ಉತ್ತಮ ಸಮಾಜಕ್ಕಾಗಿ

ಅಕ್ರಮ ಮದ್ಯ, ಹಣ ಸಾಗಾಣಿಕೆ: ಜಂಟಿ ಕಾರ್ಯಾಚರಣೆಗೆ ಸೂಚನೆ

Illegal alcohol and money transfers: Notice for joint operation

0

ವಿಧಾನಸಭೆ ಚುನಾವಣೆ: ಮೂರು ರಾಜ್ಯಗಳ ಅಧಿಕಾರಿಗಳ ಸಭೆ
News Belgaum-ವಿಧಾನಸಭೆ ಚುನಾವಣೆ: ಮೂರು ರಾಜ್ಯಗಳ ಅಧಿಕಾರಿಗಳ ಸಭೆಬೆಳಗಾವಿ:(news belagavi) “ಚುನಾವಣೆ ಸಂದರ್ಭದಲ್ಲಿ ಅಕ್ರಮವಾಗಿ ಹಣ, ಮದ್ಯ ಮತ್ತಿತರ ವಸ್ತುಗಳ ಸಾಗಾಣಿಕೆ ತಡೆಗಟ್ಟಲು ಅಂತರರಾಜ್ಯ ಗಡಿಗಳಲ್ಲಿರುವ ಚೆಕ್‍ಪೋಸ್ಟ್‍ಗಳಲ್ಲಿ ತೀವ್ರ ತಪಾಸಣೆ ನಡೆಸಬೇಕು. ಅಗತ್ಯಬಿದ್ದರೆ ಜಂಟಿ ಕಾರ್ಯಾಚರಣೆ ನಡೆಸಬೇಕು” ಎಂದು ಜಿಲ್ಲಾ ಚುನಾವಣಾಧಿಕಾರಿ ಎಸ್.ಜಿಯಾವುಲ್ಲಾ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ(ಮಾ.31) ನಡೆದ ಅಂತರರಾಜ್ಯ ಪೊಲೀಸ್ ಹಾಗೂ ಅಬಕಾರಿ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಕ್ರಮ ಮದ್ಯ ಸಂಗ್ರಹ ಅಥವಾ ಸಾಗಾಣಿಕೆ ಕಂಡುಬಂದರೆ ಯಾವುದೇ ಒತ್ತಡಕ್ಕೆ ಮಣಿಯದೇ ತಕ್ಷಣವೇ ಜಪ್ತಿ ಮಾಡಬೇಕು ಎಂದು ಹೇಳಿದರು.
ಚುನಾವಣೆ ಹಿನ್ನೆಲೆಯಲ್ಲಿ ಮದ್ಯ ಹಾಗೂ ಹಣದ ಸಾಗಾಣಿಕೆ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತದೆ. ಆದ್ದರಿಂದ ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳ ಪೊಲೀಸ್ ಹಾಗೂ ಅಬಕಾರಿ ಇಲಾಖೆಯವರು ಜಂಟಿಯಾಗಿ ಕಾರ್ಯಾಚರಣೆ ನಡೆಸಬೇಕು ಎಂದು ಹೇಳಿದರು.
ನೆರೆಯ ರಾಜ್ಯದ ಅಕ್ಕಪಕ್ಕದ ಜಿಲ್ಲೆಗಳ ಅಧಿಕಾರಿಗಳ ಜತೆ ನಿರಂತರ ಸಂಪರ್ಕ ಇಟ್ಟುಕೊಂಡು ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ವಿನಿಮಯ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಕಳೆದ ಎರಡು ದಿನಗಳಿಂದ ಕುಗನೊಳ್ಳಿ ಚೆಕ್‍ಪೋಸ್ಟ್‍ನಲ್ಲಿ ಲಕ್ಷಾಂತರ ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದ್ದು, ಈ ಬಗ್ಗೆ ನಿಗಾ ವಹಿಸುವಂತೆ ಕೊಲ್ಲಾಪುರದ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದರು.
ಇದೇ ವೇಳೆ ಮಾತನಾಡಿದ ಮಹಾರಾಷ್ಟ್ರದ ಅಬಕಾರಿ ಇಲಾಖೆಯ ಅಧಿಕಾರಿಗಳು, ಅಂಬೋಲಿ-ಬೆಳಗಾವಿ-ಕೊಲ್ಲಾಪುರ ಹೀಗೆ ಮದ್ಯ ಸಾಗಾಣಿಕೆ ಕಂಡುಬಂದಿದ್ದು, ಇದನ್ನು ತಡೆಗಟ್ಟಲು ಈಗಾಗಲೇ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.

ಸಿಸಿಟಿವಿ ಅಳವಡಿಕೆಗೆ ಸೂಚನೆ:
ಅಂತರರಾಜ್ಯ ಗಡಿಯಲ್ಲಿರುವ ಎಲ್ಲ ಚೆಕ್‍ಪೋಸ್ಟ್‍ಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸುವಂತೆ ಜಿಲ್ಲಾ ಚುನಾವಣಾಧಿಕಾರಿ ಜಿಯಾವುಲ್ಲಾ ಸೂಚನೆ ನೀಡಿದರು.
ಅದೇ ರೀತಿ ನೆರೆಯ ರಾಜ್ಯದ ವ್ಯಾಪ್ತಿಯಲ್ಲಿರುವ ಗಡಿಭಾಗದ ಚೆಕ್‍ಪೋಸ್ಟ್‍ಗಳಲ್ಲೂ ಸಿಸಿಟಿವಿ ಅಳವಡಿಕೆ ಸಿಬ್ಬಂದಿ ನಿಯೋಜನೆಗೆ ಕ್ರಮವಹಿಸುವಂತೆ ತಿಳಿಸಿದರು.
ಕಳೆದ ಚುನಾವಣೆ ಸಂದರ್ಭದಲ್ಲಿ ಮದ್ಯ ಸಾಗಾಣಿಕೆ ಅಥವಾ ಸಂಗ್ರಹ ಪ್ರಮಾಣ ಹೆಚ್ಚಾಗಿ ಕಂಡುಬಂದಿರುವ ಸ್ಥಳಗಳ ಮೇಲೆ ಹೆಚ್ಚಿನ ನಿಗಾ ವಹಿಸಬೇಕು. ನಿರಂತರ ತಪಾಸಣೆ ಮೂಲಕ ಅಕ್ರಮ ಮದ್ಯ ಸಂಗ್ರಹಣೆಯನ್ನು ಜಪ್ತಿ ಮಾಡುವಂತೆ ಅಬಕಾರಿ ಉಪ ಆಯುಕ್ತ ಅರುಣಕುಮಾರ್ ಅವರಿಗೆ ತಿಳಿಸಿದರು.
ಗಡಿಭಾಗಕ್ಕೆ ಹೊಂದಿಕೊಂಡಿರುವ ಚಿಕ್ಕೋಡಿ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಆಗಾಗ ಪರಿಶೀಲನೆ ಕೈಗೊಳ್ಳುವಂತೆ ಸಲಹೆ ನೀಡಿದರು.
ಮೂರು ರಾಜ್ಯಗಳ ಪೊಲೀಸ್ ಹಾಗೂ ಅಬಕಾರಿ ಇಲಾಖೆಯವರು ಪರಸ್ಪರ ಮಾಹಿತಿ ವಿನಿಮಯ ಮಾಡಿಕೊಂಡು ಅಗತ್ಯಬಿದ್ದರೆ ಜಂಟಿ ಕಾರ್ಯಾಚರಣೆ ನಡೆಸುವಂತೆ ಸೂಚನೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರಕುಮಾರ್ ರೆಡ್ಡಿ ಅವರು ಪೊಲೀಸ್ ಇಲಾಖೆಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ವಿನಿಮಯ ಮಾಡಿಕೊಂಡರು.
ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಡಿ.ಸಿ.ರಾಜಪ್ಪ, ಅಪರ ಜಿಲ್ಲಾಧಿಕಾರಿ ಡಾ.ಎಚ್.ಬಿ.ಬೂದೆಪ್ಪ, ಅಬಕಾರಿ ಉಪ ಆಯುಕ್ತ ಅರುಣಕುಮಾರ್, ಸಾಂಗ್ಲಿ ಜಿಲ್ಲೆಯ ಜಿಲ್ಲಾಧಿಕಾರಿಗಳ ಪರವಾಗಿ ಎಂ.ಜಿ.ಮುಲ್ಲಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಶಿಕಾಂತ ಬೋರ್ಡೆ, ಕೊಲ್ಲಾಪುರದ ಇನ್ಸಪೆಕ್ಟರ್ ಎಲ್.ಎಂ.ಶಿಂಧೆ, ಸಿಂಧದುರ್ಗ ಜಿಲ್ಲೆಯ ಸಾವಂತವಾಡಿ ಡಿವೈಎಸ್‍ಪಿ ಡಿ.ಡಿ.ಗವಾಸ್ ಮತ್ತಿತರರು ಉಪಸ್ಥಿತರಿದ್ದರು.Illegal alcohol and money transfers: Notice for joint operation

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.