ಉತ್ತಮ ಸಮಾಜಕ್ಕಾಗಿ

ಮತದಾನದ ಕುರಿತು ಕಡ್ಡಾಯವಾಗಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು

He said that mandatory awareness should be made about voting. The president of the district sweep committee

0

ಬೆಳಗಾವಿ: (news belgaum)ಜಿಲ್ಲೆಯ 505 ಗ್ರಾಮ, 10 ತಾಲೂಕುಗಳು ಹಾಗೂ 33 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಮತಗಟ್ಟೆ ಮಟ್ಟದ ಜಾಗೃತಿ ತಂಡಗಳನ್ನು ರಚಿಸಿ, ಮತದಾನದ ಕುರಿತು ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್.ಆರ್ ಅವರು ಸೂಚಿಸಿದರು.
ಇಲ್ಲಿನ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶನಿವಾರ (ಮಾ.3) ಹಮ್ಮಿಕೊಂಡಿದ್ದ ಜಿಲ್ಲಾ ಸ್ವೀಪ್ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
News Belgaum-10 ತಾಲೂಕುಗಳು ಹಾಗೂ 33 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಮತಗಟ್ಟೆ ಮಟ್ಟದ ಜಾಗೃತಿ ತಂಡಗಳನ್ನು ರಚಿಸಿ, ಮತದಾನದ ಕುರಿತು ಜಾಗೃತಿ ಮೂಡಿಸಬೇಕುಜಿಲ್ಲೆಯಲ್ಲಿ ಒಟ್ಟು 4408 ಮತಗಟ್ಟೆಗಳನ್ನು ನಿರ್ಮಿಸಲಾಗಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಮತದಾರರ ಸಂಖ್ಯೆ ಹೆಚ್ಚಿರುವ ಕಡೆ ವಿಶೇಷ ಮತಗಟ್ಟೆಗಳನ್ನು ತೆರೆಯಲಾಗುವುದು ಎಂದು ಹೇಳಿದರು.
ಅಧಿಕಾರಿಗಳು ಚುನಾವಣೆ ಕುರಿತ ಪ್ರತಿಯೊಂದು ಕಾರ್ಯಗಳನ್ನು ತುರ್ತು ಕಾರ್ಯಗಳೆಂದು ಪರಿಗಣಿಸಿ, ಶೀಘ್ರವಾಗಿ ಕೈಗೊಳ್ಳಬೇಕು. ಚುನಾವಣಾ ಕಾರ್ಯಗಳ ಕುರಿತು ನಿರ್ಲಕ್ಷ ವಹಿಸುವ ಅಧಿಕಾರಿಗಳ ವಿರುದ್ಧ ಯಾವುದೇ ಮುಲಾಜಿಲ್ಲದೇ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ಎಲ್ಲ ಗ್ರಾಮ ಹಾಗೂ ನಗರಗಳಲ್ಲಿ ಬೂತ್ ಮಟ್ಟದ ಜಾಗೃತಿ ತಂಡಗಳನ್ನು ರಚಿಸಿ ಮತದಾನದ ಕುರಿತು ಕಡ್ಡಾಯವಾಗಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಮತದಾನದ ಜಾಗೃತಿ ಕುರಿತ ಜಾಥಾಗಳನ್ನು ಕೇವಲ ಗ್ರಾಮ ಅಥವಾ ನಗರದ ಪ್ರಮುಖ ರಸ್ತೆಗಳಲ್ಲಿ ಮಾತ್ರ ಹಮ್ಮಿಕೊಳ್ಳದೇ, ಕೊಳಗೇರಿ (ಸ್ಲಂ) ಪ್ರದೇಶಗಳಲ್ಲಿಯೂ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಅವಶ್ಯ ಇರುವ ಮತಗಟ್ಟೆಗಳಲ್ಲಿ ವಿಕಲ ಚೇತನರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ವೀಲ್‍ಚೇರ್ ಹಾಗೂ ಇನ್ನಿತರ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.
ವಿವಿ ಪ್ಯಾಟ್ ಜಾಗೃತಿ ಮೂಡಿಸಿ:
ಮಹಾನಗರ ಪಾಲಿಕೆಯ ಆಯುಕ್ತರಾದ ಶಶಿಧರ ಕುರೇರ ಅವರು ಮಾತನಾಡಿ, ವಿವಿ ಪ್ಯಾಟ್‍ಗಳನ್ನು ಇದೇ ಮೊದಲ ಬಾರಿಗೆ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಬಳಸಲಾಗುತ್ತಿದ್ದು, ವಿವಿ ಪ್ಯಾಟ್‍ಗಳ ಬಳಕೆಯ ಬಗ್ಗೆ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸುವ ಮೂಲಕ ಮತದಾರರಲ್ಲಿ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.
ಶೀಘ್ರದಲ್ಲೇ ವಿವಿ ಪ್ಯಾಟ್‍ನ ಬಳಕೆ ಹಾಗೂ ಜಾಗೃತಿ ಕುರಿತು ಜಿಲ್ಲಾ ಮಟ್ಟದಲ್ಲಿ ಒಂದು ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ಜಿಪಂ ಸಿಇಒ ರಾಮಚಂದ್ರನ್ ಅವರು ತಿಳಿಸಿದರು.
ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಪ್ರವೀಣ ಬಾಗೇವಾಡಿ, ಜಿಲ್ಲಾ ಪಂಚಾಯತ ಮುಖ್ಯ ಲೆಕ್ಕಾಧಿಕಾರಿ ಶಂಕರಾನಂದ ಬನಶಂಕರಿ, ಜಿಲ್ಲಾ ಸ್ವೀಪ್ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಗುರುನಾಥ ಕಡಬೂರ ಉಪಸ್ಥಿತರಿದ್ದರು.
ಮಹಾನಗರ ಪಾಲಿಕೆಯ ಅಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲ ತಾಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಇನ್ನಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.He said that mandatory awareness should be made about voting. The president of the district sweep committee

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.