ಉತ್ತಮ ಸಮಾಜಕ್ಕಾಗಿ

ಜಿಲ್ಲಾ ಬಿಕ್ಕಟ್ಟು ಪರಿಹಾರ ಸಮಿತಿ ಸಭೆ ‘ತುರ್ತು ಪ್ರತಿಕ್ರಿಯೆ ಕೇಂದ್ರ’ ಸ್ಥಾಪಿಸಲು ಸ್ಥಳ ಗುರುತಿಸಿ – ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ

Identify location to set up emergency response center - District Deputy Commissioner Jiaullah

0

ಬೆಳಗಾವಿ:(NEWS BELGAUM) ಜಿಲ್ಲೆಯಲ್ಲಿ ಹೊಸದಾಗಿ ‘ತುರ್ತು ಪ್ರತಿಕ್ರಿಯೆ ಕೇಂದ್ರ’ (ಎಮೆರ್ಜೆನ್ಸಿ ರೆಸ್‍ಪಾನ್ಸ್ ಸೆಂಟರ್) ವನ್ನು ಸ್ಥಾಪಿಸಲು ಸೂಕ್ತ ಸ್ಥಳವನ್ನು ಶೀಘ್ರದಲ್ಲೇ ಗುರುತಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ ಅವರು ಸೂಚನೆ ನೀಡಿದರು.
ಇಲ್ಲಿನ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಶುಕ್ರವಾರ (ಮಾ.9) ಏರ್ಪಡಿಸಿದ್ದ ಜಿಲ್ಲಾ ಬಿಕ್ಕಟ್ಟು ಪರಿಹಾರ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ಬಿಕ್ಕಟ್ಟು ಪರಿಹಾರ ಸಮಿತಿ ಸಭೆ ‘ತುರ್ತು ಪ್ರತಿಕ್ರಿಯೆ ಕೇಂದ್ರ’ ಸ್ಥಾಪಿಸಲು ಸ್ಥಳ ಗುರುತಿಸಿ - ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ- Tarun krantiಕೇಂದ್ರದ ಅರಣ್ಯ, ಪರಿಸರ ಮತ್ತು ಹವಾಮಾನ ಇಲಾಖೆಯು ತುರ್ತು ಪ್ರತಿಕ್ರಿಯೆ ಕೇಂದ್ರಗಳ ಅವಶ್ಯಕತೆಯ ಬಗ್ಗೆ ತಿಳಿಸಿದ್ದು, ಅದರನ್ವಯ ರಾಜ್ಯ ಸರ್ಕಾರ ಕಾರ್ಖಾನೆಗಳು ಅಸ್ತಿತ್ವದಲ್ಲಿರುವ ಜಿಲ್ಲೆಗಳಲ್ಲಿ ಹೊಸ ತುರ್ತು ಪ್ರತಿಕ್ರಿಯೆ ಕೇಂದ್ರ (ಇ.ಆರ್.ಸಿ) ಗಳನ್ನು ಸ್ಥಾಪಿಸುವಂತೆ ಸೂಚಿಸಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಜಿಲ್ಲೆಯಲ್ಲಿ ಶೀಘ್ರವಾಗಿ ಸ್ಥಳವನ್ನು ಗುರುತಿಸಿ, ತುರ್ತು ಪ್ರತಿಕ್ರಿಯೆ ಕೇಂದ್ರವನ್ನು ನಿರ್ಮಿಸಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿರುವ ಅತಿ ಅಪಾಯಕಾರಿ ಕಾರ್ಖಾನೆಗಳಲ್ಲಿ ಪ್ರಥಮ ಚಿಕಿತ್ಸೆ, ವೈದ್ಯಕೀಯ ಸೌಲಭ್ಯ, ಮುನ್ನೆಚ್ಚರಿಕಾ ಕ್ರಮಗಳು ಸೇರಿದಂತೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.
ಕಾರ್ಖಾನೆಗಳಲ್ಲಿರುವ ಸುರಕ್ಷತಾ ಸಾಧನಗಳನ್ನು ಆಗಾಗ ಪ್ರಾಯೋಗಿಕವಾಗಿ ಪರೀಕ್ಷಿಸಬೇಕು. ಪ್ರತಿ ಆರು ತಿಂಗಳಿಗೊಮ್ಮೆ ಕಾರ್ಖಾನೆಗಳ ಹತ್ತಿರದ ಗ್ರಾಮಗಳಲ್ಲಿ ಕಾರ್ಖಾನೆಗಳಲ್ಲಿ ಅನಾಹುತ ಸಂಭವಿಸಿದರೆ ಕೈಗೊಳ್ಳಬೇಕಾದ ಸುರಕ್ಷತೆಯ ಬಗ್ಗೆ ಪ್ರಾತ್ಯಕ್ಷಿಕೆಯ ಮೂಲಕ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಅನಾಹುತಗಳು ಸಂಭವಿಸಿದರೆ ಸಾರ್ವಜನಿಕರು ಶೀಘ್ರವಾಗಿ ತುರ್ತು ಪ್ರತಿಕ್ರಿಯೆ ಕೇಂದ್ರಕ್ಕೆ ಮಾಹಿತಿ ನೀಡಲು ಅನುಕೂಲವಾಗುವಂತೆ ಸಹಾಯವಾಣಿ ಸಂಖ್ಯೆಯನ್ನು ಸ್ಥಾಪಿಸಿ, ಜನರಿಗೆ ತಲುಪುವ ಹಾಗೆ ಪ್ರಚಾರ ಮಾಡಬೇಕು ಎಂದು ಸೂಚಿಸಿದರು.
ಬೆಳಗಾವಿ ವಿಭಾಗದ ಕಾರ್ಖಾನೆಗಳ ಉಪನಿರ್ದೇಶಕರಾದ ರವೀಂದ್ರನಾಥ ರಾಠೋಡ ಅವರು ಮಾತನಾಡಿ, ಜಿಲ್ಲೆಯಲ್ಲಿ ಐದು ಅತಿ ಅಪಾಯಕಾರಿ ಕಾರ್ಖಾನೆಗಳಿವೆ. ಬೆಳಗಾವಿ ತಾಲೂಕಿನ ದೇಸೂರು ಗ್ರಾಮದ ಸಮೀಪ ಮೂರು ಕಾರ್ಖಾನೆಗಳು, ಹೊನಗಾ ಗ್ರಾಮದಲ್ಲಿ ಒಂದು ಕಾರ್ಖಾನೆ ಹಾಗೂ ಹುಕ್ಕೇರಿ ತಾಲೂಕಿನ ಕಣಗಲಾ ಗ್ರಾಮದಲ್ಲಿ ಒಂದು ಅತಿ ಅಪಾಯಕಾರಿ ಕಾರ್ಖಾನೆಗಳಿವೆ ಎಂದು ತಿಳಿಸಿದರು.

ಈ ಎಲ್ಲ ಕಾರ್ಖಾನೆಗಳಲ್ಲಿ ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಾರ್ಖಾನೆಗಳಲ್ಲಿ ಹಾಗೂ ಸಮೀಪದ ಗ್ರಾಮಗಳಲ್ಲಿ ಸುರಕ್ಷತೆಯ ಕುರಿತು ಆಗಾಗ ಅಣಕು ಪ್ರದರ್ಶನವನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.
ಜಿಲ್ಲಾ ಆರೋಗ್ಯಾಧಿಕಾರಿ ಅಪ್ಪಾಸಾಹೇಬ ನರಹಟ್ಟಿ, ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಿ ಶಶಿಧರ ನಾಡಗೌಡ, ಅಗ್ನಿಶಾಮಕ ದಳದ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.