ಉತ್ತಮ ಸಮಾಜಕ್ಕಾಗಿ

ಚುನಾವಣಾ ಸಾಮಾನ್ಯ ವೀಕ್ಷಕರ ಸಭೆ; ಪೂರ್ವ ಸಿದ್ಧತೆ ಪರಿಶೀಲನೆ ನ್ಯಾಯಸಮ್ಮತ ಚುನಾವಣೆ: ನಮ್ಮೆಲ್ಲರ ಹೊಣೆ

Election General Meeting Meetings; Preparation Preparedness Elections: All of us are responsible

0

ಬೆಳಗಾವಿ:(news belgaum) “ಚುನಾವಣೆಗೆ ನಿಯೋಜಿತಗೊಂಡಿರುವ ಸಿಬ್ಬಂದಿಗೆ ಸೂಕ್ತ ತರಬೇತಿ; ಅಗತ್ಯ ಸುರಕ್ಷತಾ ಕ್ರಮಗಳು; ಚುನಾವಣೆಗೆ ಸಂಬಂಧಿಸಿದ ದೂರುಗಳಿಗೆ ಸಂಬಂಧಿಸಿದಂತೆ ತಕ್ಷಣ ಕ್ರಮ ಕೈಗೊಳ್ಳುವುದು ಹಾಗೂ ನಿಷ್ಪಕ್ಷಪಾತದಿಂದ ಎಲ್ಲರೂ ಕೆಲಸ ಮಾಡಿದರೆ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸುವುದು ಸಾಧ್ಯ” ಎಂದು ಜಿಲ್ಲೆಗೆ ಆಗಮಿಸಿರುವ ಸಾಮಾನ್ಯ ವೀಕ್ಷಕರು ತಿಳಿಸಿದ್ದಾರೆ.
ಭಾರತ ಚುನಾವಣಾ ಆಯೋಗದಿಂದ ಬೆಳಗಾವಿ ಜಿಲ್ಲೆಯ 18 ಮತಕ್ಷೇತ್ರಗಳಿಗೆ ನೇಮಕಗೊಂಡಿರುವ ಹನ್ನೊಂದು ಜನರ ಸಾಮಾನ್ಯ ವೀಕ್ಷಕರು ಮಂಗಳವಾರ(ಏ.24) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ಜಿಲ್ಲಾಡಳಿತದಿಂದ ಮಾಡಲಾಗಿರುವ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದುಕೊಂಡ ಅವರು, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ನಿಟ್ಟಿನಲ್ಲಿ ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ಹೇಳಿದರು.

ತಕ್ಷಣ ಸ್ಪಂದಿಸಲು ಸೂಚನೆ:
News Belgaum-ಚುನಾವಣಾ ಸಾಮಾನ್ಯ ವೀಕ್ಷಕರ ಸಭೆ; ಪೂರ್ವ ಸಿದ್ಧತೆ ಪರಿಶೀಲನೆ ನ್ಯಾಯಸಮ್ಮತ ಚುನಾವಣೆ: ನಮ್ಮೆಲ್ಲರ ಹೊಣೆಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಹಂತದಲ್ಲಿ ಬರುವ ದೂರುಗಳಿಗೆ ತಕ್ಷಣ ಸ್ಪಂದಿಸುವಂತೆ ಸಾಮಾನ್ಯ ವೀಕ್ಷಕರು ಸೂಚನೆ ನೀಡಿದರು.
ಸಾರ್ವಜನಿಕರು ಅಥವಾ ಪಕ್ಷಗಳಿಂದ ತಮಗೆ ಸಲ್ಲಿಕೆಯಾಗುವ ದೂರುಗಳನ್ನು ಸಂಬಂಧಪಟ್ಟ ಮತಕ್ಷೇತ್ರದ ಚುನವಣಾಧಿಕಾರಿಗಳು ಅಥವಾ ನೋಡಲ್ ಅಧಿಕಾರಿಗಳ ಗಮನಕ್ಕೆ ತಂದಾಗ ಕೂಡಲೇ ಅದಕ್ಕೆ ಪ್ರತಿಕಿಯಿಸಬೇಕು ಎಂದು ಹೇಳಿದರು.
ಇನ್ನು ಮತಎಣಿಕೆ ಹಾಗೂ ಮತದಾನಕ್ಕೆ ನಿಯೋಜಿತ ಸಿಬ್ಬಂದಿಗೆ ಉತ್ತಮ ತರಬೇತಿ ನೀಡುವ ಮೂಲಕ ಹಲವಾರು ಸಮಸ್ಯೆಗಳನ್ನು ನಿಭಾಯಿಸಬಹುದು. ಆದ್ದರಿಂದ ಸೂಕ್ತ ಕಾಲದಲ್ಲಿ ಎಲ್ಲರಿಗೂ ಉತ್ತಮ ತರಬೇತಿ ನೀಡುವಂತೆ ನಿರ್ದೇಶನ ನೀಡಿದರು.

ಮತಚೀಟಿ ಖಚಿತಪಡಿಸಿ:
ಪ್ರತಿಯೊಬ್ಬ ಮತದಾರರಿಗೆ ಮುಂಚಿತವಾಗಿ ಮತಚೀಟಿಗಳನ್ನು ಒದಗಿಸುವುದರಿಂದ ಮತದಾನ ಸಂದರ್ಭದಲ್ಲಿ ಗೊಂದಲಗಳಿಗೆ ಕಡಿವಾಣ ಹಾಕಬಹುದು. ಆದ್ದರಿಂದ ಮತಚೀಟಿಗಳನ್ನು ಖಾತ್ರಿಪಡಿಸಬೇಕು ಎಂದು ತಿಳಿಸಿದರು.
ಇದಕ್ಕೆ ಉತ್ತರಿಸಿದ ಜಿಲ್ಲಾ ಚುನಾವಣಾಧಿಕಾರಿ ಎಸ್.ಜಿಯಾವುಲ್ಲಾ ಅವರು, ಚುನಾವಣಾ ಆಯೋಗದ ನಿರ್ದೇಶನದಂತೆ ಮತಚೀಟಿಗಳ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಹೆಚ್ಚುವರಿ ಗಸ್ತು-ಸಹಕಾರಿ:
ಚುನಾವಣಾ ಸಂದರ್ಭದಲ್ಲಿ ಉಂಟಾಗುವ ಅಕ್ರಮಗಳಿಗೆ ಕಡಿವಾಣ ಹಾಕಲು ಎಸ್‍ಎಸ್‍ಟಿ ಜತೆಗೆ ಹೆಚ್ಚುವರಿ ಸಂಚಾರಿ ಗಸ್ತು ತಂಡಗಳನ್ನು ನಿಯೋಜಿಸುವಂತೆ ಚುನಾವಣಾ ಸಾಮಾನ್ಯ ವೀಕ್ಷಕರು ಸಲಹೆ ನೀಡಿದರು.
ಎರಡು ರಾಜ್ಯಗಳ ಗಡಿಗಳಲ್ಲಿ ತೀವ್ರ ನಿಗಾವಹಿಸಬೇಕು ಹಾಗೂ ಅಂತರರಾಜ್ಯ ಅಧಿಕಾರಿಗಳ ಸಭೆ ನಡೆಸಿ ಪರಸ್ಪರ ಮಾಹಿತಿ ವಿನಿಮಯ ಮಾಡಿಕೊಳ್ಳುವ ಮೂಲಕ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ತಿಳಿಸಿದರು.
ನೀರ್ಭಿತ ಮತ್ತು ನಿಷ್ಪಕ್ಷಪಾತ ಚುನಾವಣೆ ನಡೆಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ವತಿಯಿಂದ ಕೈಗೊಳ್ಳಲಾಗಿರುವ ಕ್ರಮಗಳು ಹಾಗೂ ಪೊಲೀಸ್ ಪಡೆ, ಅರೆಸೇನಾ ಪಡೆ ನಿಯೋಜನೆ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಎಚ್.ಸುಧೀರಕುಮಾರ ರೆಡ್ಡಿ ವಿವರಿಸಿದರು.

ಪೊಲೀಸ್ ಕಮೀಶನರೇಟ್ ವ್ಯಾಪ್ತಿಯಲ್ಲಿ ಕೈಗೊಂಡಿರುವ ಸುರಕ್ಷತಾ ಕ್ರಮಗಳ ಬಗ್ಗೆ ಪೊಲೀಸ್ ಆಯುಕ್ತ ಡಾ.ಡಿ.ಸಿ.ರಾಜಪ್ಪ ಹಾಗೂ ಡಿಸಿಪಿ ಸೀಮಾ ಲಾಟಕರ ಮಾಹಿತಿ ನೀಡಿದರು. ಸ್ವೀಪ್ ಕಾರ್ಯಚಟುವಿಟಕೆಗಳ ಬಗ್ಗೆ ಜಿಲ್ಲಾ ಸ್ವೀಪ್ ಅಧ್ಯಕ್ಷ ರಾಮಚಂದ್ರನ್ ತಿಳಿಸಿದರು.
ಬೆಳಗಾವಿ ಜಿಲ್ಲೆಗೆ ನಿಯೋಜನೆಗೊಂಡಿರುವ ಚುನಾವಣಾ ಸಾಮಾನ್ಯ ವೀಕ್ಷಕರಾದ ಕೆ.ಆರ್.ಬಿ.ಎಚ್.ಎನ್. ಚಕ್ರವರ್ತಿ, ಡಾ.ಮನೀಷ್‍ಕುಮಾರ್, ಭುವನೇಶ ಯಾದವ, ಪಿ.ವೆಂಕಟರಾಮಿ ರೆಡ್ಡಿ, ಅಕ್ಷಿತ್ ತಿವಾರಿ, ಗೋವಿಂದ ಜೈಸ್ವಾಲ್, ಆರ್.ರಾಮಕೃಷ್ಣನ್, ಮನೋಜರಂಜನ್ ಪಾಟ್ನಾಯಿಕ್ ಮತ್ತಿತರರು ಉಪಸ್ಥಿತರಿದ್ದರು.
ಅಪರ ಜಿಲ್ಲಾಧಿಕಾರಿ ಡಾ.ಎಚ್.ಬಿ.ಬೂದೆಪ್ಪ ಅವರು, ಜಿಲ್ಲೆಯ ಮಾಹಿತಿ ಹಾಗೂ ಚುನಾವಣಾ ಅಂಕಿ-ಅಂಶಗಳ ಬಗ್ಗೆ ಮಾಹಿತಿ ಒದಗಿಸಿದರು.
ಜಿಲ್ಲೆಯ ಎಲ್ಲ ನೋಡಲ್ ಅಧಿಕಾರಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.