ಉತ್ತಮ ಸಮಾಜಕ್ಕಾಗಿ

ಸವಿರುಚಿ ಸಂಚಾರಿ ಕ್ಯಾಂಟೀನ್‍ಗೆ ಚಾಲನೆ ಕ್ಯಾಂಟೀನ್ ಸದುಪಯೋಗಿಸಿಕೊಳ್ಳಲು ಜಿಲ್ಲಾಧಿಕಾರಿ ಕರೆ

Drive to Saviruchi Canteen: Call of District Comissioner to Use Canteen

0

ಬೆಳಗಾವಿ: (news belagavi) ಸವಿರುಚಿ ಸಂಚಾರಿ ಕ್ಯಾಂಟೀನ್ ಜಿಲ್ಲಾದ್ಯಂತ ಸಂಚರಿಸಿ ಜಾತ್ರೆ, ಸಂತೆ, ಉತ್ಸವ, ಆಸ್ಪತ್ರೆ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ಊಟ, ಉಪಹಾರದ ವ್ಯವಸ್ಥೆ ಕಲ್ಪಿಸಲಿದೆ ಎಂದು ಜಿಲ್ಲಾಧಿಕಾರಿ ಎಸ್.ಜಿಯಾವುಲ್ಲಾ ಅವರು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಹಾಗೂ ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟದದ ಸಹಯೋಗದಲ್ಲಿ ಇಲ್ಲಿನ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ಶುಕ್ರವಾರ (ಜು.6) ಸವಿರುಚಿ ಸಂಚಾರಿ ಕ್ಯಾಂಟೀನ್‍ಗೆ ಚಾಲನೆ ನೀಡಿ ಅವರು ಮಾತನಾಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನಿಗಮದ ವತಿಯಿಂದ ಮಹಿಳಾ ಸ್ವಸಹಾಯ ಸಂಘವೊಂದನ್ನು ಆಯ್ಕೆ ಮಾಡಿ, ಸಬ್ಸಿಡಿ ಮೇಲೆ ಸುವಿರುಚಿ ಸಂಚಾರಿ ಕ್ಯಾಂಟೀನ್ ಆರಂಭಿಸಲು ರೂ.10 ಲಕ್ಷ ಅನುದಾನ ನೀಡಲಾಗಿದೆ. ಇದನ್ನು ಸ್ತ್ರೀಶಕ್ತಿ ಸಂಘದವರು ಸದುಪಯೋಗ ಪಡಿಸಿಕೊಂಡು ರುಚಿ ಹಾಗೂ ಗುಣಮಟ್ಟದ ಆಹಾರ ಪದಾರ್ಥಗಳನ್ನು ಸಿದ್ಧಪಡಿಸಿ, ಕ್ಯಾಂಟೀನ್‍ನ್ನು ಉತ್ತಮವಾಗಿ ನಿರ್ವಹಿಸಿಕೊಂಡು ಹೋಗಬೇಕೆಂದು ಸೂಚಿಸಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್.ಆರ್ ಅವರು ಮಾತನಾಡಿ, ಸವಿರುಚಿ ಸಂಚಾರಿ ಕ್ಯಾಂಟೀನ್‍ನಿಂದ ಜನಸಾಮಾನ್ಯರಿಗೆ ಅನುಕೂಲವಾಗಲಿದೆ ಎಂದರು. ಕ್ಯಾಂಟೀನ್ ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿದರು.

ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಪ್ರಭಾವತಿ ಪತ್ತಾರ ಅವರು ಮಾತನಾಡಿ, ಮಹಿಳಾ ಅಭಿವೃದ್ಧಿ ನಿಗಮದಿಂದ ರೂ.10 ಲಕ್ಷ ಅನುದಾನದಲ್ಲಿ ಸವಿರುಚಿ ಸಂಚಾರಿ ಕ್ಯಾಂಟೀನ್‍ನ್ನು ಇಂದಿನಿಂದ ಆರಂಭಿಸಲಾಗಿದ್ದು, ಜನಸಾಮಾನ್ಯರಿಗೆ ಅನುಕೂಲವಾಗುವ ರೀತಿಯಲ್ಲಿ ಕಡಿಮೆ ದರದಲ್ಲಿ ಊಟ, ಉಪಹಾರವನ್ನು ನೀಡಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದ ನಂತರ ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ, ಜಿಲ್ಲಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್ ಆರ್. ಹಾಗೂ ಇನ್ನಿತರರು ಕ್ಯಾಂಟೀನ್‍ನಲ್ಲಿ ಉಪಹಾರ ಸೇವಿಸಿದರು.

ಸವಿರುಚಿ ಸಂಚಾರಿ ಕ್ಯಾಂಟೀನ್‍ಗೆ ಚಾಲನೆ ಕ್ಯಾಂಟೀನ್ ಸದುಪಯೋಗಿಸಿಕೊಳ್ಳಲು  ಜಿಲ್ಲಾಧಿಕಾರಿ ಕರೆ- Tarun kranti 1

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಎಸ್.ಎಂ. ಹಂಜಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ಎಫ್.ಬಿ. ನಧಾಪ್, ಜಿಲ್ಲಾ ಮಹಿಳಾ ಅಭಿವೃದ್ಧಿ ನಿಗಮದ ಯೋಜನಾಧಿಕಾರಿ ಎಂ.ಕೆ. ಕುಲಕರ್ಣಿ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ಮಹಿಳಾ ಸ್ವಸಹಾಯ ಸಂಘದ ಸದಸ್ಯರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಸವಿರುಚಿ ಸಂಚಾರಿ ಕ್ಯಾಂಟೀನ್‍ಗೆ ಚಾಲನೆ ಕ್ಯಾಂಟೀನ್ ಸದುಪಯೋಗಿಸಿಕೊಳ್ಳಲು  ಜಿಲ್ಲಾಧಿಕಾರಿ ಕರೆ- Tarun kranti 2

ಕ್ಯಾಂಟೀನ್‍ನಲ್ಲಿ ಸೂಕ್ತ ವ್ಯವಸ್ಥೆ: 

ಸವಿರುಚಿ ಸಂಚಾರಿ ಕ್ಯಾಂಟೀನ್ ಅಡುಗೆ ಕೋಣೆ ಹೊಂದಿರಬೇಕಾದ ಎಲ್ಲ ಸೌಲಭ್ಯಗಳನ್ನು ಒಳಗೊಂಡಿದೆ. ಗ್ಯಾಸ್, ಸ್ಟೋ, ಪಾತ್ರೆಗಳು ಹಾಗೂ ಇನ್ನಿತರೆ ಅಡುಗೆ ಸಾಮಗ್ರಿಗಳು ವಾಹನದಲ್ಲಿವೆ. ತರಕಾರಿ ಹಾಗೂ ಇನ್ನಿತರ ಸಾಮಗ್ರಿಗಳನ್ನು ಇಡಲು ಪ್ರತ್ಯೇಕ ಸ್ಥಳ, ಕೈ ತೊಳೆಯುವ ಸಿಂಕ್, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ಮಳೆ ಬರುವ ಸಂದರ್ಭದಲ್ಲಿ ರಕ್ಷಣೆಗಾಗಿ ವಾಹನದ ಒಂದು ಬದಿ ಮೇಲ್‍ಹೊದಿಕೆಯ ವ್ಯವಸ್ಥೆ ಮಾಡಲಾಗಿದೆ.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.