ಉತ್ತಮ ಸಮಾಜಕ್ಕಾಗಿ

ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿಯ ಪರ್ವ ಆರಂಭ

Epoch of development in rural areas

0

ಬೆಳಗಾವಿ : (news belagavi)  ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿಯ ಪರ್ವ ಆರಂಭವಾಗಿದೆ. ಚುನಾವಣೆಯ ಸಂದರ್ಭದಲ್ಲಿ ಕ್ಷೇತ್ರದ ಜನತೆಗೆ ನೀಡಿದ ಬರವಸೆಗಳ್ನನು ಈಡೇರಿಸಲು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವೀರತ ಪ್ರಯತ್ನ ನಡೆಸಿದ್ದು, ಗ್ರಾಮೀಣ ಕ್ಷೇತ್ರದ ರಸ್ತೆಗಳ ಸುಧಾರಣೆಗೆ ನೀರಾವರಿ ಇಲಾಖೆಯಿಂದ ಎಸ್‍ಇಪಿ, ಟಿಎಸ್‍ಪಿ ಯೋಜನೆಯಡಿಯಲ್ಲಿ 5 ಕೋಟಿ ರೂ ಅನುದಾನವನ್ನು ಬಿಡುಗಡೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಗ್ರಾಮಗಳ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವರ್ಗದ ಜನ ವಾಸಿಸುವ ಬಡಾವಣೆಗಳ ರಸ್ತೆಗಳ ಸುಧಾರಣೆಗಾಗಿ ನೀರಾವರಿ ಇಲಾಖೆ ಎಸ್‍ಇಪಿ, ಟಿಎಸ್‍ಪಿ ಯೋಜನೆಯಡಿಯಲ್ಲಿ ಅನುದಾನ ನೀಡುತ್ತಿದೆ. ಬಿಡುಗಡೆಯಾಗಿರುವ 5 ಕೋಟಿ ರೂ. ಅನುದಾನದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕರಡಿಗುದ್ದಿ ಗ್ರಾಮಕ್ಕೆ 10 ಲಕ್ಷ, ಖನಗಾಂವ ಕೆ.ಎಚ್. 5 ಲಕ್ಷ, ಕರಿಕಟ್ಟಿ 1 ಕೋಟಿ, ಭೀಮಘಡ 40 ಲಕ್ಷ, ಸೋಮನಟ್ಟಿ 10 ಲಕ್ಷ, ಮಾರಿಹಾಳ 10 ಲಕ್ಷ, ಚಂದೂರ 50 ಲಕ್ಷ, ಯದ್ದಲಬಾವಿಹಟ್ಟಿ 10ಲಕ್ಷ, ಚಂದನಹೊಸೂರ 15 ಲಕ್ಷ ಹೀಗೆ ಒಟ್ಟು 2.50 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಲಕ್ಷ್ಮೀ ಹೆಬ್ಬಾಳಕರ ತಿಳಿಸಿದ್ದಾರೆ.

ಉಳಿದ 2.50 ಕೋಟಿ ಅನುದಾನದಲ್ಲಿ ಸಾವಗಾಂವ 25 ಲಕ್ಷ, ಹಿಂಡಲಗಾ 25 ಲಕ್ಷ, ಹಲಗಾ 50 ಲಕ್ಷ, ಬಸ್ತವಾಡ 40 ಲಕ್ಷ, ಖನಗಾಂವ 5 ಲಕ್ಷ, ಬಾಳೆಕುಂದ್ರಿ 25 ಲಕ್ಷ, ಕಂಗ್ರಾಳಿ ಬಿ.ಕೆ. 25 ಲಕ್ಷ, ಕಂಗ್ರಾಳಿ ಕೆ.ಎಚ್. 30 ಲಕ್ಷ, ಹಿರೇಬಾಗೇವಾಡಿ 10 ಲಕ್ಷ ಹಾಗೂ ತಾರಿಹಾಳ ಗ್ರಾಮಕ್ಕೆ 20 ಲಕ್ಷ ಬಿಡುಗಡೆಯಾಗಿದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

ಬೆಳಗಾವಿ ಗ್ರಾಮೀಣ ಕ್ಷೇತ್ರದ ರಸ್ತೆಗಳ ಸುಧಾರಣೆಗೆ ಲೋಕೊಪಯೋಗಿ ಇಲಾಖೆಯಿಂದ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ಯ ಇಲಾಖೆಯಿಂದ ವಿಶೇಷ ಅನುದಾನ ನೀಡುವಂತೆ ಸಚಿವರುಗಳಿಗೆ ಮನವಿ ಅರ್ಪಿಸಲಾಗಿದೆ. ಮಳೆಗಾಲ ಮುಗಿಯುವ ಒಳಗಾಗಿ ರಸ್ತೆಗಳ ಸುಧಾರಣೆಗೆ ವಿಶೇಷ ಅನುದಾನ ಬಿಡುಗಡೆಯಾಗಲ್ಲಿದ್ದು, ಮಳೆಗಾಲ ಮುಗಿದ ನಂತರ ರಸ್ತೆಗಳ ಸುಧಾರಣಾ ಕಾಮಗಾರಿಗಳು ನಡೆಯಲ್ಲಿವೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಬರವಸೆ ನೀಡಿದ್ದಾರೆ.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.