ಉತ್ತಮ ಸಮಾಜಕ್ಕಾಗಿ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮಹಿಳೆಯರಿಗೆ ಉನ್ನತ ಶಿಕ್ಷಣ ಅಗತ್ಯ : ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ

International Women's Day Women Need Higher Education: Deputy Commissioner S. Jiaullah

0

ಬೆಳಗಾವಿ:(news belgaum) ಸಮಾಜದ ಎಲ್ಲ ರಂಗಗಳಲ್ಲಿ ಮಹಿಳೆಯರು ಸ್ಥಾನ ಪಡೆದುಕೊಳ್ಳಬೇಕಾದರೆ ಪುರುಷರಂತೆ ಮಹಿಳೆಯರಿಗೂ ಸಮಾನ ಶಿಕ್ಷಣ ನೀಡುವುದು ಅವಶ್ಯವಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಎಸ್. ಜಿಯಾವುಲ್ಲಾ ಅವರು ಅಭಿಪ್ರಾಯ ಪಟ್ಟರು.
ನಗರದ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ಬುದÀುವಾರ (ಮಾ. 13) ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ ವತಿಯಿಂದ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ವಿವಿಧ ಸಂಘಗಳ ಆಶ್ರಯದಲ್ಲಿ ಆಯೋಜಿಸಿದ್ದ, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹೆಣ್ಣು ಮಕ್ಕಳನ್ನು ಹೆಚ್ಚಾಗಿ ಓದಿಸುವದರಿಂದ ಆರ್ಥಿಕ ಹೊರೆಯಾಗುತ್ತದೆ ಎಂಬ ಭಾವನೆಯಿಂದ ಗ್ರಾಮೀಣ ಪ್ರದೇಶಗಳಲ್ಲಿ ಹೆಣ್ಣು ಮಕ್ಕಳಿಗೆ ಹೆಚ್ಚಿನ ಶಿಕ್ಷಣ ನೀಡುವುದಿಲ್ಲ, ಇದರಿಂದ ಸರ್ಕಾರದ ಮೀಸಲಾತಿಗಳಿಂದ ಮಹಿಳೆಯರು ವಂಚಿತರಾಗುತ್ತಿದ್ದಾರೆ ಎಂದು ಹೇಳಿದರು.
ಸರ್ಕಾರದಿಂದ ಸಿಗುವ ಮಹಿಳಾ ಮೀಸಲಾತಿಯ ಸದುಪಯೋಗವಾಗಬೇಕಾದರೆ ಮಹಿಳೆಯರಿಗೆ ಉನ್ನತ ಶಿಕ್ಷಣ ಅಗತ್ಯವಾಗಿದೆ. ಎಲ್ಲಿಯವರೆಗೆ ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ಸಿಗುವುದಿಲ್ಲವೋ ಅಲ್ಲಿಯವರೆಗೆ ಸಮಾಜದಲ್ಲಿ ಮಹಿಳೆಯರಿಗೆ ಸಮಾನ ಸ್ಥಾನ-ಮಾನ ಸಿಗುವುದಿಲ್ಲ ಎಂದು ಹೇಳಿದರು.
News Belgaum-ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮಹಿಳೆಯರಿಗೆ ಉನ್ನತ ಶಿಕ್ಷಣ ಅಗತ್ಯ : ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ 1ಒಂದು ಮನೆಯ ಸಂಪೂರ್ಣ ಜವಾಬ್ದಾರಿ ಹೆಣ್ಣಿನ ಮೇಲೆ ಇರುವಾಗ ಅವಳಿಗೆ ಶಿಕ್ಷಣ ಅಗತ್ಯವಿದೆ. ಪೋಷಕರು ಮಕ್ಕಳ ಮೇಲೆ ಹೆಚ್ಚಿನ ನಂಬಿಕೆ ಇಡಬೇಕು ಇದರಿಂದ ಅವರು ಸಮಾಜದಲ್ಲಿ ಉತ್ತಮ ನಾಗರೀಕರಾಗಿ ಬೆಳೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಪೊಲೀಸ್ ಆಯುಕ್ತರಾದ ಡಾ. ಡಿ.ಸಿ.ರಾಜಪ್ಪ ಅವರು ಮಾತನಾಡಿ, ಅಂಗನವಾಡಿಯಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಇಂದು ಮಹಿಳೆಯರು ಉತ್ತಮ ಸಾಧನೆ ಮಾಡುತ್ತಿದ್ದಾರೆ. ಇಂದಿನ ಸ್ಪರ್ಧಾತ್ಮಕ ಯುಗಕ್ಕೆ ತಂಕ್ಕಂತೆ ಮಹಿಳೆಯರು ವೇಗವಾಗಿ ಎಲ್ಲ ರಂಗಳಲ್ಲಯೂ ಸಾಧನೆ ಮಾಡುತ್ತಿದ್ದಾರೆ ಎಂದು ಹೇಳಿದರು.
ಗ್ರಾಮೀಣ ಮಟ್ಟದಲ್ಲಿ ಮಹಿಳೆಯರಿಗೆ ಇನ್ನೂ ಹೆಚ್ಚಿನ ಶಿಕ್ಷಣ ಸಿಗಬೇಕು. ಜಿಲ್ಲೆಯ ಎಲ್ಲ ಮಹಿಳೆಯರು ತಮ್ಮ ತಮ್ಮ ಮನೆಯಲ್ಲಿ ಕಡ್ಡಾಯವಾಗಿ ಶೌಚಾಲಯ ನಿರ್ಮಿಸಿಕೊಳ್ಳಬೇಕು. ಮತ್ತು ನಿಮ್ಮ ಕುಟುಂಬದ ಸದಸ್ಯರು ದ್ವಿಚಕ್ರ ವಾಹನ ಹೊಂದಿದ್ದರೆ ಕಡ್ಡಾಯವಾಗಿ ಹೆಲ್ಮೆಟ್ ಬಳಸುವಂತೆ ತಮ್ಮ ಕುಟುಂಬದವರಿಗೆ ಒತ್ತಾಯಿಸಬೇಕೆಂದು ಮಹಿಳೆಯರಿಗೆ ಮನವಿ ಮಾಡಿಕೊಂಡರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮಚಂದ್ರನ್ ಆರ್. ಅವರು ಮಾತನಾಡಿ, ಶೌಚಾಲಯ ನಿರ್ಮಾಣಕ್ಕಾಗಿ ಸರ್ಕಾರದಿಂದ ಸಾಕಷ್ಟು ಯೋಜನೆಗಳು ಇದ್ದರೂ ಜಿಲ್ಲೆಯಲ್ಲಿ ಇನ್ನೂ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗಿ ಬಯಲು ಶೌಚಕ್ಕೆ ಹೋಗುತ್ತಿರುವುದು ದುರ್ದೈವದ ಸಂಗತಿ ಎಂದು ಹೇಳಿದರು.
ಜಿಲ್ಲೆಯಲ್ಲಿ ಇಲ್ಲಿಯವರೆಗೆ 92 ಸಾವಿರ ಮನೆಗಳಲ್ಲಿ ಶೌಚಾಲಯ ನಿರ್ಮಿಸಲಾಗಿದೆ. ಜಿಲ್ಲೆಯನ್ನು ಬಯಲು ಶೌಚಮುಕ್ತವನ್ನಾಗಿಸಲು ಮಹಿಳೆಯರ ಸಹಕಾರ ಅಗತ್ಯವಾಗಿದೆ ಎಂದು ಹೇಳಿದರು.
ಬರುವ ವಿಧಾನ ಸಭಾ ಚುನಾವಣೆಯಲ್ಲಿ ವಿವಿಪ್ಯಾಟ್ ಎಂಬ ಹೊಸ ಮತಯಂತ್ರವನ್ನು ಬಳಸಲಾಗುತ್ತದೆ. ಇದರ ಬಗ್ಗೆ ಸಾರ್ವಜನಿಕರು ಯಾವುದೇ ಸಂದೇಹವಿಲ್ಲದೇ ತಮ್ಮ ಮತ ಚಲಾಯಿಸಬೇಕೆಂದು ತಿಳಿಸಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವ್ಹಿಲ್ ನ್ಯಾಯಾಧೀಶರಾದ ಕಿರಣ ಕಿಣೆ ಅವರು ಮಹಿಳೆ ಮತ್ತು ಕಾನೂನು ಹಾಗೂ ನ್ಯಾಯವಾದಿಗಳಾದ ಶ್ರೀಮತಿ ಮಂದಕಿನಿ ಅಪ್ಪುಗೋಳ ಅವರು ಕೌಟುಂಬಿಕ ಹಿಂಸೆಯಿಂದ ರಕ್ಷಣಾ ಕಾಯ್ದೆ ಹಾಗೂ ವರದಕ್ಷಣೆ ಕಾಯ್ದೆಯ ಕುರಿತು ಉಪನ್ಯಾಸ ನೀಡಿದರು.

ರಾಣೆ ಚನ್ನಮ್ಮಾ ವಿಶ್ವವಿದ್ಯಾಲಯದ ಪ್ರಸಾರಂಗ ಸಹಾಯಕ ನಿರ್ದೇಶಕಿಯಾದ ಶ್ರೀಮತಿ ಡಾ. ಮೈತ್ರೇಯಣೆ ಗದಿಗೆಪ್ಪಗೌಡರ, ಮಹಾನಗರ ಪಾಲಿಕೆಯ ಮಹಾಪೌರರಾದ ಬಸವರಾಜ ಜಿಕ್ಕಲದಿನ್ನಿ ಅವರು ವೇದಿಕೆಯ ಮೇಲೆ ಉಪಸ್ಥಿತರಿದ್ದರು.
ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಎಂ. ಮುನಿರಾಜು ಅವರು ಸ್ವಾಗತಿಸಿದರು.
ಮಾತೃಪೂರ್ಣ ಯೋಜನೆಯಲ್ಲಿ ಸಾಧನೆ ಮಾಡಿದ ಅಂಗನವಾಡಿ ಸಹಾಯಕಿಯರಿಗೆ ಹಾಗೂ ವಿವಿಧ ಸ್ತ್ರೀಶಕ್ತಿ ಸಂಘಗಳ ಕಾರ್ಯಕರ್ತೆಯರಿಗೆ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಸಾವಿರಾರು ಮಹಿಳೆಯರು ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.
ಕಾರ್ಯಕ್ರಮದ ನಂತರ ಭರತನಾಟ್ಯ ಸೇರಿದಂತೆ ವಿವಿಧ ಮನರಂಜನೆ ಕಾರ್ಯಕ್ರಮಗಳು ಜರುಗಿದವು.International Women’s Day Women Need Higher Education: Deputy Commissioner S. Jiaullah.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

 

Leave A Reply

 Click this button or press Ctrl+G to toggle between Kannada and English

Your email address will not be published.