ಉತ್ತಮ ಸಮಾಜಕ್ಕಾಗಿ

ಮಾತೃವಂದನಾ ಯೋಜನೆಯ ಸದುಪಯೋಗ ಪಡೆದುಕೊಳ್ಳಿ: ಸಿ.ಇ.ಓ ರಾಮಚಂದ್ರನ್

Get Advantage of Motherhood Plan: CEO Ramachandran

0

ಬೆಳಗಾವಿ: (news belagaviಅಂಗನವಾಡಿ ಮೇಲ್ವಿಚಾರಕರು, ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕೆಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್. ಆರ್ ಸೂಚಿಸಿದರು.

ತಾಲೂಕಿನ ತಾರಿಹಾಳ ಗ್ರಾಮಕ್ಕೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮಚಂದ್ರನ್. ಆರ್ ಅವರು ಇತ್ತೀಚೆಗೆ ಭೇಟಿ ನೀಡಿ, ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಬಗ್ಗೆ ಗ್ರಾಮಸ್ಥರಲ್ಲಿ ಅರಿವು ಮೂಡಿಸಲು ಗ್ರಾಮ ಪಂಚಾಯತ ಆವರಣದಲ್ಲಿ ಭಿತ್ತಿಪತ್ರಗಳನ್ನು ಅಂಟಿಸಿ ಮಾತನಾಡಿದರು.

ಮಾತೃವಂದನಾ ಯೋಜನೆಯ ಸದುಪಯೋಗ  ಪಡೆದುಕೊಳ್ಳಿ: ಸಿ.ಇ.ಓ ರಾಮಚಂದ್ರನ್- Tarun kranti

ಮಹಿಳೆಯರ ಮೊದಲ ಪ್ರಸವದ ಮತ್ತು ನಂತರದ ಸಾಕಷ್ಟು ವಿಶ್ರಾಂತಿಗಾಗಿ ಅಂಶಿಕ ಪರಿಹಾರವನ್ನು ಪ್ರೋತ್ಸಾಹಧನದ ರೂಪದಲ್ಲಿ ರೂ.5000 ನೀಡಲಾಗುತ್ತಿದೆ. ಯೋಜನೆಯ ಸೌಲಭ್ಯವನ್ನು ಮೊದಲ ಜೀವಂತ ಹೆರಿಗೆಗೆ ಮಾತ್ರ ಸೀಮಿತಗೊಳಿಸಲಾಗಿದ್ದು, ದಿನಾಂಕ: 01-01-2017 ನಂತರದಲ್ಲಿ ಗುರುತಿಸಲ್ಪಟ್ಟ ಗರ್ಭಿಣಿ/ಬಾಣಂತಿಯರಿಗೆ ಸಹಾಯಧನವನ್ನು 3 ಕಂತುಗಳಲ್ಲಿ ನೇರ ನಗದು ವರ್ಗಾವಣೆಮೂಲಕ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತದೆ ಎಂದರು.

ಈಗಾಗಲೇ ನಮ್ಮ ಜಿಲ್ಲೆಯಲ್ಲಿ ಈ ಕಾರ್ಯಕ್ರಮ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿದ್ದು, 22,613 ಫಲನುಭವಿಗಳು ಈ ಯೋಜನೆಯ ಸದುಪಯೋಗ ಪಡೆದುಕೊಂಡಿರುತ್ತಾರೆ. ಈ ಫಲಾನುಭವಿಗಳ ಖಾತೆಗೆ ನೇರವಾಗಿ ಒಟ್ಟು ರೂ.5,13,61,000 ಜಮೆಯಾಗಿರುತ್ತದೆ ಎಂದು ತಿಳಿಸಿದರು.

ಯೋಜನೆಯ ಬಗ್ಗೆ ಜನಸಾಮಾನ್ಯರಿಗೆ ತಿಳಿಸಲು ಅಂಗನವಾಡಿ ಕೇಂದ್ರಗಳಿಗೆ, ಗ್ರಾಮ ಪಂಚಾಯತಗಳಿಗೆ ಪ್ರಾಥಮಿಕ/ಸಮುದಾಯ ಆರೋಗ್ಯ ಕೇಂದ್ರ, ಸಾರ್ವಜನಿಕ ಆಸ್ಪತ್ರೆ, ತಹಶೀಲ್ದಾರ ಕಚೇರಿ ತಾಲೂಕು ಕಚೇರಿ ಮತ್ತು ಜಿಲ್ಲಾ ಮಟ್ಟದ ಕಚೇರಿಗಳ ಮುಂದೆ ಯೋಜನೆಯ ಬಗ್ಗೆ ಮಾಹಿತಿ ಇರುವ ಭಿತ್ತಿಪತ್ರಗಳನ್ನು ಅಂಟಿಸಲಾಗಿದ್ದು, ಈ ಯೋಜನೆಯ ಸೌಲಭ್ಯ ಜನರಿಗೆ ತಲುಪುವಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯತ ಸಿಬ್ಬಂದಿ, ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

 

Leave A Reply

 Click this button or press Ctrl+G to toggle between Kannada and English

Your email address will not be published.