ಉತ್ತಮ ಸಮಾಜಕ್ಕಾಗಿ

ಚಿನ್ನದ ಪದಕ ವಿಜೇತ ಸದಾಶಿವ ಗಾಣಿಗೇರಗೆ ಸನ್ಮಾನ

Gold medal winner Sadashiva Ganiger is honored

0

ಬೆಳಗಾವಿ: (tarun kranti)ಇತ್ತೀಚೆಗೆ ಜರುಗಿದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 6ನೇ ಘಟಿಕೋತ್ಸವದಲ್ಲಿ ಎಂಎ ಕನ್ನಡ ವಿಭಾಗದಲ್ಲಿ ಎರಡು ಚಿನ್ನದ ಪದಕಗಳನ್ನು ಪಡೆದ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸದಾಶಿವ ಗಾಣೀಗೇರ ಅವರನ್ನು ಇಲ್ಲಿನ ಜಿಲ್ಲಾ ಪಂಚಾಯತ ಕಾರ್ಯಾಲಯದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್.ಆರ್ ಅವರು ಸನ್ಮಾನಿಸಿ, ಅಭಿನಂದಿಸಿದರು.
ನಂತರ ಮಾತನಾಡಿದ ರಾಮಚಂದ್ರನ್ ಅವರು, ಬಡತನದ ಸಮಸ್ಯೆಯ ಮಧ್ಯೆ ಕಬ್ಬು ಕಡಿಯುವುದು ಸೇರಿದಂತೆ ಇನ್ನಿತರ ಕೂಲಿ ಕೆಲಸಗಳನ್ನು ಮಾಡುತ್ತಾ, ಉತ್ತಮವಾಗಿ ಅಧ್ಯಯನವನ್ನೂ ಕೈಗೊಂಡು, ಎರಡು ಚಿನ್ನದ ಪದಕಗಳನ್ನು ಗಳಿಸಿ ಸ್ನಾತಕೋತ್ತರ ವಿಭಾಗದಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನವನ್ನು ಪಡೆದ ಸದಾಶಿವ ಗಾಣಿಗೇರ ಅವರ ಸಾಧನೆ ಎಲ್ಲ ಯುವಕರಿಗೆ ಮಾದರಿಯಾಗಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಎಸ್.ಬಿ. ಮುಳ್ಳಳ್ಳಿ, ಜಿಲ್ಲಾ ಪಂಚಾಯತ ಮುಖ್ಯ ಲೆಕ್ಕಾಧಿಕಾರಿ ಶಂಕರಾನಂದ ಬನಶಂಕರಿ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿ ಪರಶುರಾಮ ದುಡಗುಂಟಿ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಪುಂಡಲೀಕ ಅನವಾಲ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.Gold medal winner Sadashiva Ganiger is honored

Leave A Reply

 Click this button or press Ctrl+G to toggle between Kannada and English

Your email address will not be published.