ಉತ್ತಮ ಸಮಾಜಕ್ಕಾಗಿ

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಕಾರ್ಮಿಕರಿಗೆ ವೇತನ ಸಹಿತ ರಜೆ

(news belgaum)

0

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಕಾರ್ಮಿಕರಿಗೆ ವೇತನ ಸಹಿತ ರಜೆ
ಬೆಳಗಾವಿ:news belgaum ಕಾರ್ಮಿಕ ಆಯುಕ್ತರು ಹೊರಡಿಸಿರುವ ಸುತ್ತೋಲೆಯನ್ವಯ ದಿನಾಂಕ ಆಗಸ್ಟ 31 ರಂದು ಮತದಾನ ನಡೆಯಲಿರುವ ನಗರ ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನೋಂದಾಯಿತ ಅರ್ಹ ಮತದಾರರಾಗಿರುವ ಎಲ್ಲಾ ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಎಲ್ಲಾ ಅಂಗಡಿ, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳು (ರಾಷ್ಟ್ರೀಯ ಹಾಗೂ ಹಬ್ಬದ ರಜಾ ದಿನಗಳು) ಕಾಯ್ದೆಯ ಕಲಂ 3-ಎ ಹಾಗೂ 1951ರ ಪ್ರಜಾ ಪ್ರತಿನಿಧಿ ಕಾಯ್ದೆಯ ಕಲಂ 135(ಬಿ) ರಡಿಯಲ್ಲಿ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಸಂಸ್ಥೆಗಳು/ನಿಯೋಜಕರು ಅನುವು ಮಾಡಿಕೊಡಬೇಕಾಗಿರುತ್ತದೆ.
ಚುನಾವಣೆ ನಡೆಯುವ ಸ್ಥಳಗಳಲ್ಲಿ ಮತ ಚಲಾಯಿಸುವ ಅರ್ಹ ಕಾರ್ಮಿಕರು ಮತದಾನ ಚಲಾಯಿಸಲು ಅನುಕೂಲವಾಗುವಂತೆ ಎಲ್ಲಾ ಕಾರ್ಖಾನೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳ ಮಾಲೀಕರು ವೇತನ ಸಹಿತ ರಜೆ ನೀಡಬೇಕೆಂದು ಬೆಳಗಾವಿ ಪ್ರಾದೇಶಿಕ ಉಪ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೆ.1 ರಂದು ಜನಸ್ಪಂದನ ಕಾರ್ಯಕ್ರಮ
ಬೆಳಗಾವಿ:  news belgaumಖಾನಾಪೂರ ತಾಲೂಕಿನ ಜಾಂಬೋಟಿ ಹೋಬಳಿಯ ಉಚವಡೆ ಗ್ರಾಮದ ಮರಾಠಿ ಪ್ರಾಥಮಿಕ ಶಾಲೆಯಲ್ಲಿ ಸೆಪ್ಟೆಂಬರ್ 1 ರಂದು ಖಾನಾಪೂರ ತಾಲೂಕಿನ ಜನಸ್ಪಂದನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಖಾನಾಪೂರ ಶಾಸಕರ ಡಾ. ಅಂಜಲಿ ನಿಂಬಾಳಕರ ಅವರು ವಹಿಸುವರು ಹಾಗೂ ತಾಲೂಕಾ ಮಟ್ಟದ ಎಲ್ಲ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸದರಿ ಕಾರ್ಯಕ್ರಮದಲ್ಲಿ ತಾಲೂಕಿನ ಸಮಸ್ತ ಸಾರ್ವಜನಿಕರು ತಮ್ಮ ಕುಂದು ಕೊರತೆಗಳ ಬಗ್ಗೆ ಅರ್ಜಿ ಸಲ್ಲಿಸಿದಲ್ಲಿ ಆಯಾ ಕಚೇರಿಯ ಮುಖ್ಯಸ್ಥರು ಅರ್ಜಿಯನ್ನು ಇತ್ಯರ್ಥಪಡಿಸಲಿದ್ದಾರೆ ಎಂದ ಖಾನಾಪೂರ ತಹಶೀಲ್ದಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೆ.8 ರಂದು ಲೋಕ ಅದಾಲತ್
ಬೆಳಗಾವಿ: news belgaum ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದ ಮೇರೆಗೆ ವೈವಾಹಿಕ, ಕೌಟುಂಬಿಕ ಮತ್ತು ಪಾಲು ವಿಭಾಗಕ್ಕೆ, ಬ್ಯಾಂಕುಗಳಿಗೆ ಸಂಬಂಧಪಟ್ಟ ಪ್ರಕರಣಗಳು ಹಾಗೂ ಚೆಕ್ ಬೌನ್ಸ, ಭಾರತ ದಂಡ ಸಂಹಿತೆಯ ರಾಜಿಯಾಗಬಲ್ಲ ಪ್ರಕರಣಗಳು, ಹಣಕಾಸಿನ ದಾವೆಗಳು, ಸಿವಿಲ್ ವ್ಯಾಜ್ಯಗಳು, ಮೋಟಾರ ವಾಹನ ಅಪಘಾತ ಪರಿಹಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಕಂದಾಯ ಪ್ರಕರಣಗಳು ಮತ್ತು ಇತರ ಎಲ್ಲಾ ರೀತಿಯ ರಾಜಿಯಾಗಬಹುದಾದಂತಹ ಪ್ರಕರಣಗಳ ಕುರಿತು ಹಾಗೂ ನ್ಯಾಯಾಲಯಗಳಲ್ಲಿ ತನಿಕೆಗೆ ಬಾಕಿ ಇರುವ ಪ್ರಕರಣಗಳ ಕುರಿತು ಬೆಳಗಾವಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಶರಾದ ಆರ್. ಜೆ. ಸತೀಶ ಸಿಂಗ್ ಇವರ ಮಾರ್ಗದರ್ಶನದಲ್ಲಿ ಬೆಳಗಾವಿಯ ಹೊಸ ನ್ಯಾಯಾಲಯಗಳ ಸಂಕೀರ್ಣದ ಆವರಣದಲ್ಲಿನ ಎ.ಡಿ.ಆರ್. ಕಟ್ಟಡದಲ್ಲಿ ಹಾಗೂ ಎಲ್ಲಾ ತಾಲೂಕುಗಳ ನ್ಯಾಯಾಲಯಗಳಲ್ಲಿ ಸಪ್ಟೆಂಬರ್ 8 ರಂದು ಬೆಳಿಗ್ಗೆ 11 ಗಂಟೆಯಿಂದ ಜಿಲ್ಲೆಯ ಎಲ್ಲಾ ನ್ಯಾಯಾಧೀಶರ ಹಾಗೂ ವಕೀಲರ ಸಹಯೋಗದಲ್ಲಿ ಲೋಕ ಅದಾಲತನ್ನು ಹಮ್ಮಿಕೊಳ್ಳಲಾಗಿದೆ.
ಪ್ರಕರಣಗಳನ್ನು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ತೆಗೆದುಕೊಂಡು ರಾಜಿ ಸಂಧಾನದ ಮುಖಾಂತರ ಇತ್ಯರ್ಥಪಡಿಸಲಾಗುವುದು. ಬ್ಯಾಂಕುಗಳು, ಕಕ್ಷಿದಾರರು ಹಾಗೂ ಜನ ಸಾಮಾನ್ಯರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೆಳಗಾವಿ / ತಾಲೂಕಾ ಕಾನೂನು ಸೇವಾ ಸಮಿತಿಗಳನ್ನು ಕೂಡಲೇ ಸಂಪರ್ಕಿಸಲು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೆ.1 ರಂದು ಪೋಸ್ಟ ಪೇಮೆಂಟ್ಸ್ ಬ್ಯಾಂಕ್ ಉದ್ಘಾಟನಾ ಸಮಾರಂಭ
ಬೆಳಗಾವಿ:(news belgaum) ಬೆಳಗಾವಿ ವಿಭಾಗದ ಪ್ರಧಾನ ಅಂಚೆ ಕಚೇರಿ ವತಿಯಿಂದ “ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್” ಟಿಳಕವಾಡಿ ಶಾಖೆಯ ಉದ್ಘಾಟನಾ ಸಮಾರಂಭವನ್ನು ಸಪ್ಟೆಂಬರ್ 1 ರಂದು ಮಧ್ಯಾಹ್ನ 2 ಗಂಟೆಗೆ ಅನಗೋಳದ ಭಾಗ್ಯ ನಗರ 1ನೇ ಕ್ರಾಸ್‍ದಲ್ಲಿರುವ ರಾಮನಾಥ ಮಂಗಲ ಕಾರ್ಯಾಲಯದಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಕ್ರಮವನ್ನು ಸಂಸದರಾದ ಸುರೇಶ ಅಂಗಡಿ ಅವರು ಉದ್ಘಾಟಿಸುವರು. ಬೆಳಗಾವಿ ಮಹಾನಗರ ಪಾಲಿಕೆ ಮಹಾಪೌರರಾದ ಬಸಪ್ಪ ಎಸ್. ಚಿಕ್ಕಲದಿನ್ನಿ, ಶಾಸಕರಾದ ಅಭಯ ಪಾಟೀಲ, ಅನಿಲ ಎಸ್. ಬೆನಕೆ, ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ ಇವರುಗಳು ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸುವರು.

ಪಿ.ಎಚ್.ಡಿ ಸಂಶೋಧನೆ: ಡಿ.ಎಸ್.ಟಿ ಶಿಷ್ಯವೇತಕ್ಕೆ ಅರ್ಜಿ ಆಹ್ವಾನ
ಬೆಳಗಾವಿ:  (news belgaum)ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು (ಡಿ.ಎಸ್.ಟಿ) 2018-19ನೇ ಸಾಲಿನಲ್ಲಿ ‘ವಿಜ್ಞಾನ ಮತ್ತು ಇಂಜಿನಿಯರಿಂಗನಲ್ಲಿ ಪಿ.ಎಚ್.ಡಿ ಸಂಶೋಧನೆಗೆ ಡಿ.ಎಸ್.ಟಿ. ಶಿಷ್ಯವೇತನ’ ಎಂಬ ಕಾರ್ಯಕ್ರಮವನ್ನು ಇಲಾಖೆಯ ಸ್ವಾಯತ್ತ ಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ಮುಖಾಂತರ ಕೈಗೆತ್ತಿಕೊಂಡಿದೆ.
ಈ ಯೋಜನೆಯಡಿ ಶಿಷ್ಯವೇತನ ಪಡೆಯಲು ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಕನಾಟಕದಲ್ಲಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯ, ಸಂಸ್ಥೆ, ಕಾಲೇಜುಗಳಲ್ಲಿ ಪಿ.ಎಚ್.ಡಿ ಪದವಿಗೆ ಈಗಾಗಲೇ ನೋಂದಾಯಿತರಾಗಿರುವ ಅರ್ಹ ಸಂಶೋಧನಾ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಸೆಪ್ಟೆಂಬರ್ 24 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್: http://ksteps.karnataka.gov.inಗೆ ಭೇಟಿ ನೀಡಬಹುದಾಗಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವಿಶೇಷ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

 Click this button or press Ctrl+G to toggle between Kannada and English

Your email address will not be published.