ಉತ್ತಮ ಸಮಾಜಕ್ಕಾಗಿ

ಭರತೇಶ ಶಿಕ್ಷಣ ಸಂಸ್ಥೆಯಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಸ್ತರಣಾ ಕೇಂದ್ರದ ಕಾರ್ಯಾಚರಣೆಯ ಪ್ರಾರಂಭೋತ್ಸವ

Hampi Kannada University Extension Center is the start of the campaign at Bharatesh Institution

0

ಬೆಳಗಾವಿ:  (news belagaviಪ್ರಸಕ್ತ ಸಾಲಿನಿಂದ ಭರತೇಶ ಶಿಕ್ಷಣ ಸಂಸ್ಥೆಯಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಸ್ತರಣಾ ಕೇಂದ್ರ
ಪ್ರಾರಂಬಿಸಲ್ಪಟ್ಟಿದೆ. ಅದರ ಕಾರ್ಯಾಚರಣೆಯ ಪ್ರಾರಂಭೋತ್ಸವದ ಕಾರ್ಯಕ್ರಮವನ್ನು ಭರತೇಶ ಶಿಕ್ಷಣ ಸಂಸ್ಥೆಯಲ್ಲಿ
ಜುಲೈ 17 ಮಂಗಳವಾರ ದಂದು ಮಧ್ಯಾಹ್ನ 3 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ಮಾನ್ಯ
ಕುಲಪತಿಗಳಾದ ಡಾ. ಮಲ್ಲಿಕಾ ಘಂಟಿ ಕಾರ್ಯಾಚರಣೆಗೆ ಚಾಲನೆ ನೀಡಲಿದ್ದಾರೆ.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಖ್ಯಾತ ಸಾಹಿತಿಗಳು ಮತ್ತು ಕೇಂದ್ರ ಸಾಹಿತ್ಯ ಅಕ್ಯಾಡಮಿ ಸದಸ್ಯರಾದ ಡಾ. ಬಾಳಾಸಾಹೇಬ ಲೋಕಾಪುರ ಅವರು ಆಗಮಿಸಲಿದ್ದಾರೆ. ಕನ್ನಡ ವಿಶ್ವವಿದ್ಯಾಲಯ ಹಂಪಿಯ ಅಧ್ಯಯನಾಂಗದ ನಿರ್ದೇಶಕರಾದ ಡಾ. ಶಿವಾನಂದ ವಿರಕ್ತಮಠ ಅವರು ಅತಿಥಿಗಳಾಗಿ ಆಗಮಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿವೃತ್ತ ಜಿಲ್ಲಾ ನ್ಯಾಯಾಧೀಶರು, ಹಿರಿಯ ಕವಿಗಳು, ಭರತೇಶ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ಡಾ. ಜಿನದತ್ತ ದೇಸಾಯಿ ಅವರು ವಹಿಸಿಕೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಕಾರ್ಯದರ್ಶಿಗಳಾದ ಶ್ರೀ ರಾಜೀವ ದೊಡ್ಡಣ್ಣವರ ಅವರು ಕೇಳಿಕೊಂಡಿದ್ದಾರೆ. ಭರತೇಶ ಶಿಕ್ಷಣ ಸಂಸ್ಥೆಯಲ್ಲಿ ಈಗಾಗಲೇ ಹಂಪಿಯ ಕನ್ನಡ ವಿಶ್ವವಿದ್ಯಾಲಯದ ವತಿಯಿಂದ ಇತಿಹಾಸ ಮತ್ತು ಕನ್ನಡ ವಿಷಯದಲ್ಲಿ ಪಿ. ಎಚ್. ಡಿ. ಅಧ್ಯಯಯಕ್ಕಾಗಿ ಅವಕಾಶವಿದೆ ಮತ್ತು ಈ ವರ್ಷದಿಂದ ವಿಸ್ತರಣಾ ಕೇಂದ್ರದ ಮೂಲಕ ಕನ್ನಡ ಮತ್ತು ಇತಿಹಾಸ ವಿಷಯದಲ್ಲಿ ಎಂ. ಎ. ಪಿ. ಎಚ್. ಡಿ. ಕೋರ್ಸ್ ಗಾಗಿ ಅನುಮತಿ ನೀಡಿರುವದನ್ನು ಸ್ಮರಿಸಬಹುದು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news

 

Leave A Reply

 Click this button or press Ctrl+G to toggle between Kannada and English

Your email address will not be published.