ಉತ್ತಮ ಸಮಾಜಕ್ಕಾಗಿ

ಜಲಯೋಗ ಈ ಬಾರಿಯ ಆಕರ್ಷಣೆ; 20ರಂದು ಜಾಗೃತಿ ಜಾಥಾ ಜೂ. 21 ರಂದು ಅಂತರ್‍ರಾಷ್ಟ್ರೀಯ ಯೋಗ ದಿನಾಚರಣೆ

Hydroelectricity this time; 20th awareness on Jatha Jr. International Yoga Day on 21st

0

ಬೆಳಗಾವಿ, (news belgaum)ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಅಂತರ್‍ರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21ರಂದು ನಗರದ ಗಾಂಧಿಭವನದಲ್ಲಿ ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಜಿಯಾವುಲ್ಲಾ ತಿಳಿಸಿದ್ದಾರೆ.
ವಿಶ್ವ ಯೋಗ ದಿನಾಚರಣೆ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ(ಜೂ.8) ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಜೂನ್ 21ರಂದು ಬೆಳಿಗ್ಗೆ 7 ರಿಂದ 8 ಗಂಟೆಯವರೆಗೆ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಒಂದು ಗಂಟೆಯ ಈ ಕಾರ್ಯಕ್ರಮದಲ್ಲಿ ಪ್ರಾರ್ಥನೆ, 19 ಬಗೆಯ ಆಸನಗಳ ಪ್ರದರ್ಶನ, ಪ್ರಾಣಾಯಾಮ, ಧ್ಯಾನ ನಡೆಯಲಿದೆ.
News Belgaum-ಜಲಯೋಗ ಈ ಬಾರಿಯ ಆಕರ್ಷಣೆ; 20ರಂದು ಜಾಗೃತಿ ಜಾಥಾ ಜೂ. 21 ರಂದು ಅಂತರ್‍ರಾಷ್ಟ್ರೀಯ ಯೋಗ ದಿನಾಚರಣೆ News Belgaum-ಜಲಯೋಗ ಈ ಬಾರಿಯ ಆಕರ್ಷಣೆ; 20ರಂದು ಜಾಗೃತಿ ಜಾಥಾ ಜೂ. 21 ರಂದು ಅಂತರ್‍ರಾಷ್ಟ್ರೀಯ ಯೋಗ ದಿನಾಚರಣೆ 1ಆರೋಗ್ಯದ ದೃಷ್ಟಿಯಿಂದ ಯೋಗವನ್ನು ಹೆಚ್ಚು ಪ್ರಸಿದ್ದೀಗೊಳಿಸುವ ಅಗತ್ಯವಿದೆ ಎಂದು ಪ್ರತಿಪಾದಿಸಿದ ಜಿಲ್ಲಾಧಿಕಾರಿಗಳು, ಯೋಗವನ್ನು ಜೀವನದ ಒಂದು ಭಾಗವನ್ನಾಗಿ ರೂಢಿಸಿಕೊಳ್ಳಬೇಕು. ಆದ್ದರಿಂದ ಯೋಗವನ್ನು ಒಂದು ದಿನಕ್ಕೆ ಸೀಮಿತಗೊಳಿಸದೇ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಜಿಲ್ಲೆಯ ಸಚಿವರು, ಶಾಸಕರು ಸೇರಿದಂತೆ ಜನಪ್ರತಿನಿಧಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುತ್ತದೆ.
ಅದೇ ರೀತಿ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿನಿಲಯದ ವಿದ್ಯಾರ್ಥಿಗಳು ಮತ್ತು ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳನ್ನು ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಕರೆದುಕೊಂಡು ಬರಬೇಕು ಎಂದು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಭಾಗವಹಿಸುವವರು ಬಿಳಿ ಉಡುಗೆಗಳನ್ನು ಧರಿಸಿ ಬರಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಅಂತರ್‍ರಾಷ್ಟ್ರೀಯ ಯೋಗ ಸಾಧಕರಿಗೆ ಹಾಗೂ ಅತ್ಯುತ್ತಮ ಯೋಗ ತರಬೇತುದಾರರಿಗೆ ಜಿಲ್ಲಾಡಳಿತದ ಪರವಾಗಿ ಸನ್ಮಾನಿಸಲು ತೀರ್ಮಾನಿಸಲಾಯಿತು.

ಜಲ ಯೋಗ:
ಅಂತರ್ ರಾಷ್ಟ್ರೀಯ ಯೋಗ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಬೇಕು ಎಂಬ ಉದ್ದೇಶದಿಂದ ಈ ಬಾರಿ ಜಿಲ್ಲಾಡಳಿತ ಹಾಗೂ ಈಜುಗಾರರ ಕ್ಲಬ್ ವತಿಯಿಂದ ಜಲಯೋಗ ಎಂಬ ಕಾರ್ಯಕ್ರಮವನ್ನು ಕೂಡ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿಯಾವುಲ್ಲಾ ತಿಳಿಸಿದರು.
ಜೂನ್ 21 ರಂದು ಸಂಜೆ 5 ರಿಂದ 6 ಗಂಟೆಯವರೆಗೆ ಜಿಲ್ಲಾ ಕ್ರೀಡಾಂಗಣದ ಸಮೀಪ ಇರುವ ಕೆಎಲ್‍ಇ ಸಂಸ್ಥೆಯ ಸುವರ್ಣ ಜೆಎನ್‍ಎಂಸಿ ಒಲಿಂಪಿಕ್ ಸ್ವಿಮ್ಮಿಂಗ್‍ಪೂಲ್ ನಲ್ಲಿ ಜಲಯೋಗ ನಡೆಯಲಿದೆ.
ಅಂತರ್‍ರಾಷ್ಟ್ರೀಯ ಖ್ಯಾತಿಯ ಈಜು ತರಬೇತುದಾರರಾದ ಉಮೇಶ್ ಕಲಘಟಗಿ ಅವರ ನೇತೃತ್ವದಲ್ಲಿ 40 ಜನರ ತಂಡವು ಜಲಯೋಗ ಪ್ರದರ್ಶನ ನೀಡಲಿದೆ.
ಈ ತಂಡದಲ್ಲಿ ವಿಶೇಷ ಚೇತನ ಅಂದರೆ ಕಿವುಡ- ಮೂಗ, ವಿಕಲಚೇತನ, ದೃಷ್ಟಿಹೀನ ಮಕ್ಕಳು ಇರುವುದು ಗಮನಾರ್ಹವಾಗಿದೆ.

ಜಾಗೃತಿ ಜಾಥಾ:
ಅಂತರ್‍ರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಒಂದು ದಿನ ಮುಂಚಿತವಾಗಿ ಜನರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಜೂನ್ 20 ರಂದು ಜಾಗೃತಿ ಜಾಥಾ ನಡೆಯಲಿದೆ ಎಂದು ಜಿಲ್ಲಾಧಿಕಾರಿ ವಿವರಿಸಿದರು.
ಅಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಆರಂಭಗೊಳ್ಳಲಿರುವ ಜಾಥಾ ಬೋಗಾರವೇಸ್ ವೃತ್ತದವರೆಗೆ ನಡೆಯಲಿದೆ.

ಯೋಗ ಸಂಘಟನೆಗಳ ಸದಸ್ಯರು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಆಯುಷ್ ಇಲಾಖೆಯ ಡಾ.ಶ್ರೀಕಾಂತ ಸುಣಧೋಳಿ ಸಭೆಯಲ್ಲಿ ವಿವರಿಸಿದರು.
ಜಿಲ್ಲಾಮಟ್ಟದಲ್ಲಿ ಜೂನ್ 21ರಂದು ಒಂದು ಕಾರ್ಯಕ್ರಮ ಅದೇ ರೀತಿ ಅಂದು ಜಿಲ್ಲೆಯಾದ್ಯಂತ ಆಯುಷ್ ಕೇಂದ್ರಗಳಲ್ಲಿ, ಯೋಗ ತರಬೇತಿ ಕೇಂದ್ರಗಳು ಮತ್ತು ಪ್ರಜಾಪಿತ ಬ್ರಹ್ಮಕುಮಾರಿ ಸೇವಾ ಕೇಂದ್ರಗಳು ಸೇರಿದಂತೆ ನೂರಾರು ಕಡೆ ಯೋಗ ದಿನಾಚರಣೆ ನಡೆಯಲಿದೆ ಎಂದು ಅವರು ಹೇಳಿದರು.
ಯೋಗ ದಿನಾಚರಣೆಯನ್ನು ಅಚ್ಚುಕಟ್ಟಾಗಿ ಆಚರಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್ ಅವರು ಸೂಚನೆ ನೀಡಿದರು.
ಡಿಸಿಪಿ ಸೀಮಾ ಲಾಟ್ಕರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಪ್ಪಾಸಾಬ್ ನರಟ್ಟಿ, ಜಿಲ್ಲಾ ಆಯುಷ್ ಅಧಿಕಾರಿ ಸುರೇಶ ದೊಡ್ಡವಾಡ, ಯೋಗ ತರಬೇತುದಾರರಾದ ಇಂದಿರಾ ಜೋಶಿ, ಪಲ್ಲವಿ ನಾಡಕರ್ಣಿ, ಪ್ರಜಾಪಿತ ಬ್ರಹ್ಮಕುಮಾರಿ ಸೇವಾಕೇಂದ್ರದ ಪ್ರತಿನಿಧಿಗಳು, ಆಯುಷ್ ಫೆಡರೇಷನ್, ಸಂಜೀವಿನಿ ಚಾರಿಟೇಬಲ್ ಟ್ರಸ್ಟ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.Hydroelectricity this time; 20th awareness on Jatha Jr. International Yoga Day on 21st

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.  

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.