ಉತ್ತಮ ಸಮಾಜಕ್ಕಾಗಿ

ಚುನಾವಣಾ ಜಾಹೀರಾತು -ಪೂರ್ವಾನುಮತಿ ಕಡ್ಡಾಯ :ಡಿಸಿ ಎಸ್. ಜಿಯಾವುಲ್ಲಾ

Election Advertising - Pre-Approval Mandatory: DC S. Jiaullah

0

ಬೆಳಗಾವಿ:(news belagavi) ಕರ್ನಾಟಕ ವಿಧಾನಸಭೆ ಚುನಾವಣೆ-2018ಕ್ಕೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ವಿದ್ಯುನ್ಮಾನ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತು ಹಾಗೂ ಬಲ್ಕ್ ಎಸ್‍ಎಂಎಸ್‍ಗಳನ್ನು ಪ್ರಚುರಪಡಿಸುವ ಮುಂಚೆ ಜಿಲ್ಲಾ ಮಟ್ಟದ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿ(ಎಂಸಿಎಂಸಿ)ಯ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಎಸ್.ಜಿಯಾವುಲ್ಲಾ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕಾರ್ಯನಿರ್ವಹಿಸಲಿರುವ ಎಂಸಿಎಂಸಿ ಸಮಿತಿಯು ವಿದ್ಯುನ್ಮಾನ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಗೊಳ್ಳುವ ಚುನಾವಣಾ ವಿಷಯ ಹಾಗೂ ಅವುಗಳ ಕಂಟೆಂಟ್ ಪರಿಶೀಲಿಸಿ ಅನುಮತಿ ನೀಡಲಿದೆ ಎಂದು ತಿಳಿಸಿದ್ದಾರೆ.
ಸ್ಥಳೀಯ ಕೇಬಲ್ ನೆಟವರ್ಕ, ಟಿವಿ ಚಾನೆಲ್‍ಗಳು, ಖಾಸಗಿ ಎಫ್‍ಎಂ ರೇಡಿಯೋ ಕೇಂದ್ರಗಳು, ಸಿನಿಮಾಮಂದಿರಗಳು, ಸಾಮಾಜಿಕ ಜಾಲತಾಣಗಳು ಹಾಗೂ ಮೊಬೈಲ್ ಸರ್ವೀಸ್ ಪ್ರೊವೈಡರ್‍ಗಳು ಯಾವುದೇ ರೀತಿಯ ಚುನಾವಣಾ ಜಾಹೀರಾತು ಅಥವಾ ಬಲ್ಕ್ ಎಸ್‍ಎಂಎಸ್ ಪ್ರಸಾರ ಮಾಡುವ ಮುಂಚೆ ಎಂಸಿಎಂಸಿ ನೀಡಿರುವ ಪೂರ್ವಾನುಮತಿ ಪ್ರಮಾಣಪತ್ರವನ್ನು ಜಾಹೀರಾತು ನೀಡುವ ರಾಜಕೀಯ ಪಕ್ಷ ಅಥವಾ ಅಭ್ಯರ್ಥಿಗಳ ಕಡೆಯಿಂದ ಪಡೆದುಕೊಳ್ಳುವುದು.
ಸಮಿತಿಯು ಮುದ್ರಣ, ವಿದ್ಯುನ್ಮಾನ ಮಾಧ್ಯಮಗಳಾದ ಕೇಬಲ್ ಚಾನೆಲ್/ಟಿವಿ ಚಾನೆಲ್‍ಗಳು, ರೇಡಿಯೋ ಹಾಗೂ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇಡಲಿದ್ದು, ಅನುಮತಿ ಪಡೆಯದೇ ಚುನಾವಣಾ ಜಾಹೀರಾತು ನೀಡಿರುವುದು ಕಂಡುಬಂದಲ್ಲಿ ಸಂಬಂಧಪಟ್ಟವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.
ಯಾವುದೇ ಪಕ್ಷ ಅಥವಾ ಅಭ್ಯರ್ಥಿಗಳ ಪರವಾಗಿ ಜಾಹೀರಾತುಗಳನ್ನು ಪ್ರಕಟಿಸಿದ ಸಂದರ್ಭದಲ್ಲಿ ಆಯಾ ಮಾಧ್ಯಮಗಳಿಗೆ ನಿಗದಿಪಡಿಸಲಾದ ಜಾಹೀರಾತು ದರ ಅಥವಾ ಆಯಾ ಮಾಧ್ಯಮಗಳ ವಾಸ್ತವಿಕ ವಾಣಿಜ್ಯ ಜಾಹೀರಾತು ದರ ಪರಿಗಣಿಸಿ ಅದರ ಮೊತ್ತವನ್ನು ಪಕ್ಷ ಅಥವಾ ಅಭ್ಯರ್ಥಿಯ ಚುನಾವಣಾ ವೆಚ್ಚಕ್ಕೆ ಸೇರಿಸಲು ಚುನಾವಣಾ ವೆಚ್ಚ ವೀಕ್ಷಕರಿಗೆ ಸಮಿತಿಯು ಮಾಹಿತಿ ನೀಡಲಿದೆ.
ಯಾವುದೇ ಮಾಧ್ಯಮದಲ್ಲಿ ಪ್ರಸಾರವಾದ ಚುನಾವಣಾ ಜಾಹೀರಾತುಗಳಿಗೆ ಪೂರ್ವಾನುಮತಿ ಪಡೆಯಲಾಗಿದೆಯೇ ಎಂಬುದನ್ನು ಸಮಿತಿ ಪರಿಶೀಲಿಸುತ್ತದೆ.

News Belgaum-ಪೂರ್ವಭಾವಿ ಸಭೆ ಡಾ||ಅಂಬೇಡ್ಕರ್ ಜಯಂತಿಯನ್ನು ಹಬ್ಬದಂತೆ ಆಚರಿಸಿ  - ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾಅಭ್ಯರ್ಥಿಯ ಅಥವಾ ಪಕ್ಷದ ಒಪ್ಪಿಗೆಯಿಂದ ನೀಡಲಾಗಿರುವ ಜಾಹೀರಾತುಗಳ ವೆಚ್ಚವನ್ನು ಸಂಬಂಧಪಟ್ಟ ಪಕ್ಷ ಅಥವಾ ಅಭ್ಯರ್ಥಿಯ ವೆಚ್ಚಕ್ಕೆ ಸೇರಿಸಲಾಗುತ್ತದೆ.
ಅಭ್ಯರ್ಥಿಗಳ ಒಪ್ಪಿಗೆ ಇಲ್ಲದೇ ಚುನಾವಣಾ ಜಾಹೀರಾತು ನೀಡುವ ಮೂರನೇ ವ್ಯಕ್ತಿಯ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 171ಎಚ್ ಉಲ್ಲಂಘನೆ ಪ್ರಕರಣ ದಾಖಲಿಸಲಾಗುವುದು.
ಮೀಡಿಯಾ ಮಾನಿಟರಿಂಗ್ ಸೆಲ್:
ಚುನಾವಣಾ ಜಾಹೀರಾತುಗಳ ಪರಿಶೀಲನೆಗಾಗಿ “ವಾರ್ತಾಭವನ” ಉಪ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನ್ಯಾಯಾಲಯ ಆವರಣ” (ದೂರವಾಣಿ ಸಂಖ್ಯೆ 0831-2420344) ಈ ಕಚೇರಿಯಲ್ಲಿ ಮೀಡಿಯಾ ಮಾನಿಟರಿಂಗ್ ಕೇಂದ್ರ ಸ್ಥಾಪಿಸಲಾಗಿರುತ್ತದೆ.
ನಿರಂತರವಾಗಿ ಕಾರ್ಯನಿರ್ವಹಿಸಲಿರುವ ಈ ಕೇಂದ್ರವು ಸ್ಥಳೀಯ ಕೇಬಲ್ ನೆಟವರ್ಕ, ಸಾಮಾಜಿಕ ಜಾಲತಾಣ, ಟಿವಿ ಚಾನೆಲ್‍ಗಳಲ್ಲಿ ಪ್ರಸಾರವಾಗುವ ಜಾಹೀರಾತು ಮತ್ತು ಸುದ್ದಿಗಳ ಮೇಲೆ ನಿಗಾ ಇಡಲಿದೆ. ಅದೇ ರೀತಿ ಪ್ರತಿದಿನ ಪ್ರಕಟವಾಗುವ ಕನ್ನಡ, ಇಂಗ್ಲಿಷ್, ಮರಾಠಿ ಮತ್ತಿತರ ದಿನಪತ್ರಿಕೆಗಳಲ್ಲಿ ಪ್ರಕಟವಾಗುವ ಜಾಹೀರಾತುಗಳು ಹಾಗೂ ಸುದ್ದಿಗಳನ್ನು ಪರಿಶೀಲಿಸಲಿದೆ.
ಭಾರತ ಚುನಾವಣಾ ಆಯೋಗದ ನಿರ್ದೇಶನಗಳು ಮತ್ತು ಚಾಲ್ತಿಯಲ್ಲಿರುವ ವಿವಿಧ ನಿಯಮಾವಳಿಗಳನ್ನು ಪಾಲಿಸುವ ಮೂಲಕ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಎಲ್ಲ ಮಾಧ್ಯಮದವರು ಸಹಕರಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಎಸ್ ಜಿಯಾವುಲ್ಲಾ ಅವರು ಕೋರಿದ್ದಾರೆ. Election Advertising – Pre-Approval Mandatory: DC S. Jiaullah

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: