ಉತ್ತಮ ಸಮಾಜಕ್ಕಾಗಿ

ಯುಪಿಎ ಮೈತ್ರಿಯ ಪ್ರಧಾನಿ ಹುದ್ದೆಗೆ ಪೈಪೋಟಿ: ದೀದಿ ಮಮತಾ ಪರ ಮಾಜಿ ಪ್ರಧಾನಿ ಹೆಚ್.ಡಿ.ಡಿ ಬ್ಯಾಟಿಂಗ್

Former Prime Minister HDD Batting For Debt Mamata Competition For UPA's Prime Ministerial Post

0

ನವದೆಹಲಿ:(news belgaum) ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಯುಪಿಎ ಮೈತ್ರಿಕೂಟದಲ್ಲಿ ಪ್ರಧಾನಿ ಹುದ್ದೆಗೆ ಪೈಪೋಟಿ ಹೆಚ್ಚಾಗಿದೆ. ಇದರ ನಡುವೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ದೇವೇಗೌಡ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಪರ ಬ್ಯಾಟಿಂಗ್ ಮಾಡಿದ್ದಾರೆ.
ಸುದ್ದಿ ಸಂಸ್ಥೆಯೊಂದರ ಸಂದರ್ಶನದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ಪ್ರಧಾನಮಂತ್ರಿ ಹುದ್ದೆಗೆ ಬಿಂಬಿಸಿದರೆ ಅದನ್ನು ನಾನು ಸ್ವಾಗತಿಸುತ್ತೇನೆ ಎಂದು ಹೇಳಿದ್ದು, ಇಂದಿರಾ ಗಾಂಧಿ 17 ವರ್ಷಗಳ ಕಾಲ ದೇಶವನ್ನು ಮುನ್ನಡೆಸಿದ್ದರು. ಪುರುಷರಷ್ಟೇ ಏಕೆ ಪ್ರಧಾನಮಂತ್ರಿ ಯಾಗಬೇಕು..? ಮಮತಾ ಬ್ಯಾನರ್ಜಿ ಅಥವಾ ಮಾಯಾವತಿ ಏಕೆ ಆಗಬಾರದು..? ಎಂದು ಪ್ರಶ್ನಿಸುವ ಮೂಲಕ ಮಹಿಳಾ ಪ್ರಧಾನಿ ಪ್ರಸ್ತಾವಕ್ಕೆ ತಾವು ವಿರೋಧಿಯಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಸರ್ಕಾರ ನಡೆಸುತ್ತಿರುವ ಜೆಡಿಎಸ್ ಪಕ್ಷದ ಮುಖ್ಯಸ್ಥರಾದ ದೇವೇಗೌಡ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಬದಲಿಗೆ ಮಮತಾ ಪರ ಬ್ಯಾಟ್ ಬೀಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಬಿಜೆಪಿ ವಿರುದ್ಧದ ಹೋರಾಟದಲ್ಲಿ ಇತರೆ ಪಕ್ಷಗಳಿಗೆ ಸಹಕಾರ ನೀಡಲು ಜೆಡಿಎಸ್ ಸಿದ್ಧ. ಏಕೆಂದರೆ, ದೇಶದಲ್ಲಿ ಇಂದು ಭಯದ ವಾತಾವರಣ ನಿರ್ಮಾಣವಾಗಿದೆ. 2019ರಲ್ಲಿ ಬಿಜೆಪಿಯನ್ನು ಎದುರಿಸಲು ಬಲಿಷ್ಠ ಒಕ್ಕೂಟದ ಅವಶ್ಯಕತೆ ಇದೆ. ತೃತೀಯ ರಂಗ ಎಂಬುದು ಇನ್ನೂ ಆರಂಭಿಕ ಹಂತದಲ್ಲಿದೆ. ಬಿಜೆಪಿಯೇತರ ಪಕ್ಷಗಳನ್ನು ಒಗ್ಗೂಡಿಸಲು ಮಮತಾ ಶಕ್ತಿ ಮೀರಿ ಪ್ರಯತ್ನ ನಡೆಸುತ್ತಿದ್ದಾರೆ. ರಾಷ್ಟ್ರೀಯ ಪಕ್ಷವಾಗಿರುವ ಕಾಂಗ್ರೆಸ್ ಕೂಡ ಪ್ರಧಾನ ಪಾತ್ರ ನಿರ್ವಹಿಸಲಿದೆ ಎಂದರು.
News Belgaum-ಯುಪಿಎ ಮೈತ್ರಿಯ ಪ್ರಧಾನಿ ಹುದ್ದೆಗೆ ಪೈಪೋಟಿ: ದೀದಿ ಮಮತಾ ಪರ ಮಾಜಿ ಪ್ರಧಾನಿ ಹೆಚ್.ಡಿ.ಡಿ ಬ್ಯಾಟಿಂಗ್ಲೋಕಸಭೆ ಚುನಾವಣೆಯನ್ನು ಕರ್ನಾಟಕದಲ್ಲಿ ಕಾಂಗ್ರೆಸ್ ಜೊತೆಗೂಡಿ ಎದುರಿಸಲಾಗುವುದು. ಸೀಟು ಹಂಚಿಕೆ ಬಗ್ಗೆ ಈವರೆಗೆ ಯಾವುದೇ ಚರ್ಚೆಗಳಾಗಿಲ್ಲ. ಚುನಾವಣೆಗೂ ಮೊದಲೇ ಪ್ರಧಾನಿ ಅಭ್ಯರ್ಥಿ ವಿಚಾರ ಚರ್ಚೆಗೆ ಬಂದರೆ ಹೊಡೆತ ಬೀಳಬಹುದು ಎಂಬ ಕಾರಣಕ್ಕೆ ಆ ಬಗ್ಗೆ ಚುನಾವಣೆ ನಂತರ ನಿರ್ಧರಿಸಲು ಕಾಂಗ್ರೆಸ್ ಹಾಗೂ ಇನ್ನಿತರೆ ಪಕ್ಷಗಳು ಒಲವು ತೋರಿವೆ ಎಂದು ತಿಳಿಸಿದರು.
ಬಿಜೆಪಿ ಹಾಗೂ ಆರ್ ಎಸ್ಎಸ್ ಬೆಂಬಲವಿಲ್ಲದ ಪ್ರತಿಪಕ್ಷಗಳ ಪಾಳಯದ ಯಾವುದೇ ಅಭ್ಯರ್ಥಿಯನ್ನು ಪ್ರಧಾನಮಂತ್ರಿಯಾಗಿ ಬೆಂಬಲಿಸಲು ಹಿಂದೇಟು ಹಾಕುವುದಿಲ್ಲ ಎಂಬ ಸುಳಿವನ್ನು ಈಗಾಗಲೇ ಕಾಂಗ್ರೆಸ್ ಮೂಲಗಳು ನೀಡಿವೆ ಎಂದು ಹೇಳಿದ್ದಾರೆ.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.  

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.