ಉತ್ತಮ ಸಮಾಜಕ್ಕಾಗಿ

ರೈತರಿಗೆ ಫಸಲ್ ವಿಮಾ ಯೋಜನೆಯ ಸೌಲಭ್ಯ ತಲುಪಿಸಿ: ಜಿಲ್ಲಾಧಿಕಾರಿ

Farmers provide facility for Fasal Insurance Scheme: Deputy Commissioner

0

ಬೆಳಗಾವಿ:(news belgaum) ಜಿಲ್ಲೆಯಲ್ಲಿ 2018ನೇ ಸಾಲಿನಲ್ಲಿ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ಅನುಷ್ಟಾನಗೊಳಿಸಲಾಗುತ್ತಿದ್ದು, ಯೋಜನೆಯ ಸೌಲಭ್ಯವನ್ನು ರೈತರಿಗೆ ತಲುಪಿಸಬೇಕೆಂದು ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ ಅವರು ಸೂಚನೆ ನೀಡಿದರು.
ಇಲ್ಲಿನ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಗುರುವಾರ (ಜೂ.07) ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ಅನುಷ್ಟಾನಗೊಳಿಸುವ ಕುರಿತು ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಫಸಲ್ ವಿಮಾ ಯೋಜನೆಯ ಕುರಿತು ಕೃಷಿ ಇಲಾಖೆ, ಬ್ಯಾಂಕ್‍ಗಳು ಹಾಗೂ ಇನ್ಸೂರೆನ್ಸ್ ಕಂಪನಿಗಳು ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಜಿಲ್ಲೆಯ ಪ್ರತಿಯೊಬ್ಬ ರೈತರಿಗೂ ಯೋಜನೆಯ ಬಗ್ಗೆ ಮಾಹಿತಿ ತಲುಪುವಂತೆ ನೋಡಿಕೊಳ್ಳಬೇಕು. ಯೋಜನೆಯ ಕುರಿತು ರೈತರಲ್ಲಿ ಜಾಗೃತಿ ಮೂಡಿಸಬೇಕೆಂದು ತಿಳಿಸಿದರು.
ರೈತರಿಗೆ ವಿಮೆಯನ್ನು ತಲುಪಿಸುವ ನಿಟ್ಟಿನಲ್ಲಿ ಕೃಷಿ ಇಲಾಖೆ, ಬ್ಯಾಂಕ್‍ಗಳು ಹಾಗೂ ಇನ್ಸೂರೆನ್ಸ್ ಕಂಪನಿಗಳು ಗೊಂದಲ ಮಾಡಿಕೊಳ್ಳದೇ ಪರಸ್ಪರ ಚರ್ಚಿಸಿ, ರೈತರಿಗೆ ಸೂಕ್ತ ಸಮಯಕ್ಕೆ ಬೆಳೆ ವಿಮೆ ದೊರೆಯುವಂತೆ ಕ್ರಮಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ರೈತರು ವಿಮೆ ಪಡೆಯಲು ವಿಳಂಭವಾಗದಂತೆ ಎಚ್ಚರ ವಹಿಸಬೇಕೆಂದು ಸೂಚನೆ ನೀಡಿದರು.
ರೈತರು ಬೆಳೆ ವಿಮೆಗೆ ಅರ್ಜಿ ಸಲ್ಲಿಸಿದ ನಂತರದ ಕಾರ್ಯಗಳು ಸರಿಯಾಗಿ ಹಾಗೂ ಸೂಕ್ತ ಸಮಯದಲ್ಲಿ ನಡೆಯಬೇಕು. ಅರ್ಜಿ ಸಲ್ಲಿಕೆ ಹಾಗೂ ಯೋಜನೆಯ ಕುರಿತು ರೈತರಿಗೆ ಬ್ಯಾಂಕ್‍ಗಳು ಸಹ ಮಾಹಿತಿ ನೀಡಬೇಕೆಂದು ಹೇಳಿದರು.
ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಜಿಲಾನಿ.ಎಚ್. ಮೊಕಾಶಿ ಅವರು ಮಾತನಾಡಿ, ಜಿಲ್ಲೆಯ ತಾಲೂಕಾವಾರು ಪ್ರಮುಖ ಬೆಳೆಗಳನ್ನು ಗ್ರಾಮ ಪಂಚಾಯತಿ ಮಟ್ಟಕ್ಕೆ ಹಾಗೂ ಉಳಿದ ಬೆಳೆಗಳನ್ನು ಹೋಬಳಿ ಮಟ್ಟದಲ್ಲಿ ಜಾರಿಗೊಳಿಸಲಾಗುತ್ತಿದೆ ರೈತರು ಇದರ ಸೌಲಭ್ಯವನ್ನು ಪಡೆಯಬೇಕೆಂದು ಹೇಳಿದರು.
ಫಸಲ್ ವಿಮಾ ಯೋಜನೆಯಡಿ ಅಧಿಸೂಚಿತ ಹೋಬಳಿ ಮಟ್ಟದ ಬೆಳೆಗಳ ಪಟ್ಟಿ ಹಾಗೂ ಅಧಿಸೂಚಿತ ಗ್ರಾಮ ಪಂಚಾಯತಿ ಮಟ್ಟಕ್ಕೆ ಒಳಗೊಂಡ ಬೆಳೆಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ರೈತರು ಈ ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳಬಹುದಾಗಿದೆ. ಈ ಬಗ್ಗೆ ಮಾಹಿತಿ ಪಡೆದು ರೈತರು ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದರು.
ಬೆಳಗಾವಿ ಜಿಲ್ಲೆಗೆ ‘ಪ್ಯೂಚರ್ ಜನರಲ್ ಇಂಡಿಯಾ ಇನ್ಸೂರೆನ್ಸ್ ಕಂಪನಿ ಲಿಮಿಟೆಡ್’ ಅಧಿಸೂಚಿತ ವಿಮಾ ಸಂಸ್ಥೆಯಾಗಿದೆ ಎಂದು ಹೇಳಿದರು.
ಜುಲೈ 31 ಕೊನೆಯ ದಿನ:
2018ರ ಮುಂಗಾರು ಹಂಗಾಮಿನಲ್ಲಿ ಬೆಳೆಸಾಲ ಪಡೆಯುವ ಮತ್ತು ಬೆಳೆಸಾಲ ಪಡೆಯದ ರೈತರಿಗೆ ಈ ಬೆಳೆ ವಿಮಾ ಯೋಜನೆಯಲ್ಲಿ ಅರ್ಜಿ ಸಲ್ಲಿಸಲು ಹೆಸರು ಬೆಳೆಗೆ ಜುಲೈ 16 ಕೊನೆಯ ದಿನವಾಗಿದೆ ಹಾಗೂ ಉಳಿದ ಎಲ್ಲ ಬೆಳೆಗಳಿಗೆ ಜುಲೈ 31 ಕೊನೆಯ ದಿನವಾಗಿದೆ ಎಂದು ಜಿಲಾನಿ ಅವರು ಮಾಹಿತಿ ನೀಡಿದರು.
ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ:
ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿಯಲ್ಲಿ ಅಧಿಸೂಚಿತ ಹೋಬಳಿ ಮತ್ತು ಬೆಳೆಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ಈ ಬೆಳೆಗಳಿಗೆ ರೈತರು ವಿಮೆ ಅರ್ಜಿ ಸಲ್ಲಿಸಬಹುದಾಗಿದೆ. ಇದಕ್ಕೆ ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿದೆ.
ಭಿತ್ತಿಪತ್ರ ಬಿಡುಗಡೆ:
ಫಸಲ್ ವಿಮಾ ಯೋಜನೆಯ ಕುರಿತ ಮಾಹಿತಿ ಪುಸ್ತಕ ಮತ್ತು ಭಿತ್ತಿಪತ್ರ ಹಾಗೂ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಭಿತ್ತಿಪತ್ರಗಳನ್ನು ಜಿಲ್ಲಾಧಿಕಾರಿ ಎಸ್.ಜಿಯಾವುಲ್ಲಾ ಹಾಗೂ ಅಧಿಕಾರಿಗಳು ಸಭೆಯಲ್ಲಿ ಬಿಡುಗಡೆಗೊಳಿಸಿದರು.

ಸಭೆಯಲ್ಲಿ ಚಿಕ್ಕೋಡಿ ಉಪ ಕೃಷಿ ನಿರ್ದೇಶಕರಾದ ಎಲ್.ಐ. ರೂಡಗಿ, ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ನಾಗರಾಜ, ಫ್ಯೂಚರ್ ಜನರಲ್ ಇಂಡಿಯಾ ಇನ್ಸೂರೆನ್ಸ್ ಕಂಪನಿಯ ಪ್ರತಿನಿಧಿ ಪರಶುರಾಮ, ಜಿಲ್ಲಾ ಸಾಂಖ್ಯಿಕ ಅಧಿಕಾರಿಗಳಾದ ಸುರೇಶ ಅಲಗುಂಡಿ, ತೋಟಗಾರಿಕೆ ಇಲಾಖೆಯ ತಾಂತ್ರಿಕ ಅಧಿಕಾರಿ ವಿನಾಯಕ ಪಾಟೀಲ, ಕೃಷಿ ಅಧಿಕಾರಿ ಅಲ್ತಾಪ ಹುಸೇನ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಇನ್ನಿತರ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಫಸಲ್ ವಿಮಾ ಯೋಜನೆಯ ಉದ್ದೇಶಗಳು:
ಪ್ರಕೃತಿ ವಿಕೋಪ, ಕೀಟ/ರೋಗ ಬಾದೆಗಳಿಂದ ಅಧಿಸೂಚಿತ ಬೆಳೆ ವಿಫಲವಾದ ಸಂದರ್ಭದಲ್ಲಿ ರೈತರಿಗೆ ವಿಮಾ ಸಂರಕ್ಷಣೆ ಮತ್ತು ಹಣಕಾಸು ಬೆಂಬಲ ಒದಗಿಸುವುದು.
ಪ್ರಸ್ತುತ ಹಂಗಾಮಿನಲ್ಲಿ ಸ್ಥಳ ನಿರ್ಧಿಷ್ಟ ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂಕುಸಿತ ಮತ್ತು ಬೆಳೆ ಮುಳುಗಡೆ ಇವುಗಳಿಂದ ಉಂಟಾಗುವ ನಷ್ಟದಿಂದ ರಕ್ಷಣೆ.
ಪ್ರಸ್ತುತ ಹಂಗಾಮಿನಲ್ಲಿ ಮಳೆ ಅಭಾವ ಅಥವಾ ಇತರೆ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಅಧಿಸೂಚಿತ ಘಟಕದಲ್ಲಿ ಶೇ.75ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ವಿಫಲಗೊಂಡಲ್ಲಿ ವಿಮಾ ಮೊತ್ತದ ಗರಿಷ್ಠ ಶೇ.25 ರಷ್ಟು ಪರಿಹಾರ.
ಪ್ರಸ್ತುತ ಹಂಗಾಮಿನಲ್ಲಿ ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲೇ ಒಣಗಿಸಲು ಬಿಟ್ಟಂತಹ ಸಂದರ್ಭದಲ್ಲಿ ಕಟಾವು ಮಾಡಿದ ಎರಡು ವಾರದೊಳಗೆ ಚಂಡಮಾರುತ, ಚಂಡಮಾರುತ ಸಹಿತ ಮಳೆ ಮತ್ತು ಅಕಾಲಿಕ ಮಳೆಯಿಂದಾಗಿ ಬೆಳೆ ನಾಶವಾದರೆ ವೈಯಕ್ತಿಕವಾಗಿ ವಿಮೆ ಸಂಸ್ಥೆಯು ಬೆಳೆ ನಷ್ಟ ನಿರ್ಧಾರ ಮಾಡಿ ಬೆಳೆ ನಷ್ಟ ಪರಿಹಾರ ಹಾಗೂ ಕೃಷಿ ಕ್ಷೇತ್ರದಲ್ಲಿ ಹಣಕಾಸಿನ ಹರಿವನ್ನು ಖಾತರಿಪಡಿಸಿಕೊಳ್ಳುವುದು.
ರೈತರಿಗಾಗಿ ಏಕೀಕೃತ ವಿಮ ಆಯೋಜನೆಗಳ ಪ್ಯಾಕೇಜ್:
ರೈತರ ಜೀವನದಲ್ಲಿ ಮತ್ತು ಕೃಷಿ ಆದಾಯದಲ್ಲಿ ಸ್ಥಿರತೆಯನ್ನು ತರಲು ಜಾರಿಗೊಳಿಸಲಾಗುತ್ತಿರುವ ಏಕೀಕೃತ ವಿಮಾ ಯೋಜನೆಗಳ ಪ್ಯಾಕೇಜ್‍ನ್ನು 2018 ರಿಂದ ಬೆಳಗಾವಿ ಜಿಲ್ಲೆಯಲ್ಲಿ ಪೈಲಟ್ ಆಧಾರದಲ್ಲಿ ಜಾರಿಗೊಳಿಸಲಾಗುತ್ತಿದ್ದು, ಇದರಲ್ಲಿ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆ ಸೇರಿದಂತೆ 7 ವಿಭಾಗಗಳಿವೆ.
7 ಯೋಜನೆಗಳು ಇಂತಿವೆ:
ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆ, ವೈಯಕ್ತಿಕ ಅಪಘಾತ ವಿಮೆ, ಜೀವ ವಿಮೆ, ಮನೆ ಮತ್ತು ಸ್ವತುಗಳ ವಿಮೆ, ಕೃಷಿ ಪಂಪ್‍ಸೆಟ್‍ಗಳಿಗೆ ವಿಮೆ, ವಿದ್ಯಾರ್ಥಿ ಸುರಕ್ಷಾ ವಿಮೆ, ಕೃಷಿ ಟ್ರ್ಯಾಕ್ಟ್‍ರ್‍ಗಳಿಗೆ ವಿಮೆ.
ಫಸಲ್ ವಿಮಾ ಯೋಜನೆ ಸೇರಿದಂತೆ ಇನ್ನುಳಿದ ಎರಡು ವಿಮೆಗಳು ಬೆಳೆ ವಿಮಾ ಕಂತಿನ ಸಹಾಯಧನ ಪಡೆಯಲು ಕಡ್ಡಾಯವಾಗಿರುತ್ತವೆ. ಈ ಯೋಜನೆಗಳಲ್ಲಿ ರೈತರು ಈಗಾಗಲೇ ಯಾವುದಾದರೂ ಎರಡು ವಿಮೆ ಪಡೆದುಕೊಂಡಲ್ಲಿ ಅಂತಹ ರೈತರಿಗೆ ಇದರಿಂದ ವಿನಾಯಿತಿ ಇದ್ದು, ಅಂತಹ ವಿಮೆಗಳ ವಿವರಗಳನ್ನು ಬೆಳೆ ವಿಮಾ ಪ್ರಸ್ತಾವನೆ ಪಾರ್ಮ್‍ನಲ್ಲಿ ಬ್ಯಾಂಕಗಳಿಗೆ ಒದಗಿಸಬೇಕಾಗುತ್ತದೆ. Farmers provide facility for Fasal Insurance Scheme: Deputy Commissioner  

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.  

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.