ಉತ್ತಮ ಸಮಾಜಕ್ಕಾಗಿ

ಜಿಲ್ಲಾದ್ಯಂತ 95 ಪಿಂಕ್ ಮತಗಟ್ಟೆಗಳ ಸ್ಥಾಪನೆ

Establishing 95 Pink Polls across the district

0

ಬೆಳಗಾವಿ: (news belgaum)ಮಹಿಳಾ ಮತದಾರರ ಸಂಖ್ಯೆ ಹೆಚ್ಚಾಗಿರುವ ಮತಗಟ್ಟೆಗಳಲ್ಲಿ ಸಂಪೂರ್ಣವಾಗಿ ಮಹಿಳಾ ಸಿಬ್ಬಂದಿಗಳನ್ನೇ ನೇಮಿಸುವ ಉದ್ದೇಶದಿಂದ ಬೆಳಗಾವಿ ಜಿಲ್ಲೆಯಾದ್ಯಂತ 95 ಪಿಂಕ್ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಈ ಮತಗಟ್ಟೆಗಳಲ್ಲಿ ಮಹಿಳಾ ಸಿಬ್ಬಂದಿ ಮಾತ್ರ ಕಾರ್ಯ ನಿರ್ವಹಿಸಲಿದ್ದಾರೆ.
ಜಿಲ್ಲಾದ್ಯಂತ 95 ಪಿಂಕ್ ಮತಗಟ್ಟೆಗಳ ಸ್ಥಾಪನೆ- Tarun krantiಜಿಲ್ಲೆಯ ನಿಪ್ಪಾಣಿಯಲ್ಲಿ 06, ಚಿಕ್ಕೋಡಿ-ಸದಲಗಾದಲ್ಲಿ 06, ಅಥಣಿಯಲ್ಲಿ 06, ಕಾಗವಾಡದಲ್ಲಿ 06, ಕುಡಚಿಯಲ್ಲಿ 06, ರಾಯಬಾಗದಲ್ಲಿ 06, ಹುಕ್ಕೇರಿಯಲ್ಲಿ 06, ಅರಭಾವಿಯಲ್ಲಿ 06, ಗೋಕಾಕದಲ್ಲಿ 06, ಯಮಕನಮರಡಿಯಲ್ಲಿ 01, ಬೆಳಗಾವಿ ಉತ್ತರದಲ್ಲಿ 05, ಬೆಳಗಾವಿ ದಕ್ಷಿಣ 05, ಬೆಳಗಾವಿ ಗ್ರಾಮೀಣ 01, ಖಾನಾಪೂರದಲ್ಲಿ 06, ಕಿತ್ತೂರ 05, ಬೈಲಹೊಂಗಲದಲ್ಲಿ 06, ಸವದತ್ತಿಯಲ್ಲಿ 06 ಮತ್ತು ರಾಮದುರ್ಗದಲ್ಲಿ 06 ಹೀಗೆ ಒಟ್ಟು 95 ಪಿಂಕ್ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.
ಪಿಂಕ್ ಮತಗಟ್ಟೆ ಎಂದರೆ, ಮಹಿಳಾ ಮತದಾರರ ಸಂಖ್ಯೆ ಹೆಚ್ಚಾಗಿರುವ ಮತಗಟ್ಟೆಗಳಲ್ಲಿ ಸಂಪೂರ್ಣವಾಗಿ ಮಹಿಳಾ ಸಿಬ್ಬಂದಿಗಳನ್ನೇ ನೇಮಿಸಲಾಗಿರುತ್ತದೆ. “ಎಲ್ಲಿ ಮಹಿಳೆಯರು ಗೌರವಿಸಲ್ಪಡುತ್ತಾರೋ ಅಲ್ಲಿ ದೇವತೆಗಳು ನೆಲೆಸುತ್ತಾರೆ” ಎಂಬಂತೆ ಪ್ರತಿಯೊಬ್ಬ ಮಹಿಳೆಯರು ಮತದಾನದ ಪ್ರಕ್ರಿಯೆಯಲ್ಲಿ ಭಾಗವಹಿಸಿ, ತಮ್ಮ ಹಕ್ಕನ್ನು ಚಲಾಯಿಸಬೇಕು.
ಮಹಿಳಾ ಮತದಾರರನ್ನು ಮತಗಟ್ಟೆಗಳಿಗೆ ಬರುವಂತೆ ಪ್ರೋತ್ಸಾಹಿಸಲು ಪಿಂಕ್ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಬೆಳಗಾವಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮಚಂದ್ರನ್ ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.