ಉತ್ತಮ ಸಮಾಜಕ್ಕಾಗಿ

ಶೈಕ್ಷಣಿಕ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಪ್ರಮುಖ: ಸಂಸದ ಸುರೇಶ ಅಂಗಡಿ

news belagavi

0

ಬೆಳಗಾವಿ:(news belagavi) ಶಿಕ್ಷಕರದ್ದು ಶ್ರೇಷ್ಠ ವೃತ್ತಿಯಾಗಿದ್ದು, ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದೆ ಎಂದು ಸಂಸದ ಸುರೇಶ ಅಂಗಡಿ ಅವರು ಹೇಳಿದರು.
ಜಿಲ್ಲಾ ಪಂಚಾಯತ, ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳಗಾವಿ (ದ) ಹಾಗೂ ನಗರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಸಂಯುಕ್ತಾಶ್ರಯದಲ್ಲಿ ಇಲ್ಲಿನ ಶಿವಬಸವ ನಗರದ ಕೆಪಿಟಿಸಿಎಲ್ ಸಮುದಾಯ ಭವನದಲ್ಲಿ ಬುಧವಾರ (ಸೆ.05) ಹಮ್ಮಿಕೊಂಡಿದ್ದ ಬೆಳಗಾವಿ ಶೈಕ್ಷಣಿಕ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.
News Belgaum-ಶೈಕ್ಷಣಿಕ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ  ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಪ್ರಮುಖ: ಸಂಸದ ಸುರೇಶ ಅಂಗಡಿಶಿಕ್ಷಕರ ಮೇಲಿರುವ ಜವಾಬ್ದಾರಿ ಮಹತ್ತರವಾದುದಾಗಿದ್ದು, ಶಿಕ್ಷಕರು ಮಕ್ಕಳಿಗೆ ಕೇವಲ ಪಾಠಗಳನ್ನು ಬೋಧಿಸಿದೆ ಮಾನವೀಯ ಮೌಲ್ಯ ಹಾಗೂ ಉತ್ತಮ ಚಿಂತನೆಗಳನ್ನು ಮಕ್ಕಳಲ್ಲಿ ತುಂಬಬೇಕು. ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವುದನ್ನು ಮಕ್ಕಳಿಗೆ ತಿಳಿಸಿಕೊಡಬೇಕು ಎಂದರು.
ಇಂದು ಉನ್ನತ ಶಿಕ್ಷಣವನ್ನು ಪಡೆದ ಯುವಕರು ನಿರುದ್ಯೋಗಿಗಳಾಗುತ್ತಿರುವುದು ಬೇಸರದ ಸಂಗತಿಯಾಗಿದ್ದು, ಮಕ್ಕಳಿಗೆ ಸರ್ಟಿಫಿಕೆಟ್ ಶಿಕ್ಷಣ ನೀಡುವುದನ್ನು ನಿಲ್ಲಿಸಿ, ಅವರಲ್ಲಿನ ಪ್ರತಿಭೆ, ಕೌಶಲ್ಯವನ್ನು ವೃದ್ಧಿಸುವ ಶಿಕ್ಷಣವನ್ನು ನೀಡಬೇಕಾಗಿದೆ. ಮಕ್ಕಳಲ್ಲಿ ಸ್ವಾಭಿಮಾನ ಹಾಗೂ ಸ್ವಾವಲಂಬನೆಯನ್ನು ಬೆಳೆಸಬೇಕಾಗಿದೆ ಎಂದು ತಿಳಿಸಿದರು.
ಶಿಕ್ಷಕರು ಸರ್ಕಾರದ ಸೌಲಭ್ಯಗಳನ್ನು ಮಕ್ಕಳಿಗೆ ತಲುಪಿಸಬೇಕು ಹಾಗೂ ಸೌಲಭ್ಯಗಳನ್ನು ಮಕ್ಕಳು ಸದುಪಯೋಗಪಡಿಸುಕೊಳ್ಳುವಂತೆ ನೋಡಿಕೊಳ್ಳಬೇಕೆಂದು ಹೇಳಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯತ ಅಧ್ಯಕ್ಷೆ ಆಶಾ ಐಹೊಳೆ ಅವರು, ಶಿಕ್ಷಕರು ಸಮಾಜದಲ್ಲಿ ಪ್ರಮುಖ ಸ್ಥಾನವನ್ನು ಹೊಂದಿದ್ದು, ಶಿಕ್ಷಕರಿಗಿರುವ ಮೌಲ್ಯ ಅಪಾರ ಎಂದು ಹೇಳಿದರು.
ಡಾ. ಸರ್ವಪಲ್ಲಿ ರಾಧಾಕೃಷ್ಣನ್, ಡಾ. ಎ.ಪಿಜೆ. ಅಬ್ದುಲ್ ಕಲಾಂ ಸೇರಿದಂತೆ ಅನೇಕ ಶಿಕ್ಷಕರು ದೇಶದ ಉನ್ನತ ಸ್ಥಾನಗಳನ್ನು ಅಲಂಕರಿಸಿ ದೇಶಕ್ಕೆ ಉದಾತ್ತ ಕೊಡುಗೆ ನೀಡಿದ್ದಾರೆ. ಅವರ ಆದರ್ಶಗಳನ್ನು ಇಂದಿನ ಶಿಕ್ಷಕರು ಅಳವಡಿಸಿಕೊಂಡು, ಅವರ ಹಾದಿಯಲ್ಲಿ ಸಾಗಬೇಕಿದೆ ಎಂದು ಕಿವಿಮಾತು ಹೇಳಿದರು.
ಶಿಕ್ಷಕರು ಸಮುದ್ರ ಇದ್ದ ಹಾಗೆ ಅವರಿಂದ ಶಿಕ್ಷಣ ಪಡೆದ ಅನೇಕ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದು ಉನ್ನತ ಸ್ಥಾನಗಳನ್ನು ಅಲಂಕರಿಸಿರುತ್ತಾರೆ. ಶಿಕ್ಷಕರು ವಿದ್ಯಾರ್ಥಿಗಳನ್ನು ಶಿಲೆಯಂತೆ ರೂಪಿಸಿ, ಎಲ್ಲ ಕ್ಷೇತ್ರಗಳಿಗೆ ಕೊಡುಗೆಯಾಗಿ ನೀಡಿರುತ್ತಾರೆ ಎಂದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್. ಆರ್ ಅವರು ಮಾತನಾಡಿ, ಶಿಸ್ತು, ಸಂಯಮವನ್ನು ಹೊಂದಿರದಿದ್ದರೆ ವ್ಯಕ್ತಿ ಎಷ್ಟೇ ಉನ್ನತ ಸ್ಥಾನಕ್ಕೇರಿದರು ವ್ಯರ್ಥ. ಆದ್ದರಿಂದ ಶಿಕ್ಷಕರು ಮಕ್ಕಳಲ್ಲಿ ಶಿಸ್ತು, ಸಂಯಮ ಹಾಗೂ ಉತ್ತಮ ಗುಣಗಳನ್ನು ಬೆಳೆಸಬೇಕೆಂದು ಹೇಳಿದರು.
ಮುಂದಿನ ದಿನಗಳಲ್ಲಿ ಜಿಲ್ಲೆ ಶೈಕ್ಷಣಿಕವಾಗಿ ಇನ್ನೂ ಹೆಚ್ಚಿನ ಪ್ರಗತಿ ಸಾಧಿಸುವ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ಹಾಗೂ ಶಿಕ್ಷಕರು ಶ್ರಮವಹಿಸಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದ ಸಾನಿಧ್ಯವನ್ನು ವಹಿಸಿ ಆಶೀರ್ವಚನ ನೀಡಿದ ನಾಗನೂರ ರುದ್ರಾಕ್ಷಿ ಮಠದ ಡಾ. ಸಿದ್ಧರಾಮ ಮಹಾಸ್ವಾಮಿಗಳು, ಎಲ್ಲ ಹುದ್ದೆಗಳಿಗಿಂತ ಶಿಕ್ಷಕ ಹುದ್ದೆ ಶ್ರೇಷ್ಠವಾಗಿದ್ದು, ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ

ಪ್ರಮುಖವಾಗಿದೆ ಎಂದರು. ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಶೈಕ್ಷಣಿಕ ಪ್ರಗತಿ ಉತ್ತಮವಾಗುತ್ತಿದ್ದು, ಇನ್ನೂ ಹೆಚ್ಚಿನ ಪ್ರಗತಿಯಾಗಲಿ ಎಂದು ಶುಭ ಕೋರಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಅನಿಲ ಬೆನಕೆ ಅವರು, ಸಮಾಜ ಶಿಕ್ಷಕರ ಮೇಲೆ ಅತ್ಯಂತ ವಿಶ್ವಾಸವನ್ನಿಟ್ಟುಕೊಂಡಿದ್ದು ಭಾರತ ವಿಶ್ವದಲ್ಲೇ ಬಲಿಷ್ಟ ರಾಷ್ಟ್ರವಾಗುವ ನಿಟ್ಟಿನಲ್ಲಿ ಶಿಕ್ಷಕರು ಕಾರ್ಯನಿರ್ವಹಿಸಬೇಕೆಂದು ಹೇಳಿದರು.
ತಾಯಿಯೇ ಮೊದಲ ಗುರುವಾಗಿದ್ದು, ತಂದೆ, ತಾಯಿ ಮಕ್ಕಳ ವ್ಯಕ್ತಿತ್ವದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಮಕ್ಕಳು ಉತ್ತಮ ಗುಣಗಳನ್ನು ಅಳವಡಿಸಕೊಳ್ಳುವಲ್ಲಿ ತಂದೆ, ತಾಯಿಯ ಜವಾಬ್ದಾರಿಯು ಪ್ರಮುಖವಾಗಿದೆ ಎಂದರು.
ಸರ್ಕಾರಿ ಶಾಲೆಗಳು ಸ್ವಚ್ಛ ಮತ್ತು ಸುಂದರವಾಗಿರಬೇಕೆಂದರೆ ಆ ಶಾಲೆಗಳ ಸುತ್ತಲು ವಾಸಿಸುವ ನಾಗರಿಕರು ಸಹ ಶಾಲೆಯ ಭದ್ರತೆ ಹಾಗೂ ಸ್ವಚ್ಛತೆಯ ಬಗ್ಗೆ ಗಮನಹರಿಸಬೇಕು ಹಾಗೂ ಶಿಕ್ಷಕರೊಂದಿಗೆ ಸಹಕರಿಸಬೇಕೆಂದು ಅಭಿಪ್ರಾಯಪಟ್ಟರು.
ಜಿಲ್ಲಾ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ರಮೇಶ ಗೋರಲ ಅವರು ಮಾತನಾಡಿ, ಇಂದಿನ ತಂತ್ರಜ್ಞಾನ ಯುಗದಲ್ಲಿ ಬದಲಾಗುತ್ತಿರುವ ಇಂದಿನ ಕಾಲಮಾನಕ್ಕೆ ತಕ್ಕಂತೆ ಶಿಕ್ಷಕರು ಸಹ ಬದಲಾಗಿ ಪೂರಕ ಶಿಕ್ಷಣವನ್ನು ನೀಡಬೇಕು. ನಮ್ಮ ಶಿಕ್ಷಣ ಪದ್ಧತಿಯಲ್ಲೂ ಕೂಡ ಕೆಲವು ಬದಲಾವಣೆಗಳಾಗಬೇಕಿದೆ ಎಂದರು.
ಮಣ್ಣೂರ ಡಯಟ್‍ನ ಉಪನಿರ್ದೇಶಕರಾದ ಗಜಾನನ ಮನ್ನಿಕೇರಿ, ಜಿಲ್ಲೆಯ ಸರಕಾರಿ ನೌಕರರ ಸಂಘ, ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ/ಮುಖ್ಯಶಿಕ್ಷಕರ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ನೂರಾರು ಶಿಕ್ಷಕರು, ಇನ್ನಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ನಗರದ ಸರ್ಧಾರ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿಯರು ನಾಡಗೀತೆ ಹಾಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಎ.ಬಿ. ಪುಂಡಲಿಕ ಅವರು ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಮಲ್ಲಿಕಾರ್ಜುನ ದೇಶನೂರ ಹಾಗೂ ಹೇಮಾ ಅಂಗಡಿ ಅವರು ನಿರೂಪಿಸಿದರು. ನಗರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೆ.ಡಿ. ಬಡಿಗೇರ ಅವರು ವಂದಿಸಿದರು.

ನಿವೃತ್ತ ಶಿಕ್ಷಕರು-ಸಾಧಕ ಶಿಕ್ಷಕರಿಗೆ ಸನ್ಮಾನ:
News Belgaum-ಶೈಕ್ಷಣಿಕ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ  ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಪ್ರಮುಖ: ಸಂಸದ ಸುರೇಶ ಅಂಗಡಿ 1 News Belgaum-ಶೈಕ್ಷಣಿಕ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ  ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಪ್ರಮುಖ: ಸಂಸದ ಸುರೇಶ ಅಂಗಡಿ 2ಕಾರ್ಯಕ್ರಮದಲ್ಲಿ ನಗರ ವಲಯದ ನಿವೃತ್ತ ಶಿಕ್ಷಕರನ್ನು ಸತ್ಕರಿಸಲಾಯಿತು. ಜೊತೆಗೆ ಉತ್ತಮ ಸಾಧನೆಗೈದ ಶಿಕ್ಷಕರಿಗೆ ಶಿಕ್ಷಕರ ಕಲ್ಯಾಣನಿಧಿ ವತಿಯಿಂದ ಹಾಗೂ ಜಿಲ್ಲಾ ಪಂಚಾಯತ ವತಿಯಿಂದ ಪ್ರತ್ಯೇಕ ಪುರಸ್ಕಾರ ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಯಿತು.

ಶಿಕ್ಷಕರ ಕಲ್ಯಾಣನಿಧಿ ಜಿಲ್ಲಾ ಮಟ್ಟದ ಪ್ರಶಸ್ತಿ:
ಶಿಕ್ಷಕರ ಕಲ್ಯಾಣನಿಧಿ ಪ್ರಶಸ್ತಿಯನ್ನು ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಶ್ರೀಮತಿ ಸುಲೋಚನಾ ಹರಗಾಪುರೆ, ರಾಘವೇಂದ್ರ ಪತಂಗಿ, ಶ್ರೀಮತಿ ಜಯಶ್ರೀ ಮುರಗೋಡ, ಈರಪ್ಪ ಕಾಜಗಾರ, ಸುರೇಶ ದೇಸಾಯಿ ಅವರು ಪಡೆದರು.
ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಶ್ರೀಮತಿ ವರದಾ ಹೆಗಡೆ, ಶ್ರೀಮತಿ ಪೂಜಾ ಪಾಟೀಲ, ಬಸವರಾಜ ಭರಮಣ್ಣವರ, ಶಿವಪುತ್ರ ಗೋಡಿ, ಕಾಸಿಮಸಾಬ ದನದಮನಿ, ಜಿ.ಬಿ. ತಳವಾರ, ಕೆ.ವೈ. ಗದಿಗೆನ್ನವರ ಗಳಿಸಿದರು.
ಪ್ರೌಢಶಾಲಾ ವಿಭಾಗದಲ್ಲಿ ಎಂ.ಎ. ಪಾಟೀಲ, ಶ್ರೀಮತಿ ನಿರ್ಮಲಾ ಫಿಂಟೋ, ಉಮೇಶ ಸುಬೇದಾರ, ಬಸವರಾಜ ಬಿದರಿ, ಎಸ್.ವಿ. ಬಾಡಕರ, ಆರ್.ಎಂ. ಅಂಗಡಿ, ಎ.ಎನ್. ಮೋದಗೆ ಅವರು ಪಡೆದರು.

ಜಿಲ್ಲಾ ಪಂಚಾಯತ ವತಿಯಿಂದ ಜಿಲ್ಲಾ ಮಟ್ಟದ ಪ್ರಶಸ್ತಿ:
ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಶಿಕ್ಷಕರಾದ ದತ್ತು ಸೋನವಾಡಕರ ಅವರು ಪ್ರಶಸ್ತಿ ಪಡೆದರು. ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಶ್ರೀಮತಿ ಬೇಬಿಆಸ್ಮಾ ನಾಯಿಕ, ಆರ್.ಎಂ. ಮುನಿಯಪ್ಪನವರ, ಕೃಷ್ಣಾಜಿ ಕೌಂದಲಕರ, ಶ್ರೀಮತಿ ರೇಖಾ ಸಣ್ಣಪ್ಪನವರ, ಪ್ರೌಢಶಾಲಾ ವಿಭಾಗದಲ್ಲಿ ಶ್ರೀಮತಿ ಎಸ್.ಎಸ್. ಖಡೇದ, ಲಿಂಗಪ್ಪ ಕಾರಭಾರಿ, ಮಹಾರುದ್ರ ಮುಖಾರಿ ಅವರು ಜಿಲ್ಲಾ ಮಟ್ಟದ ಪ್ರಶಸ್ತಿಗೆ ಭಾಜನರಾದರು.

Leave A Reply

 Click this button or press Ctrl+G to toggle between Kannada and English

Your email address will not be published.