ಉತ್ತಮ ಸಮಾಜಕ್ಕಾಗಿ

ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

In the publication.

0

ರಾಷ್ಟ್ರೀಯ ಮತದಾರರ ದಿನಾಚರಣೆ; ಪತ್ರಿಜ್ಞಾ ವಿಧಿ
ಬೆಳಗಾವಿ: (tarun kranti)ಪತ್ರಿ ವರ್ಷದಂತೆ ಜನವರಿ 25 ರಂದು “ರಾಷ್ಟ್ರೀಯ ಮತದಾರರ ದಿನಾಚರಣೆ”ಯನ್ನು ಆಚರಿಸುವಂತೆ ಸೂಚಿಸಲಾಗಿತ್ತು. ಸದರಿ ದಿನದಂದು ಮಹದಾಯಿ ನದಿಯ ನೀರಿನ ವಿಷಯವಾಗಿ ವಿವಿಧ ಸಂಘಟನೆಗಳು ಬಂದ ಕರೆ ನೀಡಿದ್ದರ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಜನವರಿ 27 ರಂದು ಆಚರಿಸುವಂತೆ ಮುಖ್ಯ ಚುನಾವಣಾಧಿಕಾರಿಗಳು ನಿರ್ದೇಶಿಸಿರುತ್ತಾರೆ.
ಜನವರಿ 27 ರಂದು ಮುಂಜಾನೆ 11-30 ಗಂಟೆಗೆ ಎಲ್ಲ ಸರಕಾರಿ ಇಲಾಖೆಗಳ ಮುಖ್ಯಸ್ಥರು ತಮ್ಮ ಇಲಾಖೆಯ ಸಿಬ್ಬಂದಿಗಳೊಂದಿಗೆ ಮತದಾರ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿ “ರಾಷ್ಟ್ರೀಯ ಮತದಾರರ ದಿನಾಚರಣೆ” ಆಚರಿಸುವಂತೆ ಬೆಳಗಾವಿ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜ.27 ರಂದು ರಾಷ್ಟ್ರೀಯ ಮತದಾರರ ದಿನಾಚರಣೆ
ಬೆಳಗಾವಿ:  ಭಾರತ ಚುನಾವಣಾ ಆಯೋಗದ ವತಿಯಿಂದ ಜನವರಿ 27 ರಂದು ಮುಂಜಾನೆ 10 ಗಂಟೆಗೆ “ರಾಷ್ಟ್ರೀಯ ಮತದಾರರ ದಿನಾಚರಣೆ”ಯನ್ನು ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.
ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಪಿ.ಎ. ಮೇಘಣ್ಣವರ, ಉತ್ತರ ವಲಯ ಆರಕ್ಷಕ ಮಹಾನಿರೀಕ್ಷಕರಾದ ಅಲೋಕ ಕುಮಾರ, ಜಿಲ್ಲಾ ಪ್ರಧಾನ ಮತ್ತು ಸತ್ರನ್ಯಾಯಾಧೀಶರಾದ ಸತೀಶ್ ಸಿಂಗ್ ಹಾಗೂ ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಡಾ. ಡಿ.ಸಿ ರಾಜಪ್ಪ ಅವರು ಕಾರ್ಯಕ್ರಮದಲ್ಲಿ ಮಖ್ಯ ಅತಿಥಿಗಳಾಗಿ ಭಾಗವಹಿಸುವರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿಗಳಾದ ಎಸ್.ಜಿಯಾವುಲ್ಲಾ ಅವರು ವಹಿಸುವರು.

ಮಾನವ ಸರಪಳಿ ಮತ್ತು ಜಾಥಾ:
ಜನವರಿ 27 ರಂದು ಬೆಳಿಗ್ಗೆ 9 ಗಂಟೆಗೆ ಚನ್ನಮ್ಮ ವೃತ್ತದಿಂದ ಕುಮಾರ ಗಂಧರ್ವ ರಂಗಮಂದಿರದವರೆಗೆ ಮಾನವ ಸರಪಳಿ ಹಾಗೂ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಖಾಸಗಿ ಶಿಕ್ಷಣ ಸಂಸ್ಥೆ-ಟ್ರಸ್ಟ್‍ಗಳಿಂದ ಅರ್ಜಿ ಆಹ್ವಾನ
ಬೆಳಗಾವಿ: (belgaum news) 2018-19ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದಲ್ಲಿ ಖಾಸಗಿ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಇಚ್ಛಿಸುವ ಅರ್ಹ ಖಾಸಗಿ ಶಿಕ್ಷಣ ಸಂಸ್ಥೆ ಹಾಗೂ ಟ್ರಸ್ಟ್‍ಗಳಿಂದ ಅರ್ಜಿಗಳನ್ನು ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಇಲಾಖೆಯ ವೆಬ್‍ಸೈಟ್ www.pue.kar.nic.inನಲ್ಲಿ ಸಲ್ಲಿಸಲು ಜನವರಿ 31 ರೊಳಗಾಗಿ ಹೆಸರು ನೋಂದಾಯಿಸಿಕೊಳ್ಳಲು ಬೆಂಗಳೂರು (ಮಾನ್ಯತೆ ಮತ್ತು ಅನುದಾನ), ಪದವಿ ಪೂರ್ವ ಶಿಕ್ಷಣ ನಿರ್ದೇಶನಾಲಯ, ಜಂಟಿ ನಿರ್ದೇಶಕರಿಗೆ ಅರ್ಜಿಗಳನ್ನು ಸಲ್ಲಿಸಬೇಕು.
ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು 2016-17 ಮತ್ತು 2017-18ನೇ ಶೈಕ್ಷಣಿಕ ಸಾಲಿನಲ್ಲಿ ಅರ್ಜಿ ಶುಲ್ಕವನ್ನು ಪಾವತಿಸಿ ಈ ಕಚೇರಿಗೆ ಅರ್ಜಿ ಸಲ್ಲಿಸಿರುವ ಖಾಸಗಿ ಸಂಸ್ಥೆ ಹಾಗೂ ಟ್ರಸ್ಟ್‍ಗಳು, ಪುನಃ ಹೊಸದಾಗಿ 2018-19ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ ಪೂರ್ವ ಕಾಲೇಜನ್ನು ಪ್ರಾರಂಭಿಸಲು ಮತ್ತೊಮ್ಮೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹಾಗೂ ಅರ್ಜಿ ಶುಲ್ಕ ಪಾವತಿಸುವ ಅವಶ್ಯಕತೆ ಇರುವುದಿಲ್ಲ. ಇಂತಹ ಸಂಸ್ಥೆಗಳು 2018-19ನೇ ಶೈಕ್ಷಣಿಕ ಸಾಲಿನಲ್ಲಿ ಖಾಸಗಿ ಅನುದಾನರಹಿತ ಪದವಿ ಪೂರ್ವ ಕಾಲೇಜನ್ನು ಪ್ರಾರಂಭಿಸಲು ಇಚ್ಛಿಸಿದ್ದಲ್ಲಿ ಎಲ್ಲಾ ಸಿದ್ದತೆ ಮಾಡಿಕೊಂಡಿರುವ ಬಗ್ಗೆ ಪ್ರಸ್ತುತ ಸಾಲಿನ ವೇಳಾಪಟ್ಟಿಯಂತೆ ಈ ಕಚೇರಿಗೆ ಮನವಿಯನ್ನು ಸಲ್ಲಿಸಬಹುದೆಂದು ಬೆಳಗಾವಿ ಪದವಿ ಪೂರ್ವ ಶಿಕ್ಷಣ ಇಲಾಖೆ, ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

In the publication.

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: