ಉತ್ತಮ ಸಮಾಜಕ್ಕಾಗಿ

ಅಂತಿಮ ಮತದಾರರ ಪಟ್ಟಿ ಪ್ರಕಟ; 45,254 ಮತದಾರರ ಹೆಚ್ಚಳ ಹೆಸರು ಸೇರ್ಪಡೆಗೆ ಇನ್ನೂ ಅವಕಾಶ: ಜಿಲ್ಲಾಧಿಕಾರಿ

Increase chance of adding 45,254 voters' name:

0

ಬೆಳಗಾವಿ,(news belgaum) ಮುಂಬರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ ಮತದಾರರ ಅಂತಿಮ ಪಟ್ಟಿಯನ್ನು ಜಿಲ್ಲಾಧಿಕಾರಿ ಎಸ್.ಜಿಯಾವುಲ್ಲಾ ಅವರು ಪ್ರಕಟಿಸಿದ್ದಾರೆ.
ಮತದಾರರ ಅಂತಿಮ ಪಟ್ಟಿ ಬಿಡುಗಡೆಯ ನಂತರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಒಟ್ಟು 18 ವಿಧಾನಸಭಾ ಕ್ಷೇತ್ರಗಳಿದ್ದು, 28-02-2018ರಂದು ಪ್ರಕಟಿಸಿದ ಮತದಾರರ ಅಂತಿಮ ಪಟ್ಟಿಯಲ್ಲಿ ಒಟ್ಟು 36,57,541 ಮತದಾರರಿದ್ದಾರೆ ಎಂದು ಹೇಳಿದರು.
36,57,541 ಮತದಾರರ ಪೈಕಿ 18,54,485 ಪುರುಷ ಮತದಾರರು ಹಾಗೂ 18,03,056 ಮಹಿಳಾ ಮತದಾರರಿದ್ದಾರೆ. ಒಟ್ಟಾರೆ ಜಿಲ್ಲೆಯಾದ್ಯಂತ 4408 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.

45,254 ಮತದಾರರ ಹೆಚ್ಚಳ:ಅಂತಿಮ ಮತದಾರರ ಪಟ್ಟಿ ಪ್ರಕಟ; 45,254 ಮತದಾರರ ಹೆಚ್ಚಳ ಹೆಸರು ಸೇರ್ಪಡೆಗೆ ಇನ್ನೂ ಅವಕಾಶ: ಜಿಲ್ಲಾಧಿಕಾರಿ- Tarun kranti
ಮತದಾರರ ಪಟ್ಟಿಯ ಪರಿಷ್ಕರಣೆಯ ಸಂದರ್ಭದಲ್ಲಿ ಅಂದರೆ 30-11-2017ರ ನಂತರ ಜಿಲ್ಲೆಯಲ್ಲಿ ಒಟ್ಟಾರೆ 1,08,584 ಮತದಾರರು ಸೇರ್ಪಡೆಯಾಗಿದ್ದಾರೆ. ಅದೇ ರೀತಿ ಪರಿಷ್ಕರಣೆ ವೇಳೆ 63,330 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕಡಿಮೆ ಮಾಡಲಾಗಿದೆ.
ಪರಿಷ್ಕರಣೆಯ ವೇಳೆ ನಡೆದ ಸೇರ್ಪಡೆ ಹಾಗೂ ಕಡಿಮೆ ಮಾಡುವ ಪ್ರಕ್ರಿಯೆ ನಂತರ ಒಟ್ಟಾರೆ 45,254 ಮತದಾರರ ಸಂಖ್ಯೆ ಹೆಚ್ಚಳವಾಗಿದೆ ಎಂದು ಜಿಲ್ಲಾಧಿಕಾರಿಗಳು ವಿವರಿಸಿದರು.
ಅಂತಿಮ ಮತದಾರರ ಪಟ್ಟಿಯು ಸಂಬಂಧಿತ ತಾಲ್ಲೂಕು ಕಚೇರಿಯಲ್ಲಿ, ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಲಭ್ಯವಿರುತ್ತವೆ.
ಅದೇ ರೀತಿ ಬೆಳಗಾವಿ(ಉತ್ತರ) ಹಾಗೂ ಬೆಳಗಾವಿ (ದಕ್ಷಿಣ) ಮತದಾರರ ಪಟ್ಟಿಗಳು ಬೆಳಗಾವಿಯ ಮಹಾನಗರ ಪಾಲಿಕೆಯ ಹಳೆಯ ಕಟ್ಟದಲ್ಲಿರುವ ಕಚೇರಿಯಲ್ಲಿ ಮತದಾರರ ಪರಿಶೀಲನೆ ಲಭ್ಯವಿರುತ್ತವೆ.
ಮತದಾರರ ಪಟ್ಟಿಯಲ್ಲಿ ಹೊಸದಾಗಿ ಹೆಸರು ಸೇರ್ಪಡೆಗೆ ಇನ್ನೂ ಅವಕಾಶವಿದ್ದು, ಚುನಾವಣೆ ಘೋಷಣೆಯಾಗಿ ನಾಮಪತ್ರ ಸಲ್ಲಿಸಲು ನಿಗದಿಪಡಿಸಿರುವ ಕಡೆಯ ದಿನಾಂಕಕ್ಕಿಂತ ಹತ್ತು ದಿನಗಳ ಮುಂಚೆವರೆಗೂ ಹೆಸರು ಸೇರ್ಪಡೆಗೊಳಿಸಬಹುದು ಎಂದು ಹೇಳಿದರು.
ಮರಾಠಿ ಯಾದಿ:
18 ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯನ್ನು ಪ್ರಕಟಿಸುವುದರ ಜತೆಗೆ ನಿಪ್ಪಾಣಿ, ಚಿಕ್ಕೋಡಿ-ಸದಲಗಾ, ಬೆಳಗಾವಿ(ಉತ್ತರ), ಬೆಳಗಾವಿ(ಗ್ರಾಮೀಣ) ಮತ್ತು ಖಾನಾಪುರ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮರಾಠಿ ಭಾಷೆಯಲ್ಲೂ ಮತದಾರರ ಯಾದಿಯನ್ನು ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

19 ತಂಡಗಳ ರಚನೆ:
ಚುನಾವಣೆಯ ಸಿದ್ಧತೆಗಳನ್ನು ಯಶಸ್ವಿಯಾಗಿ ನಡೆಸಲು ಒಟ್ಟಾರೆ 19 ತಂಡಗಳನ್ನು ರಚಿಸಲಾಗಿದ್ದು, ಪ್ರತಿ ತಂಡಕ್ಕೂ ಜಿಲ್ಲಾ ಮಟ್ಟದ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ. ಎಲ್ಲ ತಂಡಗಳಿಗೂ ಅಗತ್ಯವಾಗಿರುವ ಸಹಾಯಕ ಸಿಬ್ಬಂದಿ ಒದಗಿಸಲಾಗಿದೆ.
ಜಿಲ್ಲೆಯಲ್ಲಿ 0ಟ್ಟು 350 ಸೆಕ್ಟರ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಮತಗಟ್ಟೆಗಳನ್ನು ಸಿದ್ಧಪಡಿಸುವುದು; ಮತಗಟ್ಟೆ ಸಿಬ್ಬಂದಿಯನ್ನು ಎಲ್ಲ ಸಾಮಗ್ರಿಗಳ ಜತೆಗೆ ಮತಗಟ್ಟೆಗೆ ತಲುಪಿಸುವುದು, ಮತದಾನಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸುವುದು; ನಂತರ ಮತಯಂತ್ರಗಳು ಹಾಗೂ ಮತಗಟ್ಟೆ ಸಿಬ್ಬಂದಿಯನ್ನು ವಾಪಸ್ಸು ತಾಲ್ಲೂಕು ಕೇಂದ್ರಕ್ಕೆ ತಲುಪಿಸಿ ಎಲ್ಲ ಮಾಹಿತಿಯನ್ನು ಆಡಳಿತಕ್ಕೆ ಒದಗಿಸುವುದು ಸೆಕ್ಟರ್ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಮಾದರಿ ನೀತಿ ಸಂಹಿತಿ ಜಾರಿಗೆ ಸಂಬಂಧಿಸಿದಂತೆ ವಿವಿಧ ತಂಡಗಳನ್ನು ನೇಮಿಸುವುದಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಅಂದಾಜು 40 ಸಾವಿರ ವಿಕಲಚೇತನ ಮತದಾರರು:
ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್ ಆರ್. ಅವರು, ಜಿಲ್ಲೆಯಲ್ಲಿ ಒಟ್ಟು 40 ಸಾವಿರ ವಿಕಲಚೇತನ ಮತದಾರರು ಇರಬಹುದು ಎಂದು ಅಂದಾಜಿಸಲಾಗಿದ್ದು, ಈಗಾಗಲೇ 22 ಸಾವಿರ ಜನರನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.
ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಮೂಲಕ ಪ್ರತಿ ವಿಧಾನಸಭಾ ಕ್ಷೇತ್ರದ ಮತಗಟ್ಟೆವಾರು ವಿಕಲಚೇತನ ಮತದಾರರನ್ನು ಗುರುತಿಸುವ ಕೆಲಸ ನಡೆದಿದೆ. ಮುಂದಿನ ಹತ್ತು ದಿನಗಳಲ್ಲಿ ಪ್ರತಿ ಮತಗಟ್ಟೆಯಲ್ಲಿರುವ ವಿಕಲಚೇತನ ಮತದಾರರನ್ನು ಗುರುತಿಸಲಾಗುವುದು ಎಂದರು.
ಚುನಾವಣೆ ಆಯೋಗದ ಆಶಯದಂತೆ ವಿಕಲಚೇತನ ಮತದಾರರು ಮತಗಟ್ಟೆಗೆ ಬಂದು ಮತ ಚಲಾಯಿಸಲು ಅಗತ್ಯವಿರುವ ಎಲ್ಲ ಸೌಕರ್ಯಗಳನ್ನು ಒದಗಿಸಲು ಕ್ರಮಕೈಗೊಳ್ಳಲಾಗುತ್ತಿದೆ. ವಿಕಲಚೇತನರ ಅನುಕೂಲಕ್ಕಾಗಿ ಮತಗಟ್ಟೆಗಳಲ್ಲಿ ರ್ಯಾಂಪ್ ವ್ಯವಸ್ಥೆ, ಶೌಚಾಲಯ ಮತ್ತಿತರ ಸೌಲಭ್ಯ ಒದಗಿಸಲಾಗುತ್ತಿದ್ದು, ಸರದಿಯಲ್ಲಿ ನಿಂತು ಮತ ಚಲಾಯಿಸುವುದರಿಂದ ಅವರಿಗೆ ವಿಶೇಷ ವಿನಾಯಿತಿ ಕೂಡ ನೀಡಲಾಗುವುದು ಎಂದು ರಾಮಚಂದ್ರನ್ ಹೇಳಿದರು.
ಇದೇ ಸಂದರ್ಭದಲ್ಲಿ ವಿವಿಪ್ಯಾಟ್ ಬಳಕೆಗೆ ಸಂಬಂಧಿಸಿದಂತೆ ಮತದಾರರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ವಿಶೇಷವಾಗಿ ರೂಪಿಸಲಾಗಿರುವ ಮಾಹಿತಿ ಪೋಸ್ಟರ್ ಅನ್ನು ಜಿಲ್ಲಾಧಿಕಾರಿ ಎಸ್.ಜಿಯಾವುಲ್ಲಾ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ರಾಮಚಂದ್ರನ್ ಅವರು ಬಿಡುಗಡೆಗೊಳಿಸಿದರು.
ಅಪರ ಜಿಲ್ಲಾಧಿಕಾರಿ ಡಾ.ಸುರೇಶ್ ಇಟ್ನಾಳ್ ಹಾಗೂ ಜಿಲ್ಲಾ ಪಂಚಾಯ್ತಿ ಮುಖ್ಯ ಲೆಕ್ಕಾಧಿಕಾರಿ ಶಂಕರಾನಂದ ಬನಶಂಕರಿ ಉಪಸ್ಥಿತರಿದ್ದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.