ಉತ್ತಮ ಸಮಾಜಕ್ಕಾಗಿ

ಸರ್ಕಾರಿ ಶಾಲೆಗಳಲ್ಲಿಯೇ ಮಕ್ಕಳಿಗೆ ಶಿಕ್ಷಣ ಕೊಡಿಸಿ: ಸಂಸದ ಸುರೇಶ ಅಂಗಡಿ

Educate children in government schools: MP Suresh Angadi

0

ಬೆಳಗಾವಿ:(news belagavi) ಮಾತೃಭಾಷೆಯಲ್ಲಿ ಶಿಕ್ಷಣ ಪಡೆದರೆ ಮಕ್ಕಳು ದಡ್ಡರಾಗುತ್ತಾರೆ ಎಂಬ ಮನೋಭಾವವನ್ನು ಪಾಲಕರು ತೊಡೆದುಹಾಕಿ, ಸರ್ಕಾರಿ ಶಾಲೆಗಳಲ್ಲಿಯೇ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು ಎಂದು ಸಂಸದ ಸುರೇಶ ಅಂಗಡಿ ಅವರು ಕರೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆಯುಷ್ ಇಲಾಖೆ ಹಾಗೂ ಇನ್ನಿತರ ಇಲಾಖೆಗಳ ಸಹಯೋಗದಲ್ಲಿ ಗುರುವಾರ ಸುವರ್ಣ ವಿಧಾನಸೌದದ ಸೆಂಟ್ರಲ್ ಸಭಾಂಗಣದಲ್ಲಿ ಜಿಲ್ಲೆಯ ವಿವಿಧ ಸರ್ಕಾರಿ ವಸತಿನಿಲಯಗಳಲ್ಲಿದ್ದುಕೊಂಡು 2018-19ನೇ ಸಾಲಿನ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಸಾಧನೆಗೈದ ಮಕ್ಕಳಿಗಾಗಿ ಹಮ್ಮಿಕೊಂಡಿದ್ದ ಜಾಣ ಜಾಣೆಯರಿಗೆ ಅಭಿನಂದನಾ ಸಮಾರಂಭವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರಿ ಶಾಲೆಗಳಲ್ಲಿಯೇ ಮಕ್ಕಳಿಗೆ ಶಿಕ್ಷಣ ಕೊಡಿಸಿ: ಸಂಸದ ಸುರೇಶ ಅಂಗಡಿ- Tarun kranti
ಸರ್ಕಾರ 14 ವರ್ಷದವರೆಗೂ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ನೀಡುತ್ತಿದೆ. ಜೊತೆಗೆ ಶಿಕ್ಷಣಕ್ಕಾಗಿ ಅನೇಕ ಸೌಲಭ್ಯಗಳನ್ನು ಕಲ್ಪಿಸಿದೆ ಇವುಗಳನ್ನು ಮಕ್ಕಳು ಹಾಗೂ ಪಾಲಕರು ಸದುಪಯೋಗಿಸಿಕೊಳ್ಳಬೇಕೆಂದು ಹೇಳಿದರು. ವಿದ್ಯಾರ್ಥಿಗಳನ್ನು ವಸತಿ ನಿಲಯಗಳಿಗೆ ಸೇರಿಸಿದರೆ ಪಾಲಕರ ಜವಾಬ್ದಾರಿ ಮುಗಿಯುವುದಿಲ್ಲ. ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಾ, ಮಕ್ಕಳ ಬಗ್ಗೆ ಹೆಚ್ಚಿನ ಗಮನ ವಹಿಸಬೇಕು. ಇಂದು ಅನೇಕ ಯುವಕರು ಮಾದಕ ವಸ್ತುಗಳು ಹಾಗೂ ದುಶ್ಚಟಗಳ ದಾಸರಾಗುತ್ತಿರುವುದು ವಿಷಾದನೀಯವಾಗಿದ್ದು, ಪಾಲಕರು ಮಕ್ಕಳ ಬಗ್ಗೆ ಎಚ್ಚರ ವಹಿಸಿ ಮಕ್ಕಳು ದಾರಿ ತಪ್ಪದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಪಾರಂಪರಿಕ ಉದ್ಯೋಗಗಳು ಅಳಿವಿನ ಅಂಚಿನಲ್ಲಿದ್ದು, ಯುವಕರು ಕೃಷಿ, ನೇಕಾರಿಕೆ ಸೇರಿದಂತೆ ಇನ್ನಿತರ ಪಾರಂಪರಿಕ ಉದ್ಯೋಗಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಕೃಷಿಗೆ ಮಹತ್ವ ಬರಲಿದೆ ಎಂದರು. ಅತಿಹೆಚ್ಚು ಅಂಕ ಪಡೆದ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿರುವ ಅಭಿನಂದನಾ ಸಮಾರಂಭದ ರೀತಿಯಲ್ಲೆ ಅನುತ್ತೀರ್ಣರಾದ ಹಾಗೂ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳಿಗೂ ಜಿಲ್ಲೆಯಲ್ಲಿ ಕಾರ್ಯಕ್ರಮ ಏರ್ಪಡಿಸಿ ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬುವುದು ಹಾಗೂ ಓದಿನಲ್ಲಿ ಆಸಕ್ತಿ ಮೂಡುವಂತೆ ಮಾಡುವ ಯೋಚನೆ ಇದೆ. ಮುಂದಿನ ದಿನಗಳಲ್ಲಿ ಆ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ ಅವರು, ವಿದ್ಯಾರ್ಥಿಗಳು ಮುಂದೆ ಎಂತಹ ಉನ್ನತ ಸ್ಥಾನವನ್ನು ಹೊಂದಿದರು ನಮ್ಮ ದೇಶದ ಸಂಸ್ಕೃತಿ, ಆಚಾರ, ವಿಚಾರ, ಪದ್ಧತಿಯನ್ನು ಮರೆಯಬಾರದು ಎಂದು ಹೇಳಿದರು. ನಾವು ಎಷ್ಟೇ ಶಿಕ್ಷಣವಂತರಾದರು ಕೂಡ ತಂದೆ, ತಾಯಿ, ಹಿರಿಯರು, ಗುರುಗಳನ್ನು ಸದಾ ಗೌರವದಿಂದ ಕಾಣಬೇಕು. ನೆಮ್ಮದಿಯ ಜೀವನಕ್ಕೆ ಸಂಸ್ಕೃತಿ ಅತ್ಯಗತ್ಯವಾಗಿದೆ ಎಂದು ಸಲಹೆ ನೀಡಿದರು. ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕಾಲಹರಣ ಮಾಡದೇ, ಓದಿನ ಕಡೆಗೆ ಹಾಗೂ ತಮ್ಮ ಗುರಿಯೆಡೆಗೆ ಹೆಚ್ಚಿನ ಗಮನ ವಹಿಸಬೇಕೆಂದು ಹೇಳಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್.ಆರ್ ಅವರು ಪ್ರಾಸ್ತಾವಿಕ ಮಾತನಾಡಿ, 2015 ರಿಂದ ಜಿಲ್ಲೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಕಾರ್ಯಕ್ರಮ ನಡೆಸಲಾಗುತ್ತಿದೆ. ಆರ್ಥಿಕವಾಗಿ ಸಂಕಷ್ಟದಲ್ಲಿರುವ ಮಕ್ಕಳು ವಸತಿ ನಿಲಯಗಳಲ್ಲಿದ್ದುಕೊಂಡು ತಮ್ಮ ಶಿಕ್ಷಣ ಮುಂದುವರೆಸಿ, ಅತಿಹೆಚ್ಚು ಅಂಕ ಪಡೆದು ಸಾಧನೆಗೈದಿರುವುದು ಅಭಿನಂದನಾರ್ಹವಾಗಿದೆ ಎಂದು ಹೇಳಿದರು. 2017-18 ಶೈಕ್ಷಣಿಕ ಸಾಲಿನಲ್ಲಿ ಜಿಲ್ಲೆಯ ವಿವಿಧ ಸರ್ಕಾರಿ ವಸತಿ ನಿಲಯಗಳಲ್ಲಿದ್ದುಕೊಂಡು ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ಜಿಲ್ಲೆಯ ಒಟ್ಟಿ 574 ವಿದ್ಯಾರ್ಥಿಗಳಿಗೆ 10 ಸಾವಿರ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಗುತ್ತಿದೆ. ರಾಜಕಾರಣಿಗಳು, ಅಧಿಕಾರಿಗಳು ಹಾಗೂ ಅನೇಕ ದಾನಿಗಳು ಈ ಪುರಸ್ಕಾರ ನೀಡಲು ಕೊಡುಗೆ ನೀಡಿದ್ದಾರೆ ಎಂದು ತಿಳಿಸಿದರು. ಮಕ್ಕಳು ದೇಶಧ ಭವಿಷ್ಯವಾಗಿದ್ದು, ತಮ್ಮ ಭವಿಷ್ಯ ಉಜ್ವಲವಾಗಲು ಎಲ್ಲರೂ ಉತ್ತಮ ಶಿಕ್ಷಣ ಪಡೆಯಬೇಕು. ಪ್ರತಿಭೆಯನ್ನು ಹೊರೆತೆಗೆದು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕೆಂದು ಹೇಳಿದರು. ಪ್ರತಿಯೊಬ್ಬರಿಗೂ ಸಾಮಾಜಿಕ ಕಳಕಳಿ ಅಗತ್ಯವಾಗಿದೆ. ಬೇರನ್ನು ಮರೆತ ಗಿಡ ಬೀಳುತ್ತದೆ. ಆದ್ದರಿಂದ ನಾವು ನಡೆದು ಬಂದ ದಾರಿಯನ್ನು ಮರೆಯದೇ ಮತ್ತಿತರರಿಗೆ ಅನುಕೂಲ ಮಾಡಿಕೊಡಬೇಕೆಂದು ಸಲಸಹೆ ನೀಡಿದರು.

ಶಾಸಕ ಅನಿಲ ಬೆನಕೆ ಅವರು ಮಾತನಾಡಿ, ಇಂದು ವಿದ್ಯಾರ್ಥಿಗಳು ಬಡತನವಿದೆ ಎಂದು ವ್ಯಥೆ ಪಡಬೇಕಾಗಿಲ್ಲ. ಸರ್ಕಾರ ಶಿಕ್ಷಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದು, ಅವುಗಳ ಸದುಪಯೋಗ ಪಡೆಯಬೇಕು. ಪ್ರಯತ್ನಕ್ಕೆ ತಕ್ಕ ಫಲ ಸಿಕ್ಕೆ ಸಿಗುತ್ತದೆ. ವಿದ್ಯಾರ್ಥಿಗಳಲ್ಲಿ ಸಾಧಿಸುವ ಛಲ ಅಗತ್ಯ ಎಂದರು.

ಜಿಲ್ಲಾ ಪಂಚಾಯತ ಅಧ್ಯಕ್ಷೆ ಶ್ರೀಮತಿ ಆಶಾ ಐಹೊಳೆ ಅವರು ಮಾತನಾಡಿ, ಶಿಕ್ಷಣದಿಂದ ಮಾತ್ರ ಜೀವನವನ್ನು ಯಶಸ್ವಿಯಾಗಿಸಿಕೊಳ್ಳಲು ಸಾಧ್ಯ. ಕಡುಬಡತನ ಹಾಗೂ ಇನ್ನಿತರ ಸಮಸ್ಯೆಗಳ ಮಧ್ಯೆಯೂ ಅತ್ಯುನ್ನತ ಶಿಕ್ಷಣ ಪಡೆದು ವಿಶ್ವಜ್ಞಾನಿಯಾದ ಡಾ. ಬಿ.ಆರ್. ಅಂಬೇಡ್ಕರ್ ಅವರ ಆದರ್ಶ ಮಕ್ಕಳಿಗೆ ಮಾದರಿಯಾಗಿದೆ. ಪ್ರತಿಯೊಬ್ಬರು ಅಂಬೇಡ್ಕರ ಅವರ ಆದರ್ಶವನ್ನು ಪಾಲಿಸಬೇಕೆಂದು ಹೇಳಿದರು.

ಡಿಸಿಪಿ ಸೀಮಾ ಲಾಟ್ಕರ್ ಅವರು ಮಾತನಾಡಿ, ವಿದ್ಯಾರ್ಥಿಗಳು ಪ್ರತಿದಿನ ಹೊಸತನ್ನು ಕಲಿಯುವ ತುಡಿತ ಹೊಂದಿರಬೇಕು. ತಮ್ಮ ಗುರಿ ಸಾಧನೆಗೆ ನಿರಂತರ ಪ್ರಯತ್ನ ಮಾಡಬೇಕು ಎಂದರು.

2017ನೇ ಬ್ಯಾಚ್‍ನ ಐ.ಎ.ಎಸ್ ಯಾಗಿ ಆಯ್ಕೆಯಾಗಿರುವ ನಿಕಿಲ್ ನಿಪ್ಪಾಣಿಕರ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿ ಪರಿಶ್ರಮವೇ ಗೆಲುವಿನ ಮೆಟ್ಟಿಲಾಗಿದ್ದು, ವಿದ್ಯಾರ್ಥಿಗಳು ಸಾಧನೆಗೆ ಪ್ರಯತ್ನ ನಿರಂತರವಾಗಿರಬೇಕು, ದುಶ್ಟಚಟಗಳಿಂದ ದೂರವಿರಬೇಕು, ಸಾಮಾಜಿಕ ಜಾಲತಾಣಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಹೇಳಿದರು.

ಸರ್ಕಾರಿ ಶಾಲೆಗಳಲ್ಲಿಯೇ ಮಕ್ಕಳಿಗೆ ಶಿಕ್ಷಣ ಕೊಡಿಸಿ: ಸಂಸದ ಸುರೇಶ ಅಂಗಡಿ- Tarun kranti 1
ಮಕ್ಕಳಿಗೆ ಪುರಸ್ಕಾರ:ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ನಿಲಯಗಳ ಮತ್ತು ಸರ್ಕಾರಿ ವಸತಿ ಶಾಲೆಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯತು ಸೇರಿ ಒಟ್ಟು 551 ಹಾಗೂ ದ್ವೀತಿಯ ಪಿ.ಯು.ಸಿಯಲ್ಲಿ ಜಿಲ್ಲೆಗೆ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದ 6 ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಹಾಗೂ ಬೆಳಗಾವಿ ಶೈಕ್ಷಣಿಕ ವಿಭಾಗದ 9 ಮತ್ತು ಚಿಕ್ಕೋಡಿ ಶೈಕ್ಷಣಿಕ ವಿಭಾಗದ 8 ಹೀಗೆ ಒಟ್ಟು 574 ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.