ಉತ್ತಮ ಸಮಾಜಕ್ಕಾಗಿ

ಜಿಲ್ಲೆಗೆ ಆಗಮಿಸಿದ 18 ಕ್ಷೇತ್ರಗಳ ಚುನಾವಣಾ ವೆಚ್ಚ ವೀಕ್ಷಕರ ಸಭೆ ನ್ಯಾಯಸಮ್ಮತ ಚುನಾವಣೆ: ಸಿದ್ಧತೆ ಬಗ್ಗೆ ಮೆಚ್ಚುಗೆ

Election Commission of 18 Elections to the District

0

ಬೆಳಗಾವಿ: (news belgaum)ರಾಜ್ಯದಲ್ಲಿ ಅತೀ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಜಿಲ್ಲೆಯಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಕ್ರಮ ಹಣ, ಮದ್ಯ ಮತ್ತಿತರ ವಸ್ತುಗಳ ಸಾಗಾಣಿಕೆ ಹಾಗೂ ಮತದಾರರಿಗೆ ಆಮಿಷ ಒಡ್ಡುವುದರ ಮೇಲೆ ತೀವ್ರ ನಿಗಾ ವಹಿಸಲಾಗಿದೆ ಎಂದು ಜಿಲ್ಲಾ ಚುಣಾವಣಾಧಿಕಾರಿ ಎಸ್.ಜಿಯಾವುಲ್ಲಾ ತಿಳಿಸಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆ 2018ರ ಹಿನ್ನೆಲೆಯಲ್ಲಿ ಜಿಲ್ಲೆಗೆ ಹನ್ನೊಂದು ಜನ ಆಗಮಿಸಿರುವ ಚುನಾವಣಾ ವೆಚ್ಚ ವೀಕ್ಷಕರ ಜತೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ (ಏ.18) ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಚುನಾವಣಾ ಆಯೋಗದ ನಿರ್ದೇಶನದ ಪ್ರಕಾರ ಫ್ಲೈಯಿಂಗ್ ಸ್ಕ್ವಾಡ್, ಸ್ಟ್ಯಾಟಿಕ್ ಸರ್ವೇಲನ್ಸ್ ಟೀಮ್, ವಿಡಿಯೋ ಸರ್ವೇಲನ್ಸ್ ಟೀಮ್, ವಿಡಿಯೋ ವ್ಯೂವಿಂಗ್ ಟೀಮ್, ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳ ತಂಡ, ಚುನಾವಣಾ ವೆಚ್ಚ ವೀಕ್ಷಕ ತಂಡ ಹಾಗೂ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿ ಸೇರಿದಂತೆ ಎಲ್ಲ ಬಗೆಯ ತಂಡಗಳನ್ನು ರಚಿಸಲಾಗಿದೆ.
ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸುವ ನಿಟ್ಟಿನಲ್ಲಿ ಈ ತಂಡಗಳು ಈಗಾಗಲೇ ಕಾರ್ಯೋನ್ಮುಮುಖಗೊಂಡಿವೆ. ಅಂತರರಾಜ್ಯ ಗಡಿ ಚೆಕ್‍ಪೋಸ್ಟ್‍ಗಳಲ್ಲಿ ಈಗಾಗಲೇ ಅಕ್ರಮ ಮದ್ಯ ಹಾಗೂ ಹಣ ಸಾಗಾಣಿಕೆ ಪ್ರಕರಣಗಳನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಪ್ರತಿಯೊಂದು ಚೆಕ್‍ಪೋಸ್ಟ್‍ಗಳಲ್ಲಿ ಸಿಸಿಟಿವಿ ಹಾಗೂ ಫ್ಲೈಯಿಂಗ್ ಸ್ಕ್ವಾಡ್ ಜತೆ ವಿಡಿಯೋಗ್ರಾಫರ್‍ಗಳನ್ನು ನಿಯೋಜಿಸಲಾಗಿದ್ದು, ಜಿಲ್ಲೆಯನ್ನು ಪ್ರವೇಶಿಸುವ ರಾಷ್ಟ್ರ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ತೀವ್ರ ನಿಗಾ ವಹಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಜಿಯಾವುಲ್ಲಾ ವಿವರಿಸಿದರು.

ನಗರ ವ್ಯಾಪ್ತಿಯಲ್ಲಿ 11 ಚೆಕ್‍ಪೋಸ್ಟ್:
News Belgaum-ಜಿಲ್ಲೆಗೆ ಆಗಮಿಸಿದ 18 ಕ್ಷೇತ್ರಗಳ ಚುನಾವಣಾ ವೆಚ್ಚ ವೀಕ್ಷಕರ ಸಭೆ ನ್ಯಾಯಸಮ್ಮತ ಚುನಾವಣೆ: ಸಿದ್ಧತೆ ಬಗ್ಗೆ ಮೆಚ್ಚುಗೆ News Belgaum-ಜಿಲ್ಲೆಗೆ ಆಗಮಿಸಿದ 18 ಕ್ಷೇತ್ರಗಳ ಚುನಾವಣಾ ವೆಚ್ಚ ವೀಕ್ಷಕರ ಸಭೆ ನ್ಯಾಯಸಮ್ಮತ ಚುನಾವಣೆ: ಸಿದ್ಧತೆ ಬಗ್ಗೆ ಮೆಚ್ಚುಗೆ 1ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ 15 ಮತಕ್ಷೇತ್ರಗಳು ಹಾಗೂ ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ 3 ವಿಧಾನಸಭಾ ಕ್ಷೇತ್ರಗಳು ಬರುತ್ತವೆ. ಕಮೀಷನರೇಟ್ ವ್ಯಾಪ್ತಿಯಲ್ಲಿ 11 ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಡಾ.ಡಿ.ಸಿ.ರಾಜಪ್ಪ ಮಾಹಿತಿ ನೀಡಿದರು.
ಜಿಲ್ಲೆಯ ವಿವಿಧ ಕಡೆ ಸ್ಥಾಪಿಸಲಾಗಿರುವ ಚೆಕ್‍ಪೋಸ್ಟ್‍ಗಳು ಹಾಗೂ ಫ್ಲೈಯಿಂಗ್ ಸ್ಕ್ವಾಡ್ ಕಾರ್ಯನಿರ್ವಹಣೆ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ ಸಿ.ಎಚ್.ಸುಧೀರಕುಮಾರ ರೆಡ್ಡಿ ವಿವರಿಸಿದರು.
ಚುನಾವಣೆ ಹಿನ್ನೆಲೆಯಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ ಚುನಾವಣಾ ವೆಚ್ಚ ವೀಕ್ಷಕರು, ಚುನಾವಣಾ ವೆಚ್ಚಕ್ಕೆ ಸಂಬಂಧಿಸಿದಂತೆ ಪ್ರತಿದಿನ ಕಳಿಸುವ ಮಾಹಿತಿಯನ್ನು ಒಂದೇ ನಮೂನೆಯಲ್ಲಿ ಕಳುಹಿಸುವಂತೆ ಸಹಾಯಕ ಚುನಾವಣಾ ವೆಚ್ಚ ವೀಕ್ಷಕರಿಗೆ ಸಲಹೆ ನೀಡಿದರು.
ಅಭ್ಯರ್ಥಿಯ ಖರ್ಚು-ವೆಚ್ಚದ ನಿರ್ವಹಣೆಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಜತೆ ಸಭೆ ನಡೆಸಿರುವ ಬಗ್ಗೆ ಮಾಹಿತಿ ಪಡೆದುಕೊಂಡರು. ಅದೇ ರೀತಿ ಆದಾಯ ತೆರಿಗೆ ಇಲಾಖೆ ಮತ್ತು ಅಬಕಾರಿ ಇಲಾಖೆಯಿಂದ ಯಾವ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂಬುದರ ಬಗ್ಗೆ ತಿಳಿದುಕೊಂಡರು.
ಅಪರ ಜಿಲ್ಲಾಧಿಕಾರಿ ಡಾ.ಬೂದೆಪ್ಪ ಎಚ್.ಬಿ., ಜಿಲ್ಲೆಯ ಸಮಗ್ರ ಮಾಹಿತಿಯನ್ನು ಪ್ರಸ್ತುತಪಡಿಸಿದರು. ಚುನಾವಣಾ ವೆಚ್ಚ ವೀಕ್ಷಕರಾದ ಗುಪ್ತಾ ವಿವೇಕ್ ಕುಮಾರ್, ದಿನೇಶಕುಮಾರ್ ಗುಪ್ತಾ, ಸುರೇಂದ್ರ ಕುಮಾರ್, ಕುಂದನ್ ಯಾದವ, ಕೆ.ವೀರಮಣಿ, ಸಾಧು ನರಸಿಂಹ ರೆಡ್ಡಿ, ಎಂ.ವಿ.ವಾಸುದೇವನ್, ಸುನೀಲ್ ದೇಶಮುಖ್, ಕೆ.ಶಂಕರ ಗಣೇಶ್, ಕೆ.ವಿನೋಥ ಖನ್ನಾ, ಮೋಹಿತಕುಮಾರ್ ನಿಗಮ್ ಸಭೆಯಲ್ಲಿ ಉಪಸ್ಥಿತರಿದ್ದರು.
ಮಾದರಿ ನೀತಿ ಸಂಹಿತೆ ಜಿಲ್ಲಾ ನೋಡಲ್ ಅಧಿಕಾರಿ ಜಗದೀಶ ರೂಗಿ, ಚುನಾವಣಾ ವೆಚ್ಚ ವೀಕ್ಷಕ ನೋಡಲ್ ಅಧಿಕಾರಿ ಎಂ.ಪಿ.ಅನಿತಾ, ಅಬಕಾರಿ ಉಪ ಆಯುಕ್ತ ಅರುಣಕುಮಾರ್, ಆದಾಯ ತೆರಿಗೆ ನೋಡಲ್ ಅಧಿಕಾರಿ ಶಕೀಲ್ ಅಹ್ಮದ್, ಮಾಧ್ಯಮ ಪ್ರಮಾಣೀಕರಣ ಸಮಿತಿ ನೋಡಲ್ ಅಧಿಕಾರಿ ಗುರುನಾಥ ಕಡಬೂರ ಸೇರಿದಂತೆ ವಿವಿಧ ತಂಡಗಳ ನೋಡಲ್ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. Election Commission of 18 Elections to the District

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.