ಉತ್ತಮ ಸಮಾಜಕ್ಕಾಗಿ

ರೈತರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸೋಮವಾರ ಡಿಸಿ ಕಛೇರಿ ಎದುರು ರೈತರ ಪ್ರತಿಭಟನೆ

Farmers protest against DC office on Monday demanding farmers' demand

0

ಖಾನಾಪುರ: (news belagavi)  ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬರುವ ೯ನೇ ಜುಲೈ ಸೋಮವಾರದಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ಹಾಗೂ ರೈತರಿಂದ ಬೆಳಗಾವಿಯ ಡಿಸಿ ಕಛೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಶನಿವಾರದಂದು ಬೀಡಿ ಗ್ರಾಮದ ಪ್ರವಾಸಿ ಮಂದಿರದಲ್ಲಿ ರೈತಮುಖಂಡ ಅಶೋಕ ಯಮಕನಮರಡಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಕಳೆದ ಮೂರ್ನಾಲ್ಕು ವರ್ಷಗಳಿಂದ ರಾಜ್ಯದ ರೈತರು ಭೀಕರ ಬರಗಾಲದಿಂದ ಕಂಗೆಟ್ಟಿದ್ದು, ಸುಮಾರು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದ್ದರಿಂದ ಸಿಎಂ ಕುಮಾರಸ್ವಾಮಿ ಪ್ರಣಾಳಿಕೆಯಲ್ಲಿ ಹೇಳಿರುವ ಪ್ರಕಾರ ರೈತರ ಸಂಪೂರ್ಣ ಸಾಲವನ್ನು ಮನ್ನಾ ಮಾಡಬೇಕು ಹಾಗೂ ಸಕ್ಕರೆ ಕಾರ್ಖಾನೆಗಳು ಬಾಕಿ ಉಳಿಸಿಕೊಂಡಿರುವ ರೈತರ ಕಬ್ಬಿನ ಬಾಕಿ ಬಿಲ್ಲನ್ನು ನೀಡಬೇಕೆಂದು ಆಗ್ರಹಿಸಿ ಬರುವ ಜುಲೈ ೯ನೇ ಸೋಮವಾರದಂದು ಬೆಳಗಾವಿಯ ಡಿಸಿ ಕಛೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸಬೇಕೆಂದು ವಿನಂತಿಸಿಕೊಂಡಿದ್ದಾರೆ.

ಈ ಸಂಧರ್ಭದಲ್ಲಿ ರೈತಮುಖಂಡರಾದ ಅಶೋಕ ಯಮನಕನಮರಡಿ, ರಾಘವೇಂದ್ರ ನಾಯಿಕ, ಗುರುಲಿಂಗಯ್ಯಾ ಪೂಜಾರ ಇತರರು ಹಾಜರಿದ್ದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.