ಉತ್ತಮ ಸಮಾಜಕ್ಕಾಗಿ

ಪರಿಸರ-ಯುವ ವಿಜ್ಞಾನಿ ಪ್ರಶಸ್ತಿ ಪ್ರಧಾನ ಸಮಾರಂಭ ,ಪ್ಲಾಸ್ಟಿಕ್ ಬಳಕೆ ತ್ಯಜಿಸಿ-ಪರಿಸರ ರಕ್ಷಿಸಿ: ಸಂಸದ ಅಂಗಡಿ

Eco-Youth Scientist Award Ceremony Avoid Plastic Use - Protect Environmental : MP Suresh Angadi

0

ಬೆಳಗಾವಿ: (news belagavi  ಪ್ಲಾಸ್ಟಿಕ್ ಬಳಕೆ ವಾತಾವರಣಕ್ಕೆ ಮಾರಕವಾಗಿದೆ. ಆದ್ದರಿಂದ ಪ್ರತಿಯೊಬ್ಬರು ಪ್ಲಾಸ್ಟಿಕ್ ಬಳಕೆಯನ್ನು ತ್ಯಜಿಸಬೇಕು. ಸ್ವಚ್ಛ ಹಾಗೂ ಸುಂದರ ವಾತಾವರಣ ಪ್ರತಿಯೊಬ್ಬರ ಧ್ಯೇಯವಾಗಬೇಕೆಂದು ಸಂಸದ ಸುರೇಶ ಅಂಗಡಿ ಅವರು ಕರೆ ನೀಡಿದರು.

ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ರಾಜ್ಯ ವಿಜ್ಞಾನ ಪರಿಷತ್ತು, ಶಿಕ್ಷಣ ಇಲಾಖೆ ಸೇರಿದಂತೆ ಇನ್ನಿತರ ಇಲಾಖೆಗಳ ಸಹಯೋಗದಲ್ಲಿ ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ  ಪ್ಲಾಸ್ಟಿಕ್ ಮಾಲಿನ್ಯ ತಡೆಯೋಣ ಎಂಬ ಘೋಷವಾಕ್ಯದಡಿ ಹಮ್ಮಿಕೊಂಡಿದ್ದ ಪರಿಸರ ಹಾಗೂ ಯುವ ವಿಜ್ಞಾನಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪರಿಸರ-ಯುವ ವಿಜ್ಞಾನಿ ಪ್ರಶಸ್ತಿ ಪ್ರಧಾನ ಸಮಾರಂಭ ,ಪ್ಲಾಸ್ಟಿಕ್ ಬಳಕೆ ತ್ಯಜಿಸಿ-ಪರಿಸರ ರಕ್ಷಿಸಿ: ಸಂಸದ ಅಂಗಡಿ- Tarun kranti 2

ಪ್ಲಾಸ್ಟಿಕ್ ಬಳಕೆ ಆರೋಗ್ಯಕ್ಕೆ ಮಾರಕವಾಗಿದ್ದು, ಪ್ಲಾಸ್ಟಿಕ್ ಬಳಕೆಯಿಂದ ಕ್ಯಾನ್ಸ್‍ರ್ ಸೇರಿದಂತೆ ಇನ್ನಿತರ ರೋಗಗಳು ಹರಡುತ್ತವೆ. ಆದ್ದರಿಂದ ಸಾರ್ವಜನಿಕರು ಬಟ್ಟೆ ಹಾಗೂ ಕಾಗದದ ಚೀಲ ಹಾಗೂ ಬ್ಯಾಗ್‍ಗಗಳನ್ನು ಬಳಸಬೇಕು. ಇದರಿಂದ ಆರೋಗ್ಯಕ್ಕೂ ಅನುಕೂಲ ಹಾಗೂ ಸಣ್ಣ ಕೈಗಾರಿಕೆಗಳು ಅಭಿವೃದ್ಧಿಯಾಗುತ್ತವೆ ಎಂದು ತಿಳಿಸಿದರು.

ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಮನೆ, ಶಾಲೆ ಸೇರಿದಂತೆ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಎಲ್ಲರೂ ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದರು. ಜಿಲ್ಲಾಡಳಿತದಿಂದ ಪ್ಲಾಸ್ಟಿಕ್ ಬಳಕೆ ನಿಷೇಧಿಸಿ ಆದೇಶ ಹೊರಡಿಸಬೇಕೆಂದು ಮನವಿ ಮಾಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ ಅವರು, ಯಾವುದೇ ಕಾರ್ಯಕ್ರಮದ ಯಶಸ್ಸಿಗೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ. ಪರಿಸರ ರಕ್ಷಣೆ ನಮ್ಮ ಮನೆಯಿಂದಲೇ ಪ್ರಾರಂಭವಾಗಬೇಕೆಂದು ಹೇಳಿದರು.

ಕಾನೂನು ಉಲ್ಲಂಘನೆ ಮಾಡುವುದು ಇಂದು ಕೆಲವರಿಗೆ ಪ್ಯಾಷನ್ ಆಗಿದೆ. ಕಾನೂನು ಮಾಡುವುದು ಸರ್ವರ ಒಳಿತಿಗೆ ಎಂಬುದನ್ನು ಸಾರ್ವಜನಿಕರು ಅರಿತುಕೊಳ್ಳಬೇಕು. ಎಲ್ಲವನ್ನು ಸರ್ಕಾರವೇ ಮಾಡಬೇಕೆಂಬ ಜನರ ಮನೋಭಾವ ಬದಲಾಗಬೇಕು. ಪರಿಸರ ರಕ್ಷಣೆ ಸೇರಿದಂತೆ ಎಲ್ಲ ಕಾರ್ಯಕ್ರಮಗಳ ಯಶಸ್ಸಿಗೆ ಸಾರ್ವಜನಿಕರು ಕೈಜೋಡಿಸಬೇಕೆಂದು ತಿಳಿಸಿದರು.

ಇಂದಿನ ಯುವಕರು ಪಾಶ್ಚಿಮಾತ್ಯ ಸಂಸ್ಕøತಿಯತ್ತ ವಾಲುತ್ತಿರುವುದು ವಿಷಾದನೀಯವಾಗಿದ್ದು, ನಮ್ಮ ಸಂಸ್ಕøತಿಯನ್ನು ಎಂದಿಗೂ ಮರೆಯಬಾರದು ಎಂದರು.

ವಿಶ್ವೇಶ್ವರಯ್ಯ ವಿಶ್ವವಿದ್ಯಾಲಯದ ಜೈವಿಕ ಇಂಧನ ಘಟಕದ ಮುಖ್ಯಸ್ಥರಾದ ಡಾ. ಸಿ.ಸಿ. ಗವಿಮಠ ಉಪನ್ಯಾಸ ನೀಡಿದರು. ನಗರದ ಬಿ.ಪಿ. ಶಾಲೆಯ ವಿದ್ಯಾರ್ಥಿನಿ ಶಿವಾನಿ ಗವಿಮಠ ತಾನು ಸಿದ್ಧಪಡಿಸಿದ ಪ್ರಯೋಗದ ಕುರಿತು ವಿವರಣೆ ನೀಡಿದರು.

ಬಹುಮಾನ ವಿತರಣೆ:
ಕಾರ್ಯಕ್ರಮ ನಿಮಿತ್ಯ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ವೇದಿಕೆಯಲ್ಲಿ ಗಣ್ಯರು ಬಹುಮಾನ ವಿತರಿಸಿದರು.

ಪರಿಸರ-ಯುವ ವಿಜ್ಞಾನಿ ಪ್ರಶಸ್ತಿ ಪ್ರಧಾನ ಸಮಾರಂಭ ,ಪ್ಲಾಸ್ಟಿಕ್ ಬಳಕೆ ತ್ಯಜಿಸಿ-ಪರಿಸರ ರಕ್ಷಿಸಿ: ಸಂಸದ ಅಂಗಡಿ- Tarun kranti 1

ಯುವ ವಿಜ್ಞಾನಿ ಸ್ಪರ್ಧೆಯಲ್ಲಿ ನಗರದ ಬಿ.ಪಿ. ಕಾನ್ವೆಂಟ್ ಶಾಲೆಯ ವಿದ್ಯಾರ್ಥಿನಿ ಶಿವಾನಿ ಗವಿಮಠ ಪ್ರಥಮ ಬಹುಮಾನ, ಸೇಂಟ್ ಮೇರಿ ಪ್ರೌಢಶಾಲೆಯ ಯಶ್ ಕಣಬರ್ಗಿ ದ್ವಿತೀಯ ಹಾಗೂ ಸಂಪಗಾವಿಯ ಆರ್.ಇ.ಎಸ್ ಪ್ರೌಢಶಾಲೆಯ ಗಂಗಾ ಅರಳೀಕಟ್ಟಿ ತೃತೀಯ ಬಹುಮಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪರಿಸರ ಯುವ ವಿಜ್ಞಾನಿ ಪ್ರಥಮ ಬಹುಮಾನವನ್ನು ಕೇಂದ್ರಿಯ ವಿದ್ಯಾಲಯದ ಆಯುಷ್ ತಮ್ಮಣ್ಣವರ ಹಾಗೂ ದ್ವಿತೀಯ ಬಹುಮಾನವನ್ನು ಸೇಂಟ್ ಮೇರಿಸ್ ಶಾಲೆಯ ದರ್ಶನ ಮಗದುಮ್ ಅವರು ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪ್ರಬಂಧ ಸ್ಪರ್ಧೆಯಲ್ಲಿ ಕೀರ್ತನಾ ಸುತಾರ ಪ್ರಥಮ, ಆಯುಷ್ ತಮ್ಮಣ್ಣವರ ದ್ವಿತೀಯ ಹಾಗೂ ದರ್ಶನ ಮಗದುಮ್ ತೃತೀಯ ಬಹುಮಾನ ಗಳಿಸಿದರು. ಚಿತ್ರಕಲೆ ಸ್ಪರ್ಧೆಯಲ್ಲಿ ಸುಜನಾ ಗೋಡಬೋಲೆ ಪ್ರಥಮ, ಪಾರ್ಥ ಗುಂಜೀಕರ್ ದ್ವಿತೀಯ ಹಾಗೂ ಧೃತಿ ನಾಯಕ ತೃತೀಯ ಬಹುಮಾನವನ್ನು ಪಡೆದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್. ಆರ್, ಕರ್ನಾಟgಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಪರಿಸರ ಅಧಿಕಾರಿಗಳಾದ ಗೋಪಾಲಕೃಷ್ಣ. ಬಿ.ಎಸ್, ಪರಿಸರ ಮಿತ್ರ ಸಂಘದ ಅಧ್ಯಕ್ಷರಾದ ಪ್ರೊ. ಈ.ಕೆ. ಖಡಬಡಿ, ಸರಳಾ ಹೇರೆಕರ ಸೇರಿದಂತೆ ವಿವಿಧ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪಾಲಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ರಾಜಶೇಖರ ಪಾಟೀಲ ಕಾರ್ಯಕ್ರಮ ನಿರೂಪಿಸಿದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.