ಉತ್ತಮ ಸಮಾಜಕ್ಕಾಗಿ

18 ವಿಧಾನಸಭಾ ಕ್ಷೇತ್ರಗಳ ಚುನಾವಣಾ ವೆಚ್ಚ ವೀಕ್ಷಕರ ಭೇಟಿ ಮೀಡಿಯಾ ಮಾನಿಟರಿಂಗ್ ಕೇಂದ್ರ ಪರಿಶೀಲನೆ

Election Campaign of 18 Assembly Constituencies Meet the Media Monitoring Center

0

ಬೆಳಗಾವಿ:(news belgaum) ಚುನಾವಣಾ ಜಾಹೀರಾತು, ಪೇಡ್‍ನ್ಯೂಸ್(ಪಾವತಿ ಸುದ್ದಿ) ಮೇಲೆ ನಿಗಾ ವಹಿಸಲು ವಾರ್ತಾ ಇಲಾಖೆಯ ವಾರ್ತಾಭವನದಲ್ಲಿ ಸ್ಥಾಪಿಸಲಾಗಿರುವ ಮೀಡಿಯಾ ಮಾನಿಟರಿಂಗ್ ಕೇಂದ್ರಕ್ಕೆ ಚುನಾವಣಾ ವೆಚ್ಚ ವೀಕ್ಷಕರು ಬುಧವಾರ(ಏ.18) ಭೇಟಿ ನೀಡಿ ಪರಿಶೀಲಿಸಿದರು.
ಜಿಲ್ಲಾ ಚುನಾವಣಾಧಿಕಾರಿ ಎಸ್.ಜಿಯಾವುಲ್ಲಾ ಅವರೊಂದಿಗೆ ಕೇಂದ್ರಕ್ಕೆ ಭೇಟಿ ನೀಡಿದ ವೀಕ್ಷಕರು, ಕೇಂದ್ರದ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
News Belgaum-18 ವಿಧಾನಸಭಾ ಕ್ಷೇತ್ರಗಳ ಚುನಾವಣಾ ವೆಚ್ಚ ವೀಕ್ಷಕರ ಭೇಟಿ ಮೀಡಿಯಾ ಮಾನಿಟರಿಂಗ್ ಕೇಂದ್ರ ಪರಿಶೀಲನೆ News Belgaum-18 ವಿಧಾನಸಭಾ ಕ್ಷೇತ್ರಗಳ ಚುನಾವಣಾ ವೆಚ್ಚ ವೀಕ್ಷಕರ ಭೇಟಿ ಮೀಡಿಯಾ ಮಾನಿಟರಿಂಗ್ ಕೇಂದ್ರ ಪರಿಶೀಲನೆ 1ನಾಮಪತ್ರ ಸಲ್ಲಿಕೆ ಆರಂಭಗೊಂಡಿರುವುದರಿಂದ ದಿನಪತ್ರಿಕೆಗಳು ಹಾಗೂ ಟಿವಿ ಚಾನೆಲ್‍ಗಳಲ್ಲಿ ಜಾಹೀರಾತುಗಳ ಪ್ರಮಾಣ ಹೆಚ್ಚಾಗಲಿದೆ. ಆದ್ದರಿಂದ ಪ್ರತಿಯೊಂದು ದಿನಪತ್ರಿಕೆ ಹಾಗೂ ಚಾನೆಲ್‍ಗಳನ್ನು ನಿರಂತರವಾಗಿ ವೀಕ್ಷಿಸುವಂತೆ ತಿಳಿಸಿದರು.
ಕೇಂದ್ರದ ಕಾರ್ಯನಿರ್ವಹಣೆ ಹಾಗೂ ಅದಕ್ಕಾಗಿ ಒದಗಿಸಲಾಗಿರುವ ಸೌಲಭ್ಯಗಳ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿ ಎಸ್.ಜಿಯಾವುಲ್ಲಾ ಅವರು ಮಾಹಿತಿ ನೀಡಿದರು.
ಅಭ್ಯರ್ಥಿಯ ಚುನಾವಣಾ ಪ್ರಚಾರದ ಖರ್ಚು-ವೆಚ್ಚವು ಅವರು ನಾಮಪತ್ರ ಸಲ್ಲಿಸಿದ ಬಳಿಕ ಆರಂಭಗೊಳ್ಳುವುದರಿಂದ ಪ್ರತಿದಿನ ಅವರು ನೀಡುವ ಜಾಹೀರಾತುಗಳ ಲೆಕ್ಕವನ್ನು ಚುನಾವಣಾ ವೆಚ್ಚ ವೀಕ್ಷಕರಿಗೆ ನಿಗದಿತ ನಮೂನೆಯಲ್ಲಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಮೀಡಿಯಾ ಮಾನಿಟರಿಂಗ್ ಕೇಂದ್ರದ ಕಾರ್ಯವೈಖರಿ ಹಾಗೂ ರಿಜಿಸ್ಟರ್ ನಿರ್ವಹಣೆಯ ಕುರಿತು ಕೇಂದ್ರದ ನೋಡಲ್ ಅಧಿಕಾರಿ ಗುರುನಾಥ ಕಡಬೂರ ವಿವರಿಸಿದರು.
ಚುನಾವಣಾ ವೆಚ್ಚ ವೀಕ್ಷಕರಾದ ಗುಪ್ತಾ ವಿವೇಕ್ ಕುಮಾರ್, ದಿನೇಶಕುಮಾರ್ ಗುಪ್ತಾ, ಸುರೇಂದ್ರ ಕುಮಾರ್, ಕುಂದನ್ ಯಾದವ, ಕೆ.ವೀರಮಣಿ, ಸಾಧು ನರಸಿಂಹ ರೆಡ್ಡಿ, ಎಂ.ವಿ. ವಾಸುದೇವನ್, ಸುನೀಲ್ ದೇಶಮುಖ್, ಕೆ.ಶಂಕರ ಗಣೇಶ್, ಕೆ.ವಿನೋಥ ಖನ್ನಾ, ಮೋಹಿತಕುಮಾರ್ ನಿಗಮ್, ಅಪರ ಜಿಲ್ಲಾಧಿಕಾರಿ ಡಾ.ಎಚ್.ಬಿ. ಬೂದೆಪ್ಪ, ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳಾದ ಸೋಮಶೇಖರ ಹಾಗೂ ಸಿಬ್ಬಂದಿ ವರ್ಗ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.Election Campaign of 18 Assembly Constituencies Meet the Media Monitoring Center

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.