ಉತ್ತಮ ಸಮಾಜಕ್ಕಾಗಿ

2,500 ಕೋಟಿ ರೂ ಅನುದಾನ ಪಡೆದುಕೊಳ್ಳುವಲ್ಲಿ ತಮ್ಮ ಎರಡು ದಿನಗಳ ದೆಹಲಿ ಭೇಟಿ ಯಶಸ್ವಿಯಾಗಿದೆ

His two-day visit to Delhi has been successful in getting Rs 2,500 crore

0

ನವದೆಹಲಿ: (news belagaviಕೇಂದ್ರದ ವಿವಿಧ ಸಚಿವರೊಂದಿಗೆ ನಡೆಸಿದ ಮಾತುಕತೆಯ ಫಲವಾಗಿ ಸುಮಾರು 2,500 ಕೋಟಿ ರೂಗೂ ಅಧಿಕ ಮೊತ್ತದ ಅನುದಾನ ಪಡೆದುಕೊಳ್ಳುವಲ್ಲಿ ಮತ್ತು ವಿವಿಧ ಯೋಜನೆಗಳಿಗೆ ಅನುಮತಿ ದೊರಕಿಸಿಕೊಳ್ಳುವಲ್ಲಿ ತಮ್ಮ ಎರಡು ದಿನಗಳ ದೆಹಲಿ ಭೇಟಿ ಸಂಪೂರ್ಣ ಯಶಸ್ವಿಯಾಗಿದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಅವರು, ಮುಂಗಾರು ಅಧಿವೇಶನ ಹಿನ್ನೆಲೆ ರಾಜ್ಯದ ಸಂಸದರು ಮತ್ತು ರಾಜ್ಯಸಭಾ ಸದಸ್ಯರೊಂದಿಗೆ ಚರ್ಚಿಸಲು ದೆಹಲಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಈ ವೇಳೆ ಕೇಂದ್ರ ಆಹಾರ ಮತ್ತು ನಾಗರೀಕರ ಸರಬರಾಜು, ಭೂ ಸಾರಿಗೆ ಮತ್ತು ಜಲಸಂಪನ್ಮೂಲ, ಕೃಷಿ, ರೈಲ್ವೆ ಮತ್ತು ಕಲ್ಲಿದ್ದಲು, ರಕ್ಷಣಾ ಸಚಿವರನ್ನು ಖುದ್ದಾಗಿ ಭೇಟಿ ಮಾಡಿ ಚರ್ಚಿಸಿದರು.

ತಮ್ಮ ಭೇಟಿಯ ವೇಳೆ ರಾಜ್ಯದ ಕೋರಿಕೆಗಳಿಗೆ ಎಲ್ಲಾ ಸಚಿವರುಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಸಂತೋಷ ತಂದಿದೆ. ಹಾಗೆಯೇ, ಸಚಿವರೊಂದಿಗೆ ನಡೆಸಿದ ಮಾತುಕತೆ ಫಲಪ್ರಧವಾಗಿದೆ. ಇದಕ್ಕಾಗಿ ಸಹಕಾರ ನೀಡಿದ ಎಲ್ಲಾ ಸಚಿವರನ್ನು ರಾಜ್ಯದ ಪರವಾಗಿ ಅಭಿನಂದಿಸುವುದಾಗಿ ತಿಳಿಸಿದರು.

News Belgaum-2,500 ಕೋಟಿ ರೂ ಅನುದಾನ ಪಡೆದುಕೊಳ್ಳುವಲ್ಲಿ ತಮ್ಮ ಎರಡು ದಿನಗಳ ದೆಹಲಿ ಭೇಟಿ ಯಶಸ್ವಿಯಾಗಿದೆ
ಆಹಾರ ಮತ್ತು ನಾಗರೀಕ ಸರಬರಾಜು ಸಚಿವರಾದ ರಾಮ್ ವಿಲಾಸ್ ಪಾಸ್ವಾನ್ ಅವರ ಜೊತೆ ಚರ್ಚಿಸುವ ವೇಳೆ 2014 ರಿಂದ ಇಂದಿನವರೆಗೆ ರಾಜ್ಯಕ್ಕೆ ಬಿಡುಗಡೆಯಾಗಬೇಕಿದ್ದ ಬೆಂಬಲ ಬೆಲೆಯ 954 ಕೋಟಿ ರೂ. ಬಾಕಿ ಮೊತ್ತವನ್ನು ಬಿಡುಗಡೆ ಮಾಡಲು ಆದೇಶ ನೀಡಿದ್ದಾರೆ ಎಂದು ಸಿಎಂ ಕುಮಾರಸ್ವಾಮಿ ಮಾಹಿತಿ ನೀಡಿದರು.

ರಾಜ್ಯದಲ್ಲಿ 85ಲಕ್ಷ ಲೀಟರ್ ಹಾಲು ಉತ್ಪಾದನೆಯಾಗ್ತಿದೆ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೆಗಾಡೈರಿ ಸ್ಥಾಪಿಸಬೇಕೆನ್ನುವ ರಾಜ್ಯದ ಉದ್ದೇಶವನ್ನು ಮೆಚ್ಚಿಕೊಂಡ ಕೃಷಿ ಸಚಿವರಾದ ರಾಧಾ ಮೋಹನ್ ಸಿಂಗ್, ಇದಕ್ಕಾಗಿ 900 ಕೋಟಿ ರೂ. ಅನುದಾನ ಬಿಡುಗಡೆಗೆ ಸಮ್ಮತಿಸಿದ್ದಾರೆ. ಇದರಲ್ಲಿ ಹಾಸನ, ಕೋಲಾರ ಮತ್ತು ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮೆಗಾಡೈರಿಗಳನ್ನು ಸ್ಥಾಪಿಸಲಾಗುವುದು ಎಂದರು.

News Belgaum-2,500 ಕೋಟಿ ರೂ ಅನುದಾನ ಪಡೆದುಕೊಳ್ಳುವಲ್ಲಿ ತಮ್ಮ ಎರಡು ದಿನಗಳ ದೆಹಲಿ ಭೇಟಿ ಯಶಸ್ವಿಯಾಗಿದೆ 1
ರಾಜ್ಯದಲ್ಲಿ ಮಾರುಕಟ್ಟೆಗಳನ್ನು ಉನ್ನತೀಕರಿಸಲು ಅಗತ್ಯವಿರುವ ಅನುದಾನ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮಣ್ಣು ಪರೀಕ್ಷಾ ಕೇಂದ್ರಗಳ ಸ್ಥಾಪನೆ, ಆವರ್ತ ನಿಧಿ, ಬೆಂಬಲ ಬೆಲೆ ಹಾಗೂ ಅಡಿಕೆ ಮತ್ತು ತೆಂಗು ಬೆಳೆಗಾರರ ರಕ್ಷಣೆಗಾಗಿ ಅಗತ್ಯವಿರುವ ಕ್ರಮಗಳಿಗೆ ಅನುದಾನ ನೀಡುವ ಬಗ್ಗೆ ಕೃಷಿ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

News Belgaum-2,500 ಕೋಟಿ ರೂ ಅನುದಾನ ಪಡೆದುಕೊಳ್ಳುವಲ್ಲಿ ತಮ್ಮ ಎರಡು ದಿನಗಳ ದೆಹಲಿ ಭೇಟಿ ಯಶಸ್ವಿಯಾಗಿದೆ 2
ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿ ಸೇರಿದಂಥೆ ರಾಜ್ಯದ ಪ್ರಮುಖ ಹೆದ್ದಾರಿಗಳ ನಿರ್ಮಾಣಕ್ಕಿರುವ ಅಡಚಣೆಗಳನ್ನು ಸರ್ಕಾರ ನಿವಾರಿಸಿದೆ. ಈ ಹಿನ್ನೆಲೆ ಹೆದ್ದಾರಿ ಕಾಮಗಾರಿಗಳನ್ನು ತ್ವರಿತ ಪೂರ್ಣಗೊಳಿಸಿಕೊಡುವಂತೆ ಕೇಂದ್ರ ಭೂಸಾರಿಗೆ ಮತ್ತು ಜಲಸಂಪನ್ಮೂಲ ಸಚಿವರಿಗೆ ಮನವಿ ಮಾಡಿದ್ದು, ಅವರಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ. ಅಲ್ಲದೆ, ನದಿ ನೀರು ಹಂಚಿಕೆ ಪ್ರಾಧಿಕಾರ ಮತ್ತು ಮೇಕೆದಾಟು ವಿಷಯಗಳ ಬಗ್ಗೆಯೂ ಸಚಿವರೊಂದಿಗೆ ಚರ್ಚಿಸಿರುವುದಾಗಿ ತಿಳಿಸಿದರು.

ಮೆಟ್ರೋ ವಿಸ್ತರಣೆ ವೇಳೆ ನಿಲ್ದಾಣ ಕಾಮಗಾರಿಗಳ ಸಂದರ್ಭ ಕೆಲ ಪ್ರದೇಶದಲ್ಲಿ ಅದು ರಕ್ಷಣಾ ಇಲಾಖೆ ವ್ಯಾಪ್ತಿಗೆ ಒಳಪಡುತ್ತದೆ. ಈ ಬಗ್ಗೆ ಅವರಿಂದ ಅನುಮತಿ ಪಡೆದುಕೊಳ್ಳುವ ಸಂಬಂಧ ರಕ್ಷಣಾ ಸಚಿವರಾದ ನಿರ್ಮಲಾ ಸೀತಾರಾಮನ್ ಅವರ ಜೊತೆ ಚರ್ಚಿಸಿದ್ದು, ಅವರು ಅನುಮತಿ ಪಡೆದುಕೊಳ್ಳುವ ಸಂಬಂಧ ಅಗತ್ಯ ನೆರವು ನೀಡುವುದಾಗಿ ಹೇಳಿದ್ದಾರೆ ಎಂದರು.

News Belgaum-2,500 ಕೋಟಿ ರೂ ಅನುದಾನ ಪಡೆದುಕೊಳ್ಳುವಲ್ಲಿ ತಮ್ಮ ಎರಡು ದಿನಗಳ ದೆಹಲಿ ಭೇಟಿ ಯಶಸ್ವಿಯಾಗಿದೆ 3
ರಾಜ್ಯದಲ್ಲಿ ಹೊಸ ರೈಲು ಮಾರ್ಗಗಳನ್ನು ನಿರ್ಮಿಸಲು ಆದ್ಯತೆ ನೀಡುವಂತೆ ಕೇಂದ್ರ ರೈಲ್ವೆ ಮತ್ತು ಕಲ್ಲಿದ್ದಲು ಸಚಿವರಾದ ಪಿಯೂಷ್ ಗೋಯೆಲ್ ಅವರನ್ನು ಭೇಟಿ ಮಾಡಿ ಮನವರಿಕೆ ಮಾಡಿದ್ದು, ಈ ವೇಳೆ ಅವರಿಂದಲೂ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.