾ ಮಾನೆಟ್ರಿಂಗ್ ವಿಭಾಗದಲ್ಲಿ ಡಾ. ಬಾಬಾಸಾಹೇಬ ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ಗುರುನಾಥ ಕಡಬೂರ, ಪ್ರವಾಸೋಧ್ಯಮ ಅಧಿಕಾರಿಗಳಾದ ಸೋಮಶೇಖರ ಬಿ.ಕೆ., ಎಂ.ಎಂ. ಪಾಟೀಲ್, ಶ್ರೀಮತಿ ಝಡ್.ಜೆ ಸೈಯದ್, ಜೆ.ವಾಯ್. ಕಾವಳೆ, ಕೆ.ಎಸ್.ಕಾಗಲೆ, ಶ್ರೀಮತಿ ವಜ್ರಾ ಪಾಟೀಲ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

 

 

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.