ಉತ್ತಮ ಸಮಾಜಕ್ಕಾಗಿ

ಜಿಲ್ಲೆಯಿಂದ ಹೊರಬಿದ್ದ ಐವರು ಕೆಎಎಸ್ ಅಧಿಕಾರಿಗಳು: ಶಶಿಧರ ಕುರೇರ ಬಾಗಲಕೋಟ ADC

news belgaum Five KAS officers from the district are: Shashidhar Kurea Bagalkot ADC

0

ಬೆಳಗಾವಿ:(news belgaum) ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ಶಶಿಧರ ಕುರೇರ ಸೇರಿ ಒಟ್ಟು ಐವರು ಕೆಎಎಸ್ ಅಧಿಕಾರಿಗಳಿಗೆ ಸರಕಾರ ಜಿಲ್ಲೆಯಿಂದ ಇಂದು ಗೇಟ್ ಪಾಸ್ ನೀಡಿದೆ.
ಆಯುಕ್ತ ಶಶಿಧರ ಕುರೇರ ಅವರನ್ನು ಸರಕಾರ ಬಾಗಲಕೋಟ ಅಪರ ಜಿಲ್ಲಾಧಿಕಾರಿ(ಎಡಿಸಿ)ಯಾಗಿ ವರ್ಗಾವಣೆಗೊಳಿಸಿ ಇಂದು ಆದೇಶ ಹೊರಡಿಸಿದೆ. ಸ್ಮಾರ್ಟ್ ಸಿಟಿ ಎಂಡಿ ಹಾಗೂ ಆಯುಕ್ತರಾಗಿದ್ದ ಕುರೇರ ಸುಮಾರು ಮೂರು ವರ್ಷ ನಗರದಲ್ಲಿ ಬುಡಾ & ಪಾಲಿಕೆಗೆ ಸೇವೆ ಸಲ್ಲಿಸಿದ್ದಾರೆ.
News Belgaum-ಜಿಲ್ಲೆಯಿಂದ ಹೊರಬಿದ್ದ ಐವರು ಕೆಎಎಸ್ ಅಧಿಕಾರಿಗಳು: ಶಶಿಧರ ಕುರೇರ ಬಾಗಲಕೋಟ ADCಚಿಕ್ಕೋಡಿ ಎಸಿಯಾಗಿದ್ದ ಗೀತಾ ಕೌಲಗಿ ಕೆ-ಶಿಪ್ ಇಲಾಖೆಗೆ, ಬೆಳಗಾವಿ ಎಸಿ ಕವಿತಾ ಯೋಗಪ್ಪನವರ ಅವರನ್ನು ಪ್ರಧಾನ ವ್ಯವಸ್ಥಾಪಕಿ-ಹೆಸ್ಕಾಂ ಹುಬ್ಬಳ್ಳಿಗೆ, ನಗರ ಬುಡಾ ಆಯುಕ್ತ ಶಕೀಲ್ ಅಹ್ಮದ್ ಅವರನ್ನು ಹುಬ್ಬಳ್ಳಿ-ಧಾರವಾಡ ಪಾಲಿಕೆ ಕಮಿಷ್ನರ್ ಆಗಿ ಹಾಗೂ ಪ್ರೀತಂ ನಸಲಾಪುರೆ ಅವರನ್ನು ಬಸವಕಲ್ಯಾಣ ಎಸಿಯಾಗಿ ಸರಕಾರ ವರ್ಗಾವಣೆಗೊಳಿಸಿದ್ದು, ಒಟ್ಟು ಐವರು ಜಿಲ್ಲೆಯಿಂದ ಹೊರಬಿದ್ದಂತಾಗಿದೆ.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.  

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

ಪಿಯುಸಿ ಪರೀಕ್ಷೆಯ ಮಾಹಿತಿ
ಬೆಳಗಾವಿ:  ಮಾ.14 ರಂದು ದ್ವಿತೀಯ ಪಿಯುಸಿ ಕನ್ನಡ ವಿಷಯದ ಪರೀಕ್ಷೆ ಜರುಗಿತು.
ಜಿಲ್ಲೆಯ ಒಟ್ಟು 34 ಪರೀಕ್ಷಾ ಕೇಂದ್ರಗಳಲ್ಲಿ ಕನ್ನಡ ಪರೀಕ್ಷೆಗೆ 12269 ವಿದ್ಯಾರ್ಥಿಗಳು ಹಾಜರಾಗಿದ್ದರು ಹಾಗೂ 578 ವಿದ್ಯಾರ್ಥಿಗಳು ಗೈರಾಗಿದ್ದರು.
ಯಾವುದೇ ತರಹದ ಡಿಬಾರ್ ಆಗಿರುವುದಿಲ್ಲ ಎಂದು ಪದವಿಪೂರ್ವ ಶಿಕ್ಷಣ ಹಾಗೂ ವೃತ್ತಿ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾ.21 ರಂದು ಪ್ರಗತಿ ಪರಿಶೀಲನಾ ಸಭೆ
ಬೆಳಗಾವಿ: ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡದ ಉಪಯೋಜನೆಗಳಡಿ ರಾಜ್ಯ ಮತ್ತು ಜಿಲ್ಲಾ ವಲಯದಡಿ ಇಲಾಖಾವಾರು ಹಾಗೂ ಕಾರ್ಯಕ್ರಮವಾರು ಒದಗಿಸಿದ ಅನುದಾನದಡಿ ಕೈಗೊಂಡ ಕಾರ್ಯಕ್ರಮಗಳ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಇಲ್ಲಿನ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಮಾ.21 ರಂದು ಮಧ್ಯಾಹ್ನ 12:30 ಗಂಟೆಗೆ ಪ್ರಗತಿ ಪರಿಶೀಲನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಮಟ್ಟದ ಜಾಗೃತ ಸಮಿತಿ ಸಭೆ:
ಇಲ್ಲಿನ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಮಾ.21 ರಂದು ಬೆಳಿಗ್ಗೆ 10:30 ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ (ದೌರ್ಜನ್ಯ ನಿಯಂತ್ರಣ) ನಿಯಮಗಳು 1995ರ ನಿಯಮ 2017ರ ರೀತ್ಯ ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಿಕ್ಕೋಡಿ-ಶ್ರೀಶೈಲ್ ಮಾರ್ಗದಲ್ಲಿ ಹೆಚ್ಚುವರಿ ಬಸ್
ಬೆಳಗಾವಿ:ಯುಗಾದಿ ಹಬ್ಬದ ನಿಮಿತ್ಯ ಚಿಕ್ಕೋಡಿ ವಿಭಾಗದ ಚಿಕ್ಕೋಡಿ ಘಟಕದಿಂದ ಚಿಕ್ಕೋಡಿಯಿಂದ ಶ್ರೀಶೈಲ್‍ಗೆ ಅಂತರಾಜ್ಯ ರಾತ್ರಿ ಸಾರಿಗೆ ಸೇವೆ ಆರಂಭಿಸಲಾಗಿದೆ.
ಚಿಕ್ಕೋಡಿಯಿಂದ ಮಧ್ಯಾಹ್ನ 3 ಗಂಟೆಗೆ ಬಸ್ ಹೊರಟು ಬೆಳಿಗ್ಗೆ 6:50ಕ್ಕೆ ತಲುಪಲಿದೆ. ಶ್ರೀಶೈಲದಿಂದ ಮಧ್ಯಾಹ್ನ 2:30 ಗಂಟೆಗೆ ಬಸ್ ಹೊರಟು ಬೆಳಿಗ್ಗೆ 6:20ಕ್ಕೆ ಚಿಕ್ಕೋಡಿ ತಲುಪಲಿದೆ. ಸಾರ್ವಜನಿಕರು ಈ ಬಸ್ ಸೇವೆಯನ್ನು ಸದುಪಯೋಗಿಸಿಕೊಳ್ಳಬೇಕೆಂದು ಚಿಕ್ಕೋಡಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Leave A Reply

 Click this button or press Ctrl+G to toggle between Kannada and English

Your email address will not be published.