ಉತ್ತಮ ಸಮಾಜಕ್ಕಾಗಿ

ಜನನದಿಂದ ಮರಣದವರೆಗೆ ಕಾನೂನುಗಳು ಅವಶ್ಯಕ. ಕಾನೂನುಗಳನ್ನು ಪಾಲನೆ ಮಾಡಬೇಕಾಗಿರುವುದು ಪ್ರತಿಯೊಬ್ಬರ ಕರ್ತವ್ಯ

Everyone's duty to protect the law

0

ಬೆಳಗಾವಿ:(news belgaum) ಮಾನವನ ಜನನದಿಂದ ಮರಣದವರೆಗೆ ಕಾನೂನುಗಳು ಅವಶ್ಯಕ. ಕಾನೂನುಗಳನ್ನು ಪಾಲನೆ ಮಾಡಬೇಕಾಗಿರುವುದು ಪ್ರತಿಯೊಬ್ಬರ ಕರ್ತವ್ಯ ಎಂದು ನ್ಯಾಯವಾದಿ ಆರ್.ಎಲ್. ಪಟ್ಟಣಶೆಟ್ಟಿ ಅವರು ಹೇಳಿದರು.
ನಗರದ ವಂಟಮುರಿ ಕಾಲನಿಯ ಸರಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಮಹಿಳಾ ಕಲ್ಯಾಣ ಸಂಸ್ಥೆಯ ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕಾನೂನು ರಥದ ಮೂಲಕ ಕಾನೂನು ಸಾಕ್ಷರತಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಅಫರಾದಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅಪರಾಧಗಳನ್ನು ತಡೆಗಟ್ಟಬೇಕಾದರೆ ನಾವೆಲ್ಲರೂ ಕಾನುನುಗಳನ್ನು ಅರಿತುಕೊಳ್ಳಬೇಕು ಎಂದರು.
ಜನರಿಗೆ ನ್ಯಾಯ ಒದಗಿಸಲು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಲವಾರು ಸೇವೆಗಳನ್ನು ನೀಡುತ್ತಿದ್ದು ಸಾರ್ವನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ನ್ಯಾಯವಾದಿ ಪಿ.ಬಿ. ಪಾಟೀಲ ಅವರು ಮಾತನಾಡಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬಡವರಿಗೆ, ದುರ್ಬಲ ವರ್ಗದವರಿಗೆ, ಅನ್ಯಾಯ, ಅತ್ಯಾಚಾರಕ್ಕೆ ಒಳಗಾದವರಿಗೆ, ಹಿರಿಯ ನಾಗರಿಕರಿಗೆ, ಮಹಿಳೆಯರಿಗೆ, ಮಕ್ಕಳಿಗೆ ಕಾನೂನು ನೆರವು ಹಾಗೂ ಸೇವೆಗಳನ್ನು ಒದಗಿಸುತ್ತಿದ್ದು ಅದರ ಸದುಪಯೋಗ ಪಡೆದುಕೊಳ್ಳಬೇಕೆಂದರು.
ವಂಟಮುರಿ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಎ.ವೈ. ಅವತಾಳೆ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಸಂಯೋಜಕರಾದ ಎಂ.ಎಂ. ಗಡಗಲಿ, ಕೆ.ಯು. ಉಪ್ಪಾರ ಹಾಗೂ ಪ್ರೌಢಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಅನ್ನಪೂರ್ಣಾ ಬುಚಡಿ ಸ್ವಾಗತಿಸಿದರು. ಸೇವಾಮಿತ್ರ ಸಮಾಜಕಾರ್ಯ ಮಹಾವಿದ್ಯಾಲಯದ ಪೂಜಾ ಧುಮಾಲೆ ನಿರೂಪಿಸಿದರು.

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.