ಉತ್ತಮ ಸಮಾಜಕ್ಕಾಗಿ

In the publication,ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

In the publication,

0

ಫೆ. 24 ರಂದು ಉದ್ಯೋಗ ಮೇಳ
ಬೆಳಗಾವಿ: (tarun kranti) ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಬೆಳಗಾವಿ ವತಿಯಿಂದ ಫೆಬ್ರುವರಿ 24 ರಂದು ಮುಂಜಾನೆ 10 ರಿಂದ ಮಧ್ಯಾಹ್ನ 3 ಗಂಟೆಗಳವರೆಗೆ ಬಾವುರಾವ್ ಕಾಕತ್ಕರ್ ಕಾಲೇಜ್, ಜ್ಯೋತಿ ಕಾಲೇಜ್ ಕಂಪೌಂಡ್, ಕ್ಲಬ್ ರೋಡ್, ಕ್ಯಾಂಪ್, ಬೆಳಗಾವಿ ಇಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.
ಎಸ್.ಎಸ್.ಎಲ್.ಸಿ. ಉತ್ತೀರ್ಣ, ಪಿಯುಸಿ, ಐಟಿಐ, ಡಿಪ್ಲೋಮಾ, ನರ್ಸಿಂಗ್ ಹಾಗೂ ಯಾವುದೇ ಡಿಗ್ರಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗಾಗಿ ಈ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಸದರಿ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿವೆ.
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಳಿಗಾಗಿ ಈ ಕಛೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 9743166178 ಸಂಪರ್ಕಿಸಲು ಸಹಾಯಕ ನಿರ್ದೇಶಕರು, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಬೆಳಗಾವಿ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.In the publication,

ಫೆ 18 ರಂದು ವಸತಿ ಶಾಲೆಗಳ ಪ್ರವೇಶ ಪರೀಕ್ಷೆ
ಬೆಳಗಾವಿ: 2018-19ನೇ ಸಾಲಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರ ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ್(ಸಹ ಶಿಕ್ಷಣ), ಡಾ.ಬಿ.ಆರ್.ಅಂಬೇಡ್ಕರ್(ಬಾಲಕಿಯರ), ಶ್ರೀಮತಿ ಇಂದಿರಾ ಗಾಂಧಿ, ಸಂಗೊಳ್ಳಿ ರಾಯಣ್ಣ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕಾಗಿ ರಾಜ್ಯಾದ್ಯಂತ ಏಕಕಾಲದಲ್ಲಿ ಫೆಬ್ರುವರಿ 18 ರಂದು ಬೆಳಿಗ್ಗೆ 11 ರಿಂದ 1 ಗಂಟೆಯ ವರೆಗೆ ಪ್ರವೇಶ ಪರೀಕ್ಷೆಯನ್ನು ಶಿಕ್ಷಣ ಇಲಾಖೆಯ ಎಸ್.ಎಸ್.ಎಲ್.ಸಿ ಬೋರ್ಡನ ಏSಕಿಂಂಅ ಬೆಂಗಳೂರು ಇವರಿಂದ ನಡೆಸಲಾಗುವುದು.
ಈ ಸಂಬಂಧ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಪ್ರವೇಶ ಪತ್ರವನ್ನು ಸಂಬಂಧಿಸಿದ ವಸತಿ ಶಾಲೆಯ ಪ್ರಾಂಶುಪಾಲರು ಉಚಿತವಾಗಿ ವಿತರಿಸಿರುತ್ತಾರೆ. ಪೋಷಕರು ಪ್ರವೇಶ ಪತ್ರವನ್ನು ಸ್ವೀಕರಿಸಿ ಪರೀಕ್ಷೆಗೆ ಮಕ್ಕಳು ಹಾಜರಾಗುವಂತೆ ಬೆಳಗಾವಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.In the publication,

ಅಬಕಾರಿ ಉಪ ನಿರೀಕ್ಷಕರ ಹುದ್ದೆ; ದೈಹಿಕ ಸಾಮಥ್ರ್ಯ ಪರೀಕ್ಷೆ
ಬೆಳಗಾವಿ:  ಕರ್ನಾಟಕ ಲೋಕಸೇವಾ ಆಯೋಗವು, ಅಬಕಾರಿ ಉಪ ನಿರೀಕ್ಷಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು 1:5 ರಂತೆ ದೈಹಿಕ ಸಾಮಥ್ರ್ಯ ಪರೀಕ್ಷೆಗೆ ಆಯ್ಕೆ ಮಾಡಿದ್ದು, ಅದರಂತೆ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 88 ಅಭ್ಯರ್ಥಿಗಳು ಆಯ್ಕೆ ಆಗಿರುತ್ತಾರೆ. ಸದರಿ ಅಭ್ಯರ್ಥಿಗಳ ದೈಹಿಕ ಸಾಮಥ್ರ್ಯ ಪರೀಕ್ಷೆಯನ್ನು ಫೆಬ್ರುವರಿ 23 ಮತ್ತು 24 ರಂದು ಜಿಲ್ಲಾ ಕ್ರೀಡಾಂಗಣ, ಕೆ.ಎಲ್.ಇ. ಆಸ್ಪತ್ರೆ ಹತ್ರಿರ, ನೆಹರು ನಗರ, ಬೆಳಗಾವಿಯಲ್ಲಿ ಜರುಗಿಸಲಾಗುವುದು.
ಈಗಾಗಲೇ ಎಲ್ಲ ಅಭ್ಯರ್ಥಿಗಳಿಗೆ ವೈಯಕ್ತಿಕವಾಗಿ ಆರ್.ಪಿ.ಎ.ಡಿ. ಪೋಸ್ಟ್ ಮುಖಾಂತರ ದೈಹಿಕ ಪರೀಕ್ಷೆ ಕರೆ ಪತ್ರಗಳನ್ನು ರವಾನಿಸಲಾಗಿದೆ.
ದೈಹಿಕ ಪರೀಕ್ಷೆಗೆ ಆಯ್ಕೆಯಾದ ಅಭ್ಯರ್ಥಿಗಳು ಅಬಕಾರಿ ಉಪ ಆಯುಕ್ತರ ಕಛೇರಿ, ಅಬಕಾರಿ ಭವನ, ಓಲ್ಡ್ ಪಿ.ಬಿ. ರೋಡ್, ಬೆಳಗಾವಿ (ದೂರವಾಣಿ ಸಂ.0831-2470838) ಈ ಕಛೇರಿಗೆ ಖುದ್ದಾಗಿ ಭೇಟಿ ನೀಡಿ ಹೆಚ್ಚಿನ ವಿವರಗಳನ್ನು ಪಡೆಯಬಹುದಾಗಿದೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.In the publication,

ಫೆ.19 ರಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ
ಬೆಳಗಾವಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ “ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಸಮಾರಂಭ”ವನ್ನು ಫೆಬ್ರವರಿ 19 ರಂದು ಸಂಜೆ 5:30ಕ್ಕೆ ನಗರದ ಶಿವಾಜಿ ಉದ್ಯಾನವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೊಳಿ ಅವರು ಉದ್ಘಾಟಿಸುವರು. ಕೇಂದ್ರ ಸರ್ಕಾರದ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮ ಶೀಲತೆ ರಾಜ್ಯ ಸಚಿವರಾದ ಅನಂತಕುಮಾರ ಹೆಗಡೆ, ಸÀರ್ಕಾರದ ಮುಖ್ಯ ಸಚೇತಕರಾದ ಅಶೋಕ ಪಟ್ಟಣ, ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿಗಳಾದ ಗಣೇಶ ಹುಕ್ಕೇರಿ ವಿಶೇಷ ಆಮಂತ್ರಿತರಾಗಿ ಭಾಗವಹಿಸುವರು.

ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಸಂಭಾಜಿ ಪಾಟೀಲ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲೆಯ ಎಲ್ಲ ಸಂಸತ್ ಸದಸ್ಯರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಹಾನಗರ ಪಾಲಿಕೆ ಮಹಾಪೌರರು, ಜಿಲ್ಲಾ ಪಂಚಾಯತ ಅಧ್ಯಕ್ಷರು ಹಾಗೂ ಇನ್ನಿತರ ಗಣ್ಯರು ಪಾಲ್ಗೊಳ್ಳುವರು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಫೆ.19 ರಂದು ಬೆಳಿಗ್ಗೆ 9:30ಕ್ಕೆ ನಗರದ ಶಿವಾಜಿ ಉದ್ಯಾನವನದಿಂದ ನಾಥಪೈ ವೃತ್ತದವರೆಗೆ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರದ ಮೆರವಣಿಗೆ ಜರುಗಲಿದೆ.In the publication,

Leave A Reply

 Click this button or press Ctrl+G to toggle between Kannada and English

Your email address will not be published.