ಉತ್ತಮ ಸಮಾಜಕ್ಕಾಗಿ

ಮಕ್ಕಳ ಭವಿಷ್ಯದ ದೃಷ್ಟಿಯಿಂದ ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ಕಡ್ಡಾಯವಾಗಿ ಲಸಿಕೆ

Every child under the age of five is a mandatory vaccine for children's future

0

ಮಗುವಿಗೂ ಲಸಿಕೆ ಕಡ್ಡಾಯ: ಜಿಲ್ಲಾಧಿಕಾರಿ ಸೂಚನೆ
ಬೆಳಗಾವಿ:(tarun kranti) ಇದೇ ಜನವರಿ 28ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, 29, 30 ಹಾಗೂ 31ರಂದು ಮನೆ ಮನೆಗೆ ತೆರಳಿ ಲಸಿಕೆ ಹಾಕಲಾಗುವುದು. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ಕಡ್ಡಾಯವಾಗಿ ಲಸಿಕೆ ಹಾಕಿಸುವಂತೆ ಜಿಲ್ಲಾಧಿಕಾರಿ ಎಸ್.ಜಿಯಾವುಲ್ಲಾ ಅವರು ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ(ಜ.22) ನಡೆದ ಜಿಲ್ಲಾಮಟ್ಟದ ಲಸಿಕಾ ಕಾರ್ಯಪಡೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದೇಶದಲ್ಲಿ 2011ರ ನಂತರ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ 2003ನೇ ಸಾಲಿನ ನಂತರ ಯಾವುದೇ ಪೋಲಿಯೋ ಪ್ರಕರಣಗಳು ಪತ್ತೆ ಆಗಿರುವುದಿಲ್ಲ. ಆದಾಗ್ಯೂ ಐದು ವರ್ಷದೊಳಗಿನ ಮಕ್ಕಳಿಗೆ ಹಿಂದೆ ಲಸಿಕೆ ಹಾಕಿಸಿದ್ದರೂ ಜನವರಿ 28ರಂದು ಮತ್ತೇ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದು ಹೇಳಿದರು.
ಕೊಳಚೆ ಪ್ರದೇಶಗಳಲ್ಲಿ ವಾಸಿಸುವ ಕುಟುಂಬಗಳು, ಕಬ್ಬು ಕಟಾವಿಗೆ ಬರುವ ಗ್ಯಾಂಗ್‍ಗಳ ಕುಟುಂಬದ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಕೆಲವು ಕುಟುಂಬಗಳು ಅಲೆಮಾರಿ ಆಗಿರುವುದರಿಂದ ಯಾವುದೇ ಕಾರಣಕ್ಕೂ ಅಂತಹ ಮಕ್ಕಳು ಪೋಲಿಯೋ ಲಸಿಕೆಯಿಂದ ವಂಚಿತಗೊಳ್ಳದಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಹಂತದಲ್ಲಿ ನಿರ್ಲಕ್ಷ್ಯ ತೋರಿಸಿದರೆ ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿಗಳನ್ನು ಹೊಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.

ಧಾರ್ಮಿಕ ಕೇಂದ್ರಗಳಲ್ಲಿ ಪ್ರಕಟಣೆ:
ಪೋಲಿಯೋ ಲಸಿಕೆ ಕುರಿತು ಜಿಲ್ಲೆಯ ಮಂದಿರ, ಮಸೀದಿ, ಚರ್ಚ, ಗುರುದ್ವಾರ ಸೇರಿದಂತೆ ಎಲ್ಲ ಧಾರ್ಮಿಕ ಕೇಂದ್ರಗಳು ಮತ್ತು ಧಾರ್ಮಿಕ ಗುರುಗಳÀ ಮೂಲಕ ಸಾರ್ವಜನಿಕರಿಗೆ ತಿಳಿವಳಿಕೆ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಜಿಯಾವುಲ್ಲಾ ಸೂಚನೆ ನೀಡಿದರು.
ಪತ್ರಿಕಾ ಪ್ರಕಟಣೆ, ಆಟೋ ಪ್ರಚಾರ, ಬೀದಿ ನಾಟಕ, ಕರಪತ್ರಗಳ ಜತೆಗೆ ಜನರು ಹೆಚ್ಚಿನ ಪ್ರಮಾಣದಲ್ಲಿ ಸೇರುವಂತಹ ಜಾತ್ರೆ-ಉತ್ಸವಗಳು, ಸಾಮೂಹಿಕ ಪ್ರಾರ್ಥನೆ-ಉರುಸ್, ಮೇಳಾಗಳಲ್ಲೂ ಪ್ರಚಾರ ಕೈಗೊಳ್ಳುವಂತೆ ತಿಳಿಸಿದರು.

ತಪ್ಪು ಕಲ್ಪನೆ ಬೇಡ:
ಪೋಲಿಯೋ ಲಸಿಕೆ ಹಾಕಿಸುವುದರಿಂದ ಯಾವುದೇ ತೊಂದರೆ ಆಗುವುದಿಲ್ಲ. ಈ ಬಗ್ಗೆ ತಪ್ಪು ಕಲ್ಪನೆ ಬೇಡ; ಈ ಹಿಂದೆ ಎಷ್ಟೇ ಬಾರಿ ಪೋಲಿಯೋ ಲಸಿಕೆ ಹಾಕಿಸಿದ್ದರೂ ಕೂಡ ಐದು ವರ್ಷದೊಳಗಿನ ಮಕ್ಕಳಿಗೆ ಈ ಬಾರಿಯೂ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದು ಜಿಲ್ಲಾಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಮೂಲಕ ಸುತ್ತೋಲೆ ಹೊರಡಿಸಿ ಪ್ರತಿ ಮಕ್ಕಳ ಡೈರಿಯಲ್ಲೂ ಪೋಲಿಯೋ ಲಸಿಕೆ ದಿನಾಂಕದ ಬಗ್ಗೆ ನಮೂದಿಸಬೇಕು. ಮಹಾನಗರ ಪಾಲಿಕೆ ಹಾಗೂ ಇತರೆ ನಗರ ಸ್ಥಳೀಯ ಸಂಸ್ಥೆಗಳು ಕಸದ ಗಾಡಿ ಮೂಲಕ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.
ರೈಲು ನಿಲ್ದಾಣದಲ್ಲಿರುವ ಧ್ವನಿವರ್ಧಕಗಳ ಮೂಲಕ ಜನರಿಗೆ ಮಾಹಿತಿ ನೀಡಬೇಕು ಮತ್ತು ಲಸಿಕೆ ಹಾಕುವ ದಿನಗಳಂದು ಆರೋಗ್ಯ ಇಲಾಖೆಗೆ ಎಲ್ಲ ರೀತಿಯ ಸಹಕಾರ ನೀಡಬೇಕು ಎಂದು ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಹೇಳಿದರು.
ಅದೇ ರೀತಿ ಮಿಲಿಟರಿ ಪ್ರದೇಶ, ಸೈನಿಕರ ವಸತಿ ಗೃಹಗಳಲ್ಲಿ ವಾಸವಿರುವ ಮಕ್ಕಳ ಪಟ್ಟಿ ತಯಾರಿಸಿಕೊಂಡು ಎಲ್ಲ ಮಕ್ಕಳನ್ನು ಪೋಲಿಯೋ ಲಸಿಕಾ ಕೇಂದ್ರಕ್ಕೆ ಕರೆತರಬೇಕು. ಮಿಲಿಟರಿ ಆಸ್ಪತ್ರೆಗಳಲ್ಲಿ ಲಸಿಕಾ ಕೇಂದ್ರ ಸ್ಥಾಪಿಸಬೇಕು ಎಂದು ಸೂಚಿಸಿದರು.
ಸಂಬಂಧಪಟ್ಟ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಲಸಿಕಾ ಅಭಿಯಾನದ ಬಗ್ಗೆ ನಿರಂತರ ನಿಗಾವಹಿಸುವುದರ ಜತೆಗೆ ಕೆಳಹಂತದ ಸಿಬ್ಬಂದಿಗೆ ಮೊದಲು ಸರಿಯಾಗಿ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಸಲಹೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಪ್ಪಾಸಾಹೇಬ್ ನರಟ್ಟಿ, ಆರ್‍ಸಿಓ ಡಾ.ಐ.ಪಿ.ಗಡಾದ, ವಿಶ್ವ ಆರೋಗ್ಯ ಸಂಸ್ಥೆಯ ರಾಷ್ಟ್ರೀಯ ಪೋಲಿಯೋ ಸರ್ವೇಕ್ಷಣಾಧಿಕಾರಿ ಡಾ.ಸಿದ್ದಲಿಂಗಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮುನಿರಾಜು ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.(belgaum)

Every child under the age of five is a mandatory vaccine for children’s future

80%
Awesome
  • Design

Leave A Reply

 Click this button or press Ctrl+G to toggle between Kannada and English

Your email address will not be published.