ಉತ್ತಮ ಸಮಾಜಕ್ಕಾಗಿ

ರೋಮಾಂಚಕ ಕೆಟಿಎಂ ಬೈಕ್ ಸಾಹಸ

news belagavi

0

ರೋಮಾಂಚಕ ಕೆಟಿಎಂ ಬೈಕ್ ಸಾಹಸ- Tarun kranti 1
ಬೆಳಗಾವಿ: (news belgaum)ಗೋಕಾಕ: ಮುಂಚೂಣಿಯ ರೇಸಿಂಗ್ ಬೈಕುಗಳ ಬ್ರಾಂಡ್ ಕೆಟಿಎಂ ನಗರದಲ್ಲಿ ಬುಧವಾರ ರೋಮಾಂಚಕ ಬೈಕ್ ಸಾಹಸ ಪ್ರದರ್ಶನವನ್ನು ಆಯೋಜಿಸಿತ್ತು.ಚೆನ್ನೈಯಿಂದ ಆಗಮಿಸಿದ್ದ ವೃತ್ತಿಪರ ಸಾಹಸಿ ಬೈಕ್ ಚಾಲಕರು ಮೈನವಿರೇಳಿಸುವಂತೆ ಬೈಕ್ ಸಾಹಸ ಮತ್ತು ಟ್ರಿಕ್‍ಗಳನ್ನು ಪ್ರದರ್ಶಿಸಿದರು.
ರೋಮಾಂಚಕ ಕೆಟಿಎಂ ಬೈಕ್ ಸಾಹಸ- Tarun kranti 2ನಗರದವಾಲ್ಮೀಕಿ ವೃತ್ತದಲ್ಲಿರುವ ಸಿದ್ದಲಿಂಗೇಶ್ವರ ಬಿಸಿಎ ಕಾಲೇಜು ಆವರಣದಲ್ಲಿ ನಡೆದ ಈ ಸಾಹಸ ಪ್ರದರ್ಶನಕ್ಕೆ ನೂರಾರು ಜನರು ಸಾಕ್ಷಿಯಾದರು. ಪ್ರೇಕ್ಷಕರು ಉಸಿರು ಬಿಗಿಹಿಡಿಯುವಂತೆ ಕೆಟಿಎಂ ಡ್ಯೂಕ್ ಬೈಕ್‍ಗಳಲ್ಲಿ ಚಾಲಕರು ಸಾಹಸಗಳನ್ನು ಸಾದರಪಡಿಸಿದರು.
ಕೆಟಿಎಂ ಬೈಕ್ ಸಾಹಸ ನೋಡಲು ಸಾರ್ವಜನಿಕರಿಗೆ ಉಚಿತ ಪ್ರವೇಶವಿತ್ತು. ಪ್ರದರ್ಶನದಲ್ಲಿ ಬಳಸಿದ ಕೆಟಿಎಂ ಬೈಕ್‍ಗಳು ಬ್ಯಾಳಿಕಾಟಾ ರಸ್ತೆಯಲ್ಲಿರುವ ಕೆಟಿಎಂ ಮಳಿಗೆಯಲ್ಲಿ ವೀಕ್ಷಣೆಗೆ ಲಭ್ಯವಿದೆ.
“ಕೆಟಿಎಂ ಬ್ರಾಂಡ್ ಅಧಿಕ ಸಾಮಥ್ರ್ಯದ ರೇಸಿಂಗ್ ಬೈಕ್‍ಗಳಿಗೆ ಹೆಸರಾಗಿದೆ. ಕೆಟಿಎಂ ಬೈಕ್‍ಗಳು ಚಾಲಕರಿಗೆ ಯಾವ ರೀತಿಯ ರೋಮಾಂಚಕ ಅನುಭವ ನೀಡಬಹುದು ಎನ್ನುವುದನ್ನು ಇಂಥ ಪ್ರದರ್ಶನದ ಮೂಲಕ ಸಾಬೀತುಪಡಿಸಲಾಗುತ್ತಿದೆ. ದೇಶದ ಪ್ರಮುಖ ನಗರಗಳಲ್ಲಿ ವೃತ್ತಿಪರ ಸಾಹಸಿ ಸವಾರರು ಈ ಪ್ರದರ್ಶನ ನೀಡುತ್ತಿದ್ದಾರೆ” ಎಂದು ಬಜಾಜ್ ಆಟೋ ಲಿಮಿಟೆಡ್‍ನ ಪ್ರೊಬೈಕಿಂಗ್ ವಿಭಾಗದ ಅಧ್ಯಕ್ಷರಾದ ಅಮಿತ್ ನಂದಿ ತಿಳಿಸಿದರು.
ಇದುವರೆಗೆ ಮಂಗಳೂರು, ಉಡುಪಿ, ವಿಜಯಪುರ, ಕೋಲಾರ, ಚೆನ್ನೈ, ಇಂದೋರ್, ಕಂಚಿಪುರ, ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಕೆಟಿಎಂ ಸಾಹಸ ಪ್ರದರ್ಶನವನ್ನು ಆಯೋಜಿಸಲಾಗಿತ್ತು.

Leave A Reply

 Click this button or press Ctrl+G to toggle between Kannada and English

Your email address will not be published.