ಉತ್ತಮ ಸಮಾಜಕ್ಕಾಗಿ

ಚುನಾವಣೆ ಪ್ರಜಾಪ್ರಭುತ್ವದ ಹಬ್ಬ: – ಸಿಇಒ ರಾಮಚಂದ್ರನ್

elections-democracy-festival-ceo-ramachandran

0

ಬೆಳಗಾವಿ:(news belagavi) ಚುನಾವಣೆ ಪ್ರಜಾಪ್ರಭುತ್ವದ ದೊಡ್ಡ ಹಬ್ಬವಾಗಿದ್ದು, ಚುನಾವಣೆಯಲ್ಲಿ ಪ್ರತಿಯೊಬ್ಬ ಮತದಾರರು ಪಾಲ್ಗೊಂಡು, ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮಚಂದ್ರನ್. ಆರ್ ಅವರು ಕರೆ ನೀಡಿದರು.
ನಗರದ ಕೆಎಲ್‍ಎಸ್ ಗೋಗಟೆ ತಾಂತ್ರಿಕ ಮಹಾವಿದ್ಯಾಲಯದ ಸಭಾಂಗಣದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಬುಧವಾರ (ಏ.11) ಹಮ್ಮಿಕೊಂಡಿದ್ದ ಮತದಾರರ ಖಾಂತ್ರಿ ಯಂತ್ರ ಪ್ರಾತ್ಯಕ್ಷಿಕೆ (ಇವಿಎಂ-ವಿವಿ ಪ್ಯಾಟ್ ಪ್ರಾತ್ಯಕ್ಷಿಕೆ) ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಚುನಾವಣೆ ಪ್ರಜಾಪ್ರಭುತ್ವದ ಹಬ್ಬ:  - ಸಿಇಒ ರಾಮಚಂದ್ರನ್- Tarun krantiನಿಷ್ಪಕ್ಷಪಾತ ಹಾಗೂ ನಿರ್ಭೀತ ಚುನಾವಣೆ ನಡೆಸಲು ಚುನಾವಣಾ ಆಯೋಗ ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡಿದೆ. ಶೇ.100 ರಷ್ಟು ಮತದಾನ ನಡೆಯಬೇಕೆಂಬುದು ಚುನಾವಣಾ ಆಯೋಗದ ಗುರಿಯಾಗಿದೆ ಎಂದು ತಿಳಿಸಿದರು.
ಪ್ರಸಕ್ತ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಇವಿಎಂ ಹಾಗೂ ವಿವಿ ಪ್ಯಾಟ್ ಮತಯಂತ್ರವನ್ನು ಇದೇ ಮೊದಲ ಬಾರಿಗೆ ಪರಿಚಯಿಸಲಾಗುತ್ತಿದೆ. ಪ್ರತಿಯೊಬ್ಬ ಮತದಾರನು ತಾನು ಚಲಾಯಿಸಿದ ಮತವನ್ನು ವಿವಿಪ್ಯಾಟ್ ಪರದೆ ಮೇಲೆ ನೋಡುವ ಮೂಲಕ ಸ್ವಯಂ ತನ್ನ ಮತವನ್ನು ಖಾತ್ರಿಪಡಿಸಿಕೊಳ್ಳಬಹುದು ಎಂದು ಹೇಳಿದರು.
ಇವಿಎಂ ಮತಯಂತ್ರದ ಬಗ್ಗೆ ಹಬ್ಬಿರುವ ವದಂತಿಗಳು ಸುಳ್ಳಾಗಿದ್ದು, ಯಾರು ವದಂತಿಗಳಿಗೆ ಕಿವಿಗೊಡಬಾರದು. ಸಭೆ, ಸಮಾರಂಭ, ಕಾಲೇಜು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಇವಿಎಂ ಮತಯಂತ್ರದ ಬಳಕೆಯ ಬಗ್ಗೆ ಪ್ರಾತ್ಯಕ್ಷಿಕೆಯನ್ನು ಏರ್ಪಡಿಸಿ, ಮತದಾರರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
ಮತದಾನ ಪ್ರಕ್ರಿಯೆಯಲ್ಲಿ ಯುವಕರು ತಪ್ಪದೇ ಮತದಾನ ಮಾಡಬೇಕು. ಜೊತೆಗೆ ತಮ್ಮ ಪಾಲಕರು, ನೆರೆಹೊರೆಯವರು, ಸಂಬಂಧಿಗಳಲ್ಲಿಯೂ ಮತದಾನದ ಬಗ್ಗೆ ಜಾಗೃತಿ ಮೂಡಿಸಿ, ಮತದಾನ ಮಾಡುವಂತೆ ತಿಳಿಸಬೇಕೆಂದು ಹೇಳಿದರು.

ಇವಿಎಂ-ವಿವಿ ಪ್ಯಾಟ್ ಪ್ರಾತ್ಯಕ್ಷಿಕೆ:
ಸಿಇಒ ರಾಮಚಂದ್ರನ್ ಆರ್. ಹಾಗೂ ಮಹಾನಗರ ಪಾಲಿಕೆಯ ಆಯುಕ್ತರಾದ ಕೃಷ್ಟಗೌಡ ತಾಯಣ್ಣವರ ಅವರು ವಿದ್ಯಾರ್ಥಿಗಳಿಗೆ ಇವಿಎಂ ಹಾಗೂ ವಿವಿ ಪ್ಯಾಟ್ ಬಳಕೆಯ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು. ಮತಗಟ್ಟೆಗಳಲ್ಲಿ ಯಾವುದೇ ರೀತಿಯ ಸಮಸ್ಯೆ ಅಥವಾ ಗೊಂದಲಗಳಾದರೆ ಕೈಗೊಳ್ಳಬೇಕಾದ ಕ್ರಮ ಹಾಗೂ ವಹಿಸಬೇಕಾದ ಎಚ್ಚರಿಕೆಗಳ ಬಗ್ಗೆ ಮಾಹಿತಿ ನೀಡಿದರು. ಕಾಲೇಜಿನ ಕೆಲವು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಪ್ರಾಯೋಗಿಕವಾಗಿ ಮತ ಚಲಾಯಿಸಿದರು.
ಮಾಸ್ಟರ್ ಟ್ರೈನರ್ ಎಸ್.ಎನ್. ಹೊಸಮನಿ, ಮಹೇಶ ದರ್ಭಾರೆ, ಕಾಲೇಜಿನ ಪ್ರಾಚಾರ್ಯರಾದ ಎ.ಎಸ್. ದೇಶಪಾಂಡೆ, ಉಪನ್ಯಾಸಕರು, ಸಿಬ್ಬಂದಿ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.Elections Democracy Festival: – CEO Ramachandran

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.